ಮಂಗಳೂರು-ಬೆಂಗಳೂರು ಹೆದ್ದಾರಿಗೆ ಮಣ್ಣು ಕುಸಿತ; ಸಂಚಾರ ‌ಬಂದ್

Date:

ಕಡಬ ತಾಲ್ಲೂಕಿನ ಕೌಕ್ರಾಡಿ ಗ್ರಾಮದ ಮಣ್ಣಗುಂಡಿಯಲ್ಲಿ ಗುಡ್ಡ ಕುಸಿದಿದ್ದರಿಂದ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ

ಇಂದು ಬೆಳಗಿನ ಜಾವ 3 ರಿಂದ 4 ಗಂಟೆಗೆ ಹೆದ್ದಾರಿಗೆ ಮಣ್ಣು ಬಿದ್ದು ಮಂಗಳೂರು-ಬೆಂಗಳೂರು ಹೆದ್ದಾರಿ ಬಂದ್ ಆಗಿದೆ. ಇದುವರೆಗೂ ಮಣ್ಣು ತೆರವು ಕಾರ್ಯ ಆರಂಭವಾಗಿಲ್ಲ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಪದೇ ಪದೇ ಹೆದ್ದಾರಿಗೆ ಮಣ್ಣು ಬೀಳುತ್ತಿದ್ದರೂ, ಯಾವುದೇ ಶಾಶ್ವತ ಕ್ರಮ ಕೈಗೊಳ್ಳದಿರುವುದಕ್ಕೆ ಸಾರ್ವಜನಿಕರು, ವಾಹನ ಸವಾರರು ಆಕೋಶ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ: ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ದ.ಕ ಜಿಲ್ಲಾ ಸಮ್ಮೇಳನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ವಾಹನಗಳು ಮುಂದೆ ಹೋಗಲಾಗದೆ, ಕಿಲೋಮೀಟರ್‌ ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿತ್ತು. ಕಳೆದ ವಾರವೂ ಈ ಸ್ಥಳದಲ್ಲಿ ಮಣ್ಣು ಕುಸಿದು ಮೂರು ಗಂಟೆ ಕಾಲ ಹೆದ್ದಾರಿ ಬಂದ್ ಆಗಿತ್ತು. ಮಳೆಗಾಲ ಆರಂಭಗೊಂಡ ಮೇಲೆ ಐದನೇ ಬಾರಿ ಮಣ್ಣು ಕುಸಿದಿದೆ.

ಪ್ರತಿಬಾರಿಯೂ ಮಳೆಗಾಲ ಪ್ರಾರಂಭವಾದರೇ ಇದೇ ಸಮಸ್ಯೆ ಎದುರಾಗುತ್ತದೆ. ಅಧಿಕಾರಿಗಳು ನೆಪಕ್ಕೆ ಸ್ಥಳಕ್ಕೆ ಭೇಟಿ ನೀಡಿ ಎಲ್ಲವೂ ಸರಿ ಪಡಿಸುತ್ತೇವೆ ಎಂದು ಭರವಸೆ ನೀಡುತ್ತಾರೆ. ಆದರೆ ಯಾವುದು ಸರಿಯಾಗುವುದಿಲ್ಲ ಎಂದು ಸ್ಥಳೀಯರೊಬ್ಬರು ದೂರಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...