ನಕಲಿ ಸುದ್ದಿ ತಡೆಗಟ್ಟಲು ಗೃಹ ಇಲಾಖೆಯಿಂದ ‌ಕಾನೂನು ಜಾರಿ: ಡಿ ಕೆ ಶಿವಕುಮಾರ್

Date:

  • ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಪೋಸ್ಟ್​ ಮಾಡುವವರ ವಿರುದ್ಧ ಕ್ರಮ
  • ಬೆಂಗಳೂರಿನಲ್ಲಿ ವೈಫೈ ಜೋನ್ ಮಾಡಲು ಚಿಂತನೆ: ಡಿಸಿಎಂ ಡಿಕೆ ಶಿವಕುಮಾರ್

ರಾಜ್ಯದಲ್ಲಿ ಫೇಕ್ ನ್ಯೂಸ್ ತಡೆಗಟ್ಟಲು ಕಾನೂನು ತರುತ್ತಿದ್ದೇವೆ. ಕೆಲವು ನಾಯಕರ ಬಗ್ಗೆ ತೇಜೋವಧೆ ಮಾಡಲಾಗುತ್ತಿದೆ. ನಕಲಿ ಸುದ್ದಿ ತಡೆಗಟ್ಟಲು ಗೃಹ ಇಲಾಖೆಯಿಂದ ‌ಕಾನೂನು ಜಾರಿ ಮಾಡಲಾಗುತ್ತದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ಹೇಳಿದರು.

ಬೆಂಗಳೂರಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು, “ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಪೋಸ್ಟ್​ ಮಾಡುವವರ ವಿರುದ್ಧ ರಾಜ್ಯದಲ್ಲಿ ಕಾಂಗ್ರೆಸ್​ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ” ಎಂದು ಎಚ್ಚರಿಸಿದರು.

ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಭೇಟಿ ಮಾಡಿದ ವಿಚಾರವಾಗಿ ಪ್ರತಿಕ್ರಿಯಿಸಿ, “ಪ್ರಣಾಳಿಕೆಯಲ್ಲಿ ಭರವಸೆ ಕೊಟ್ಟ ವಿಚಾರವಾಗಿ ಚರ್ಚೆ ಮಾಡಿದ್ದೇವೆ. ಬೆಂಗಳೂರಿನ ಒಂದಷ್ಟು ಕಾರ್ಯಕ್ರಮಗಳ ಬಗ್ಗೆ ಚರ್ಚೆ ‌ಮಾಡಿದ್ದೇವೆ. ಬೆಂಗಳೂರಿನಲ್ಲಿ ವೈಫೈ ಜೋನ್ ಮಾಡುತ್ತೇವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? 100 ದಿನಗಳ ಆಡಳಿತದಲ್ಲಿ ನುಡಿದಂತೆ ನಡೆದಿದ್ದೇವೆ: ಸಿಎಂ ಸಿದ್ದರಾಮಯ್ಯ

“ಬಿಜೆಪಿ ಸರ್ಕಾರದ ಅವಧಿಯಲ್ಲಿ 40% ಕಮಿಷನ್, ಕೊರೊನಾ ಹಗರಣಗಳನ್ನು ತನಿಖೆಗೆ ವಹಿಸಿದ ವಿಚಾರವಾಗಿ ಮಾತನಾಡಿದ ಅವರು 40% ಕಮಿಷನ್, ಕೊರೊನಾ ಹಗರಣ ಬಗ್ಗೆ ತನಿಖೆಗೆ ವಹಿಸಿದ್ದೇವೆ. ಈ ಕುರಿತು ನಾನು ಮಾತನಾಡಲ್ಲ, ಬೇರೆಯವರು ಮಾತನಾಡುತ್ತಾರೆ” ಎಂದರು.

ಸುಳ್ಳು ಸುದ್ದಿ ಹರಡುವ ವಿಚಾರವಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಪ್ರತಿಕ್ರಿಯಿಸಿ, “ನಗರದ ಪ್ರತಿಯೊಂದು ಪೊಲೀಸ್ ಠಾಣೆಯಲ್ಲಿ ಇಬ್ಬರು ಎಕ್ಸ್ ಪರ್ಟ್​ಗಳ ನೇಮಕ ಮಾಡಲಾಗಿದೆ. ತಾಂತ್ರಿಕ ಪರಿಣತಿ ಇರುವಂತಹವರನ್ನು ನೇಮಕ ಮಾಡಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ. ಇಬ್ಬರು ಸಿಬ್ಬಂದಿಯನ್ನ ಗುರುತಿಸಿ ಸಾಮಾಜಿಕ ಜಾಲತಾಣದ ಮೇಲೆ ಕಣ್ಣಿಡಲು ಸೂಚಿಸಲಾಗಿದೆ” ಎಂದು ತಿಳಿಸಿದ್ದಾರೆ.

WhatsApp Image 2023 04 01 at 3.53.40 PM e1680350106945
+ posts

ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್‌1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.

ಪೋಸ್ಟ್ ಹಂಚಿಕೊಳ್ಳಿ:

ಶರಣು ಚಕ್ರಸಾಲಿ
ಶರಣು ಚಕ್ರಸಾಲಿ
ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್‌1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...