ಉಡುಪಿ | ಸರ್ಕಾರಿ ಆಸ್ಪತ್ರೆಗಳಲ್ಲಿ ಹೆರಿಗೆ ಪ್ರಮಾಣ ಹೆಚ್ಚಿಸಲು ಕ್ರಮ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Date:

ಸರ್ಕಾರದ ಯೋಜನೆಗಳು ಜನ ಸಾಮಾನ್ಯರಿಗೆ ತಲುಪಬೇಕೆಂದರೆ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕೆಲಸ ಮಾಡಬೇಕು. ಆಗಷ್ಟೇ ಸರ್ಕಾರಕ್ಕೆ ಒಳ್ಳೆಯ ಹೆಸರು ಬರುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಜಿಲ್ಲಾ ಪಂಚಾಯತ್ ಆವರಣದಲ್ಲಿ ಶುಕ್ರವಾರ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಮಾತನಾಡಿದ ಸಚಿವರು, ಅಧಿಕಾರಿಗಳು ಬದ್ಧತೆಯಿಂದ ರೈತರ ಸಮಸ್ಯೆಗಳನ್ನು ಬಗೆಹರಿಸಲು ಸೂಚನೆ ನೀಡಿದರು.

ಅತಿವೃಷ್ಟಿಯಿಂದ ಹಾನಿಗೊಳಗಾದ ರೈತರಿಗೆ ಪರಿಹಾರ ನೀಡಲು ತಯಾರಿ ಮಾಡಲಾಗುತ್ತದೆ. ಇದಕ್ಕೆ ರಾಜ್ಯ ಸರ್ಕಾರ 8000 ಕೋಟಿ ರೂಪಾಯಿ ಅನುದಾನವನ್ನು ನೀಡುತ್ತಿದೆ‌. ಇದೊಂದು ವಿಶೇಷ ಪ್ರಕರಣ ಎಂದು ಪರಿಗಣಿಸಿ ಪರಿಹಾರ ನೀಡಲು ತೀರ್ಮಾನಿಸಲಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಾರಾಹಿ ನೀರಾವರಿ ಯೋಜನೆಗೆ ರೈತರ ಜಮೀನನ್ನು ಸ್ವಾಧೀನಪಡಿಸಿಕೊಂಡಿದ್ದು, ಈವರೆಗೂ ರೈತರಿಗೆ ಸರ್ಕಾರದಿಂದ ಪರಿಹಾರ ನೀಡಿರುವುದಿಲ್ಲ, ಈ ಕುರಿತು ಸರ್ಕಾರದಿಂದ ಹಣ ಬಿಡುಗಡೆಗೊಳಿಸಲು ಪ್ರಯತ್ನಿಸಲಾಗುವುದು. ಈ ಯೋಜನೆಯಲ್ಲಿ ಕೆಲವು ಜಮೀನುಗಳು ಡೀಮ್ಡ್ ಫಾರೆಸ್ಟ್ ಹಾಗೂ ಮೀಸಲು ಅರಣ್ಯ ಪ್ರದೇಶದಲ್ಲಿ ಹಾದು ಹೋಗುತ್ತಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯ ಅನುಮತಿ ನೀಡುವಂತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಸಾರ್ವಜನಿಕರು ವಾಸದ ಮನೆ ಅಥವಾ ಕಟ್ಟಡ ಕಟ್ಟಲು ಬೇಡಿಕೆ ಇರುವ ಕೆಂಪು ಕಲ್ಲು ಗಣಿಗಾರಿಕೆಗೆ ಪಟ್ಟಾ ಲ್ಯಾಂಡ್ ನಲ್ಲಿ 3A ನಲ್ಲಿ ಅನುಮತಿ ನೀಡಿದರೂ‌ ಸಹ ಅರಣ್ಯ ಇಲಾಖೆಯಿಂದ ಆಕ್ಷೇಪಣೆ ಮಾಡುತ್ತಿದ್ದು, ಈ ಬಗ್ಗೆ ಜಿಲ್ಲಾಧಿಕಾರಿಗಳು ಶೀಘ್ರದಲ್ಲೇ ಅರಣ್ಯ ಇಲಾಖೆ ಅಧಿಕಾರಿಗಳಿಗೆ ನೋಟಿಸ್ ಕೊಟ್ಟು ಕ್ರಮ ವಹಿಸಬೇಕು ಎಂದ ಸಚಿವರು, ಇದಕ್ಕಾಗಿ ಮೂರು ದಿನಗಳ ಗಡುವು ನೀಡಿದರು.

