ಉಡುಪಿ | ದೇಶದಲ್ಲಿಯೇ ಹೆಚ್ಚು ಆದಾಯ ಹೊಂದಿರುವ ರಾಜ್ಯ ಕರ್ನಾಟಕ – ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Date:

2024 -25 ನೇ ಆರ್ಥಿಕ ವರ್ಷದಲ್ಲಿ ನಮ್ಮ ರಾಜ್ಯವು ದೇಶದಲ್ಲಿಯೇ ಅತೀ ಹೆಚ್ಚು ತಲಾ ಆದಾಯ ಹೊಂದಿರುವ ರಾಜ್ಯವಾಗಿ ಹೊರಹೊಮ್ಮಿದೆ. ರಾಜ್ಯ ಸರ್ಕಾರವು ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸುವ ದೃಷ್ಠಿಯಿಂದ ವಿತ್ತೀಯ ನಿರ್ವಹಣೆಯಲ್ಲಿ ತನ್ನ ಕಾರ್ಯಕ್ಷಮತೆಯನ್ನು ತೋರಿಸಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಅಜ್ಜರಕಾಡಿನಲ್ಲಿರುವ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ 79ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನೇರವೇರಿಸಿ, ಸ್ವಾತಂತ್ರ್ಯೋತ್ಸವ ಸಂದೇಶ ನೀಡಿದ ಸಚಿವರು, ಜಿ.ಎಸ್.ಟಿ ಸಂಗ್ರಹದಲ್ಲಿ ಕರ್ನಾಟಕ ರಾಜ್ಯ ದೇಶದಲ್ಲಿಯೇ ಎರಡನೇ ಸ್ಥಾನದಲ್ಲಿರುವುದು ರಾಜ್ಯದ ಅರ್ಥ ವ್ಯವಸ್ಥೆ ಆರೋಗ್ಯವಂತವಾಗಿದೆ ಎಂಬುದಕ್ಕೆ ಸ್ಪಷ್ಟ ಉದಾಹರಣೆಯಾಗಿದೆ ಎಂದರು.

ಸ್ವಾತಂತ್ರ್ಯ ಹೋರಾಟದ ನಾಯಕತ್ವವನ್ನು ವಹಿಸಿ, ಜಗತ್ತಿನ ಚರಿತ್ರೆಯಲ್ಲಿ ಮೊದಲ ಬಾರಿಗೆ ಅಹಿಂಸೆಯ ಮೂಲಕ ಸ್ವಾತಂತ್ರ್ಯವನ್ನು ತಂದುಕೊಟ್ಟ ಮಹಾತ್ಮಾ ಗಾಂಧೀಜಿಯವರು ಉಡುಪಿಗೆ ಆಗಮಿಸಿ, ಅಜ್ಜರಕಾಡಿನಲ್ಲಿ ದೇಶ ಪ್ರೇಮಿಗಳ ಹೋರಾಟಕ್ಕೆ ಕರೆ ನೀಡಿದ್ದು ಮರೆಯಲಾಗದ ಘಟನೆ. ಅದರ ಸ್ಮಾರಕವೂ ಈ ನೆಲದಲ್ಲಿ ಇಂದು ಚಿರಸ್ಥಾಯಿಯಾಗಿದೆ. ಜಾತಿ-ಮತ ಭೇಧವಿಲ್ಲದೇ ಉಡುಪಿ ಜಿಲ್ಲೆಯ ಜನರು ಸ್ವಾತಂತ್ರ್ಯ ಹೋರಾಟದಲ್ಲಿ ಗಾಂಧೀಜಿಯಂತಹ ನಾಯಕರ ಕರೆಗೆ ಓಗೊಟ್ಟು ಭಾಗವಹಿಸಿರುವುದು ಸದಾ ಮರೆಯಲಾಗದ ಐತಿಹಾಸಿಕ ಘಟನೆ ಎಂದು ಸಚಿವರು ಸ್ಮರಿಸದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಲ್ಲಾ ಮಾಸಿಕ ಪಿಂಚಣಿ ಯೋಜನೆಗಳನ್ನು ಡಿಬಿಟಿ ವ್ಯಾಪ್ತಿಗೆ ತರುವುದರೊಂದಿಗೆ ಪ್ರತಿ ಮಾಹೆ ರಾಜ್ಯದಲ್ಲಿ ಅಂದಾಜು 82.57 ಲಕ್ಷ ಫಲಾನುಭವಿಗಳಿಗೆ ಆಧಾರ್ ಆಧಾರಿತ ಪಿಂಚಣಿ ವ್ಯವಸ್ಥೆ ಯೋಜನೆಯಡಿ ನೇರವಾಗಿ ಜಮೆ ಮಾಡಲಾಗುತ್ತಿದೆ. ನೈಸರ್ಗಿಕ ವಿಕೋಪಗಳಿಂದ ತತ್ತರಿಸಿದ ರೈತರಿಗೆ ಕ್ಷಿಪ್ರ, ಪಾರದರ್ಶಕ ಹಾಗೂ ನಿಖರವಾದ ಪರಿಹಾರವನ್ನು ನೀಡುವ ನಿಟ್ಟಿನಲ್ಲಿ ಪರಿಹಾರ ತಂತ್ರಾಂಶವನ್ನು ಉನ್ನತೀಕರಿಸಿ, ಯಾವುದೇ ಮಧ್ಯವರ್ತಿಗಳಿಲ್ಲದೇ ನೇರವಾಗಿ ಅವರ ಬ್ಯಾಂಕ್ ಖಾತೆಗಳಿಗೆ ಪರಿಹಾರವನ್ನು ಜಮಾ ಮಾಡಲಾಗುತ್ತಿದೆ ಎಂದು ಹೇಳಿದರು.

