ಉಡುಪಿ | ಚುನಾವಣೆ ಸಮಯದಲ್ಲಿ ಮಾತ್ರ ರಾಜಕೀಯ, ಅಭಿವೃದ್ಧಿಗಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Date:

ಚುನಾವಣೆ ಸಂದರ್ಭದಲ್ಲಿ ಮಾತ್ರ ರಾಜಕೀಯ ಮಾಡೋಣ, ಉಳಿದ ಸಂದರ್ಭದಲ್ಲಿ ಅಭಿವೃದ್ಧಿ ಕಡೆಗಷ್ಟೆ ಗಮನ ಹರಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಬೈಂದೂರು ಉತ್ಸವದಲ್ಲಿ ಮಾತನಾಡಿದ ಸಚಿವರು, ಅಭಿವೃದ್ಧಿ ವಿಚಾರದಲ್ಲಿ ನಾನು ಎಂದಿಗೂ ರಾಜಕಾರಣ ಮಾಡಿಲ್ಲ, ಮಾಡುವುದೂ ಇಲ್ಲ, ಅಭಿವೃದ್ಧಿಗಷ್ಟೇ ಆದ್ಯತೆ ನೀಡುತ್ತೇನೆ ಎಂದರು.

ಮಹಾತ್ಮ ಗಾಂಧಿಯವರ ಅವರ ಪರಿಕಲ್ಪನೆಯಂತೆ ಶಾಸಕ ಗುರುರಾಜ್ ಗಂಟಿಹೊಳೆ ಅವರು ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ. ಗ್ರಾಮ ಸ್ವರಾಜ್, ಮಹಿಳೆಯರ ಅಭಿವೃದ್ಧಿಗೆ ಒತ್ತು ನೀಡುತ್ತಿದ್ದಾರೆ. ಮಹಾತ್ಮ ಗಾಂಧಿ ಹೇಳಿದಂತೆ, ಭಾರತದ ಹಳ್ಳಿಗಳ ದೇಶ, ಹಳ್ಳಿಗಳು ಅಭಿವೃದ್ಧಿಯಾಗಬೇಕು, ಮಹಿಳೆಯರು ಸಬಲೀಕರಣ ಆಗಬೇಕು ಎಂದು ಸಚಿವರು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1009301899

ನಾನು ಕಾಂಗ್ರೆಸ್ ಪಕ್ಷದ ಶಿಸ್ತಿನ ಸಿಪಾಯಿ. ನನಗೆ ಕಾಂಗ್ರೆಸ್ ಪಕ್ಷ ಅಂದರೆ ತಂದೆ ತಾಯಿ‌ ಇದ್ದಂತೆ. ಶಾಸಕ‌ ಗುರುರಾಜ್ ಗಂಟಿಹೊಳೆ ಅವರು ಕೂಡ ಅವರ ಪಕ್ಷಕ್ಕೆ ನಿಷ್ಟಾವಂತ.‌ ಆದರೆ, ನಾವು ಜನಪ್ರತಿನಿಧಿಗಳಾಗಿ ಸಾಮಾಜಿಕ ದೃಷ್ಟಿಯಿಂದ ನೋಡಬೇಕು, ಸಾಮಾಜಿಕ ಕಾಳಜಿ, ಬದ್ಧತೆ ಕೆಲಸ ಮಾಡಬೇಕು. ಚುನಾವಣೆ ಸಂದರ್ಭದಲ್ಲಿ ರಾಜಕೀಯ ಮಾಡಿ, ಉಳಿದ ಸಮಯದಲ್ಲಿ ಅಭಿವೃದ್ಧಿಗೆ ಗಮನಹರಿಸಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಸಿದ್ದರಾಮಯ್ಯ ಅವರ ನೇತೃತ್ವದ ನಮ್ಮ ಸರ್ಕಾರ, ಮಹಿಳೆಯರ ಸಬಲೀಕರಣಕ್ಕಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಗೃಹಲಕ್ಷ್ಮಿ, ಶಕ್ತಿ, ಗೃಹ ಜ್ಯೋತಿ ಯೋಜನೆಗಳಿಂದ ಮಹಿಳೆಯರಿಗೆ ಸಾಕಷ್ಟು ಪ್ರಯೋಜನ ಆಗಿದೆ. ನಮ್ಮ ಇಲಾಖೆಯಿಂದ ಅನೇಕ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಗೃಹಲಕ್ಷ್ಮಿ ಯೋಜನೆಯ ಮುಂದುವರಿದ ಭಾಗವಾಗಿ ಗೃಹಲಕ್ಷ್ಮಿ ಸಹಕಾರಿ ಬ್ಯಾಂಕ್, ಗೃಹಲಕ್ಷ್ಮಿ ಡಿಜಿಟಲ್ ಆ್ಯಪ್ ಶೀಘ್ರವೆ ಜಾರಿಗೆ ಬರಲಿವೆ ಎಂದರು.

ನಿಸ್ವಾರ್ಥತೆಯಿಂದ ಎಲ್ಲರೂ ಉತ್ತಮ ಕೆಲಸ ಮಾಡಬೇಕು. ದೇವರು ನಮಗೆ ವರನೂ ಕೊಡೊದಿಲ್ಲ, ಶಾಪನೂ ಕೊಡೊದಿಲ್ಲ.‌ಕೆಲಸ ಮಾಡಲು ಅವಕಾಶ ಕೊಡುತ್ತಾನೆ. ಮಾಡುವ ಕೆಲಸವನ್ನು ಜನರಿಗೆ ಸಾರ್ಥಕತೆಯಿಂದ ಮಾಡಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು. ‌

1009301896

ಈ ವೇಳೆ ಶಾಸಕ ಗುರುರಾಜ್ ಗಂಟಿಹೊಳೆ, ಆಳ್ವಾ ಶಿಕ್ಷಣ ಸಂಸ್ಥೆಗಳು ‌ಅಧ್ಯಕ್ಷ‌ ಮೋಹನ್ ಆಳ್ವ, ಜಿಲ್ಲಾಧಿಕಾರಿ ಟಿ.ಕೆ.ಸ್ವರೂಪ, ಜಿಲ್ಲಾ ಪಂಚಾಯತ್ ಸಿಇಓ ಪ್ರತೀಕ್ ಬಾಯಲ್, ಎಎಸ್ಪಿ ಸುಧಾಕರ್, ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.

  • ಪ್ರತಿಭಟನಾ ಸ್ಥಳಕ್ಕೆ ಭೇಟಿ

ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಗೆ ಬರುವ ಗ್ರಾಮೀಣ ಪ್ರದೇಶವನ್ನು ಪಂಚಾಯತ್ ಆಗಿ ರಚನೆ ಮಾಡುವಂತೆ ಆಗ್ರಹಿಸಿ ತಾಲೂಕು ಕಚೇರಿ ಆವರಣದಲ್ಲಿ ಬೈಂದೂರು ತಾಲೂಕು ರೈತ ಸಂಘದ ವತಿಯಿಂದ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸ್ಥಳಕ್ಕೆ ಸಚಿವರು ಭೇಟಿ ನೀಡಿ ಮನವಿ ಸ್ವೀಕರಿಸಿದರು. ರೈತರಿಗೆ ಅನ್ಯಾಯ ಆಗದಂತೆ ಕ್ರಮಕೈಗೊಳ್ಳಲಾಗುವುದು, ಈ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗುವುದು ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...