ಉಪರಾಷ್ಟ್ರಪತಿ ಧನಕರ್ ಹೇಳಿಕೆಯನ್ನು ಖಂಡಿಸಿದ ವಕೀಲರ ಒಕ್ಕೂಟ

Date:

“ಒಕ್ಕೂಟ ವ್ಯವಸ್ಥೆಯಲ್ಲಿ ಕಾನೂನುಗಳನ್ನು ರೂಪಿಸುವ ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ ರಾಜ್ಯ ಸರ್ಕಾರಗಳ ಅಧಿಕಾರವನ್ನು ಸಂಕುಚಿತಗೊಳಿಸುವ ನಿಟ್ಟಿನಲ್ಲಿ ರಾಜ್ಯಪಾಲರಾಗಲಿ, ರಾಷ್ಟ್ರಪತಿಗಳಾಗಲಿ ನಡೆದುಕೊಳ್ಳಬಾರದು. ರಾಜಕೀಯ ಕಾರಣಗಳಿಗಾಗಿ ಚುನಾಯಿತ ಸರ್ಕಾರದ ಕಾನೂನುಗಳಿಗೆ ಅನುಮೋದನೆ ಕೊಡಲು ನಿರಾಕರಿಸಬಾರದು ಅಥವಾ ತಡೆಹಿಡಿಯಬಾರದು” ಎಂದು AILU ಬೆಂಗಳೂರು‌ ಜಿಲ್ಲಾಧ್ಯಕ್ಷರಾದ ವೆಂಕಟೇಶ್ ಗೌಡ ಹೇಳಿದ್ದಾರೆ.

ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರ ಹೇಳಿಕೆ, ಸುಪ್ರಿಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಹಾಗೂ ಇನ್ನಿತರ ನ್ಯಾಯಮೂರ್ತಿಗಳ ಕುರಿತು ಬಿಜೆಪಿ ಸಂಸದ ನಿಶಿಕಾಂತ್ ದುಬೆಯವರ ಬೆದರಿಕೆ ಮತ್ತು ಹಾಸ್ಯಾಸ್ಪದ ಹೇಳಿಕೆ,
ಹಾಗೂ ಕೇಂದ್ರ ಸರ್ಕಾರದ ಭದ್ರತಾ ಲೋಪದಿಂದ ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕರ ದಾಳಿಯನ್ನ ಖಂಡಿಸಿ
ಶುಕ್ರವಾರ ಅಖಿಲ ಭಾರತ ವಕೀಲರ ಒಕ್ಕೂಟ(AILU) ನೇತೃತ್ವದಲ್ಲಿ ಸಿಟಿ ಸಿವಿಲ್ ಕೋರ್ಟ್ ಮುಂಭಾಗದಲ್ಲಿ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

“ನಮಗೆ ಸ್ವಾತಂತ್ರ್ಯ ಬಂದು 75 ವರ್ಷ ಆಯಿತು. ಈ 75 ವರ್ಷದ ಹಿಂದೆಯೂ ಕೂಡ ವಕೀಲರು ಪ್ರತಿಭಟನೆ ಮಾಡಿದ್ದಾರೆ. ಸ್ವಾತಂತ್ರ್ಯ ಬಂದ ನಂತರವೂ ವಕೀಲರು ನ್ಯಾಯಾಂಗ ಮತ್ತು ಸಂವಿಧಾನದ ರಕ್ಷಣೆಗೆ ಪ್ರತಿಭಟನೆ ಮಾಡುತ್ತಿದ್ದೇವೆ. ಸುಪ್ರೀಂ ಕೋರ್ಟ್‌ 142 ಆರ್ಟಿಕಲ್‌ನಿಂದ ಬಂದಿರುವ ತೀರ್ಪನ್ನು ಧನಕರ್ ವಿರೋಧಿಸಿದ್ದಾರೆ. ಇದು ‘ನ್ಯೂಕ್ಲಿಯರ್ ಮಿಸೈಲ್’ ಎಂದು ಹೇಳಿದ್ದಾರೆ. ಇವರ ಈ ಹೇಳಿಕೆ ಪ್ರಜಾಪ್ರಭುತ್ವದ ವಿರುದ್ಧವಾಗಿದೆ. ಸುಪ್ರೀಂ ಕೋರ್ಟ್‌ಗೆ ಧನಕರ್ ಗೌರವ ಕೊಡದೇ ಇದ್ದಾಗ ಪ್ರಜಾಪ್ರಭುತ್ವಕ್ಕೆ ಹೇಗೆ ಗೌರವ ಕೊಡುತ್ತಾರೆ? ಧನಕರ್ ಅವರು ಪ್ರಜಾಪ್ರಭುತ್ವಕ್ಕೆ ಗೌರವ ಕೊಡಬೇಕು. ನ್ಯಾಯಾಂಗಕ್ಕೆ ಗೌರವ ಕೊಡಬೇಕು. ಈಗಾಗಲೇ ಶಾಸಕಾಂಗ, ಕಾರ್ಯಾಂಗ ಕೆಟ್ಟು ಹೋಗಿದೆ. ಈಗ ಉಳಿದಿರುವುದು ಒಂದೇ ನ್ಯಾಯಂಗ ಅದು ಕೂಡ ಕೆಟ್ಟು ಹೋಗುವ ದಾರಿಯಲ್ಲಿದೆ. ರಾಜ್ಯಾಪಾಲರು ರಾಷ್ಟ್ರಪತಿಗಳು ಒಂದು ಸೈಡ್ ಆಗಿದ್ದಾರೆ. ಇದು ಕಾನೂನು ವಿರುದ್ಧವಾಗಿದೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇತ್ತೀಚೆಗೆ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ‌ ಹಿನ್ನೆಲೆಯಲ್ಲಿ‌ ಉಪರಾಷ್ಟಪತಿಗಳಾದ ಜಗದೀಪ್ ಧನಕರ್ ಹಾಗೂ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು ನೀಡಿದ ಹೇಳಿಕೆಯು ಸುಪ್ರೀಂ‌ಕೋರ್ಟ್ ಗೆ ಬೆದರಿಕೆ ಹಾಕುವಂತಿದೆ, ಇದು ತೀವ್ರ ಖಂಡನೀ‌ಯ” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕಾಶ್ಮೀರದ ಬಂಡಿಪೋರಾದಲ್ಲಿ ಸೇನಾ ಕಾರ್ಯಾಚರಣೆ: ಎಲ್ಇಟಿಯ ಮುಖ್ಯ ಕಮಾಂಡರ್‌ ಹತ್ಯೆ