ಕರ್ನಾಟಕ ಭೂದಾಖಲೆಗಳು ದಶಕಗಳಿಂದ ಕಗ್ಗಂಟಿನಲ್ಲಿದ್ದು, ಜನರು ತಾಲೂಕು ಕಚೇರಿಗೆ ಅಲೆಯಬೇಕಿತ್ತು. ಇದಕ್ಕೆ ಪರಿಹಾರವಾಗಿ ಎಲ್ಲಾ ದಾಖಲೆಗಳನ್ನು ಡಿಜಿಟಲೀಕರಣ ಮಾಡುವುದರೊಂದಿಗೆ ಸುರಕ್ಷಿತಗೊಳಿಸಲಾಗುತ್ತಿದೆ.
ಚುನಾವಣೆಯ ಸಂದರ್ಭದಲ್ಲಿ ಘೋಷಿಸಿದ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಮುಂದುವರೆಸಿಕೊಂಡು ಹೋಗುತ್ತಿರುವ ನಮ್ಮ ಸರ್ಕಾರದ ಕಾರ್ಯವೈಖರಿಗೆ ದೇಶ-ವಿದೇಶಗಳ ತಜ್ಞರಿಂದ ಮೆಚ್ಚುಗೆಯ ಮಾತುಗಳು ಕೇಳಿ ಬರುತ್ತಿವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.

ಬಡತನ ನಿವಾರಣೆಗೆ ನೇರ ನಗದು ನೀಡುವ ಗೃಹಲಕ್ಷ್ಮೀ ಯೋಜನೆ ಅಡಿಯಲ್ಲಿ ರಾಜ್ಯದಾದ್ಯಂತ 1.23 ಕೋಟಿ ಫಲಾನುಭವಿಗಳಿಗೆ ಈವರೆಗೆ 47,400 ಕೋಟಿ ರೂ. ಗಳಷ್ಟು ಜಮಾ ಮಾಡಲಾಗಿದೆ. ಜಿಲ್ಲೆಯಲ್ಲಿ 2,25,131 ಫಲಾನುಭವಿಗಳಿಗೆ 870.83 ಕೋಟಿಯಷ್ಟು ಹಣ ಸಂದಾಯ ಮಾಡಲಾಗಿದೆ. ಅಕ್ಕ ಕೋ-ಆಪರೇಟಿವ್ ಸೊಸೈಟಿಗಳನ್ನು ಸ್ಥಾಪಿಸುವುದರೊಂದಿಗೆ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳನ್ನು ಸದಸ್ಯರನ್ನಾಗಿಸಲಾಗುತ್ತಿದೆ ಎಂದು ಹೇಳಿದರು.