“ಸ್ವತಂತ್ರ ನ್ಯಾಯಾಂಗ ವ್ಯವಸ್ಥೆಗೆ ಬೆದರಿಕೆ ಹಾಕಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ‌ತೆಗೆದುಕೊಳ್ಳಬೇಕು. ಸಂವಿಧಾನದ ಉಲ್ಲಂಘನೆಯಾದಾಗ ಅದರ ರಕ್ಷಣೆಗೆ ಸುಪ್ರೀಂ ಕೋರ್ಟ್ ನಿಂತಿರುವುದನ್ನು ಸಹಿಸಲಾಗದೇ ಸುಪ್ರೀಂ ಕೋರ್ಟ್‌ನ ತೀರ್ಪಿನ‌ ಬಗ್ಗೆ ಅನಗತ್ಯ ಹೇಳಿಕೆ ನೀಡಿರುವುದು ಖಂಡನೀಯ” ಎಂದು ಎ ಐ ಎಲ್‌ಯು ಜಿಲ್ಲಾ ಉಪಾಧ್ಯಕ್ಷರಾದ ಶರಣ ಬಸವ‌ಮರದ್ ಕುಟುಕಿದ್ದಾರೆ.

“ಕೇಂದ್ರ ಸರ್ಕಾರದ ಭದ್ರತಾ ಲೋಪದಿಂದ ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರ ಕೃತ್ಯ ಖಂಡನೀಯ. ಕೇಂದ್ರ ಸರ್ಕಾರದ ನಿರ್ಲಕ್ಷ್ಯದಿಂದಾಗಿ 28 ಜನ ಅಮಾಯಕ ಜನರು ಮಡಿದಿದ್ದಾರೆ. ಬಿಹಾರದಲ್ಲಿ ಚುನಾವಣೆ ನಡೆಯುತ್ತಿದೆ. ಇದಕ್ಕೂ ಮುನ್ನ ಈ ದಾಳಿ ನಡೆದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಬಿಜೆಪಿ ಮತ್ತು ಕೆಲ ಮಾಧ್ಯಮಗಳು ಭಯೋತ್ಪಾದನಾ ಕೃತ್ಯವನ್ನು ಒಂದು ಸಮುದಾಯದ‌ ವಿರುದ್ಧ ದ್ವೇಷ ಬಿತ್ತಲು ಬಳಸುತ್ತಿರುವುದು ಅಪಾಯಕಾರಿ ಬೆಳವಣಿಗೆ‌ಯಾಗಿದೆ. ಇಂಥವರ ವಿರುದ್ಧ ಸೂಕ್ತ ಕ್ರಮ‌ಕೈಗೊಳ್ಳಬೇಕು” ಎಂದು ಎಐಎಲ್‌ಯು‌ ಜಿಲ್ಲಾ‌ ಸಹ‌ಕಾರ್ಯದರ್ಶಿ ಹುಳ್ಳಿ ಉಮೇಶ್ ಆಗ್ರಹಿಸಿದ್ದಾರ.

ಪ್ರತಿಭಟನೆಯಲ್ಲಿ ಎಐಎಲ್‌ಯು ಜಿಲ್ಲಾ ಕಾರ್ಯದರ್ಶಿಗಳಾದ ಶಿವಾರೆಡ್ಡಿ, ಖಜಾಂಚಿಗಳಾದ ಶಿವಶಂಕರಪ್ಪ, ರಾಜ್ಯ ಮುಖಂಡರಾದ ರಾಮಚಂದ್ರ ರೆಡ್ಡಿ, ಮುರಳೀಧರ ಪೇಶ್ವ, ಎಐಎಲ್‌ಯು ಮುಖಂಡರಾದ ಎ.ಎಸ್.ಶಿವಾರೆಡ್ಡಿ, ರಂಗಸ್ವಾಮಿ, ರಾಮಲಿಂಗಾರೆಡ್ಡಿ, ರೂಪ.ಬಿ.ಎಂ, ಮುಂತಾದವರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...