ಶಾಲಾ ಮಕ್ಕಳಿಗೆ ವರ್ಷಕ್ಕೊಮ್ಮೆ ಇಲಾಖೆಯಿಂದಲೇ ಆರೋಗ್ಯ ತಪಾಸಣೆ ನಡೆಸಲು ತೀರ್ಮಾನಿಸಲಾಗಿದೆ.
ಅಂಗನವಾಡಿಗಳಲ್ಲಿ ಎಲ್.ಕೆ.ಜಿ, ಯು.ಕೆ.ಜಿ ನಡೆಸಲು 10 ಸಾವಿರ ಅಂಗನವಾಡಿ ಕೇಂದ್ರಗಳನ್ನು ಗುರುತಿಸಲಾಗಿದ್ದು, 4 ರಿಂದ 5 ಸಾವಿರ ಅಂಗನವಾಡಿಗಳಲ್ಲಿ ಸದ್ಯದಲ್ಲಿಯೇ ತರಗತಿಗಳನ್ನು ಆರಂಭಿಸಲಾಗುವುದು. ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಎಲ್ಲ ಕೇಂದ್ರಗಳಿಗೆ ವಿಸ್ತರಿಸಲಾಗುವುದು ಎಂದರು.

1006702097

ಪ್ರಸಕ್ತ ಸಾಲಿನಲ್ಲಿ ಪಶ್ಚಿಮ ವಾಹಿನಿ ಯೋಜನೆಯಡಿ ಜಿಲ್ಲೆಯಲ್ಲಿ 151 ಕೋಟಿ ವೆಚ್ಚದಲ್ಲಿ ಉಪ್ಪು ನೀರು ತಡೆ ಆಣೆಕಟ್ಟು ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗುತ್ತಿದ್ದು, ಇದರಿಂದ ಸುಮಾರು 192.52 ಹೆಕ್ಟೇರ್ ರೈತರ ಕೃಷಿ ಭೂಮಿಗೆ ನೀರಾವರಿ ಸೌಲಭ್ಯ ಒದಗಲಿದೆ. ಉಡುಪಿ, ದಕ್ಷಿಣ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಕೋಮು ಹಿಂಸೆ ನಿಗ್ರಹಕ್ಕಾಗಿ ವಿಶೇಷ ಕಾರ್ಯಪಡೆ ರಚನೆ ಮಾಡಲಾಗಿದೆ.
ಉಡುಪಿ ನಗರಸಭೆಯನ್ನು ಮಹಾನಗರ ಪಾಲಿಕೆಯನ್ನಾಗಿ ಮೇಲ್ದರ್ಜೆಗೇರಿಸುವ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಿದ್ದು, ಪರಿಶೀಲನಾ ಹಂತದಲ್ಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಜಿಲ್ಲೆಯಲ್ಲಿ ಈಗಾಗಲೇ 4 ಇಂದಿರಾ ಕ್ಯಾಂಟೀನ್ ‌ಗಳು ಬಡವರ ಹಸಿವನ್ನು ನೀಗಿಸುತ್ತಿದ್ದು, ಬೈಂದೂರು ಪಟ್ಟಣ ಪಂಚಾಯತ್ ಹಾಗೂ ಕಾಪು ಪುರಸಭಾ ವ್ಯಾಪ್ತಿಯಲ್ಲಿ 2 ಹೊಸದಾಗಿ ಇಂದಿರಾ ಕ್ಯಾಂಟೀನ್‌ಳಿಗೆ ಕಳೆದ ಜೂನ್ ಮಾಹೆಯಲ್ಲಿ ಚಾಲನೆ ನೀಡಿದ್ದೇನೆ. ಜಿಲ್ಲೆಯಲ್ಲಿ ಪ್ರವಾಸೋದ್ಯಮ ಬಹುಮುಖ್ಯ ಕ್ಷೇತ್ರವನ್ನಾಗಿ ರೂಪಿಸಲು ವಿಶೇಷ ಮುತುವರ್ಜಿ ವಹಿಸಲಾಗಿದೆ. ಜಿಲ್ಲೆಯಲ್ಲಿ ಹೊಸ ಕೈಗಾರಿಕಾ ಪ್ರದೇಶಗಳ ಸ್ಥಾಪನೆಗೆ ಶಿವಪುರ, ಕೆರೆಬೆಟ್ಟು, ನಿಟ್ಟೆ, ಉಪ್ಪೂರು, ಸಾಂತೂರು ಹಾಗೂ ಎಲ್ಲೂರು ಗ್ರಾಮಗಳಲ್ಲಿ ಒಟ್ಟು 1207.34 ಎಕ್ರೆ ಜಮೀನನ್ನು ಗುರುತಿಸಲಾಗಿದ್ದು, ಇವು ಪ್ರಗತಿಯ ಹಂತದಲ್ಲಿವೆ ಎಂದರು.

1006702076
  • ವಿದ್ಯಾರ್ಥಿಗಳನ್ನು ಅಭಿನಂದಿಸಿದ ಸಚಿವರು
    ಎಸ್ಎಸ್ಎಲ್ಸಿ‌ ಹಾಗೂ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಶೇಕಡ 90ಕ್ಕಿಂತ ಹೆಚ್ಚು ಅಂಕ ಪಡೆದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ‘ಮೌಲಾನಾ ಅಬ್ದುಲ್ ಕಲಾಂ ಅಜಾದ್ ಪ್ರತಿಭಾ ಪುರಸ್ಕಾರ’ ನೀಡಿ ಸಚಿವರು ಗೌರವಿಸಿದರು. ‌
  • ಸಾಂಸ್ಕೃತಿಕ ಕಾರ್ಯಕ್ರಮ ವೀಕ್ಷಿಸಿದ ಸಚಿವರು
    ಶಾಲಾ,‌ ಕಾಲೇಜು ವಿದ್ಯಾರ್ಥಿಗಳು ನಡೆಸಿಕೊಟ್ಟ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವೀಕ್ಷಿಸಿದರು. ಸುಮಾರು 30 ನಿಮಿಷಗಳ ಕಾಲ ನಡೆದ ವಿದ್ಯಾರ್ಥಿಗಳು ವಿವಿಧ ದೇಶಭಕ್ತಿ ಹಾಡುಗಳಿಗೆ ನೃತ್ಯ ಮಾಡಿದರು. ಬಳಿಕ ಪಥ ಸಂಚಲನ ಹಾಗೂ ಸಾಂಸ್ಕ್ರತಿಕ ಕಾರ್ಯಕ್ರಮಗಳಲ್ಲಿ ವಿಜೇತರಾದ ಶಾಲಾ ತಂಡಗಳಿಗೆ ಸಚಿವರು ಬಹುಮಾನ ವಿತರಿಸಿದರು.

ಈ ವೇಳೆ ಶಾಸಕ ಯಶ್ ಪಾಲ್ ಸುವರ್ಣ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ದಿನಕರ್ ಹೇರೂರು, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕ್ ಬಾಯಲ್, ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಅಪರ ಜಿಲ್ಲಾಧಿಕಾರಿ ಅಭಿದ್ ಗದ್ಯಾಳ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಶಾಲಾ ಮಕ್ಕಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...