ಪ್ರಧಾನ ಮಂತ್ರಿ ಸಿಂಚಾಯಿ ಯೋಜನೆಯಡಿ ಸಣ್ಣ ಪ್ರಮಾಣದ ಚೆಕ್ ಡ್ಯಾಂಗಳನ್ನು ನಿರ್ಮಾಣ ಕೈಗೆತ್ತಿಕೊಳ್ಳಲಾಗಿದ್ದು, ಈ ಚೆಕ್ ಡ್ಯಾಂಗಳಲ್ಲಿ ನೀರು ನಿಲ್ಲದ ಸ್ಥಿತಿಯಿದೆ. ಈ ಚೆಕ್ ಡ್ಯಾಂಗಳ ನಿರ್ಮಾಣಕ್ಕೆ ನಕ್ಷೆ ಅವೈಜ್ಞಾನಿಕವಾಗಿದ್ದು, ಅನುದಾನದ ಬಳಕೆಯೂ‌ ಪೂರ್ಣ ಪ್ರಮಾಣದಲ್ಲಿ ಆಗಿಲ್ಲ, ಎಂಬ ದೂರುಗಳು ಕೇಳಿ ಬರುತ್ತಿವೆ, ಈ ಬಗ್ಗೆ ಜಿಪಂ‌ ಸಿಇಒ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕೆಂದು ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಕೈಗೊಂಡಿರುವ ಬಂದರು ಅಭಿವೃದ್ಧಿ ಕಾಮಗಾರಿಗಳನ್ನು ಆದ್ಯತೆಯ ಮೇಲೆ ನಿಗದಿತ ಅವಧಿಯಲ್ಲಿ ಪೂರ್ಣ ಗೊಳಿಸಬೇಕು. ಕೆಲವು ನಿರ್ಮಾಣ ಕಾರ್ಯಗಳಿಗೆ ಸಿಆರ್ ಝಡ್ ನ ಅನುಮತಿಯ ಅಗತ್ಯವಿದೆ, ಅದನ್ನು ಪಡೆಯಲು ಅನುಕೂಲ ಆಗುವಂತೆ ರಾಜ್ಯ ಮಟ್ಟದ CRZ ಕಮಿಟಿ ರಚಿಸಬೇಕಿದ್ದು, ಈಗಾಗಲೇ ಪ್ರಸ್ತಾವನೆ ಕೇಂದ್ರ ಸರ್ಕಾರದ ಮುಂದಿದೆ, ಸಮಿತಿಯನ್ನು ತ್ವರಿತವಾಗಿ ರಚಿಸುವಂತೆ ನೋಡಿಕೊಳ್ಳಬೇಕು ಎಂದರು.‌

1007933115

ಜಿಲ್ಲೆಯಲ್ಲಿ ಕಡಲ ಕೊರೆತ ಉಂಟಾಗುತ್ತಿದ್ದು, ಇದನ್ನು ಗಂಭೀರವಾಗಿ ತೆಗೆದುಕೊಂಡು ವೈಜ್ಞಾನಿಕವಾಗಿ ಶಾಶ್ವತ ಪರಿಹಾರ ಕಂಡುಕೊಳ್ಳಲು ಜಿಲ್ಲಾಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.

ಸೂಕ್ತವಾಗಿ ಹಾಸ್ಟೆಲ್ ನಿರ್ವಹಣೆಗೆ ಕ್ರಮ

ಜಿಲ್ಲೆಗೆ ವಿದ್ಯಾಭ್ಯಾಸಕ್ಕೆ ಹೊರ ಜಿಲ್ಲೆಗಳಿಂದ ಅದರಲ್ಲೂ ಉತ್ತರ ಕರ್ನಾಟಕದಿಂದ ವಿದ್ಯಾರ್ಥಿಗಳು ಬರುತ್ತಿದ್ದಾರೆ, ಶಾಲಾ ದಾಖಲಾತಿ ಒಂದು ತಿಂಗಳಾದರೂ ಹಾಸ್ಟೆಲ್ ಸೌಲಭ್ಯ ಸಿಗದೆ ತೊಂದರೆ ಉಂಟಾಗುತ್ತಿದೆ. ಈ‌ ಬಗ್ಗೆ ಕ್ರಮ ವಹಿಸಿ ಸಮಸ್ಯೆ ಉಂಟಾಗದಂತೆ ನೋಡಿಕೊಳ್ಳಬೇಕು. ತಾಲೂಕು ಕೇಂದ್ರಗಳಲ್ಲಿ ಸೂಕ್ತವಾಗಿ ಹಾಸ್ಟೆಲ್ ನಿರ್ವಹಣೆ ಮಾಡಬೇಕು ಎಂದರು.

ಸರ್ಕಾರಿ ಆಸ್ಪತ್ರೆಗಳಲ್ಲಿ ಹೆರಿಗೆ ಪ್ರಮಾಣ ಹೆಚ್ಚಿಸಲು ಕ್ರಮ
ಸರ್ಕಾರ ಜನ ಸಾಮಾನ್ಯರಿಗೆ ಉತ್ತಮ ಆರೋಗ್ಯ ಸೇವೆಗಳನ್ನು ನೀಡಬೇಕು, ಸರ್ಕಾರ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ. ಉತ್ತಮ ಸೇವೆಯನ್ನು ನೀಡಬೇಕು, ಹೆರಿಗೆ ತಜ್ಞರ ಕೊರತೆಯಿಂದ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ಹೆರಿಗೆ ಪ್ರಮಾಣವು ಕಡಿಮೆ ಆಗುತ್ತಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಹೆರಿಗೆ ಪ್ರಮಾಣ ಹೆಚ್ಚಿಸುವಂತೆ ಸಚಿವರು ಆದೇಶಿಸಿದರು.

1007932967

ಈ ವೇಳೆ ಶಾಸಕರಾದ ಸುನೀಲ್ ಕುಮಾರ್, ಯಶ್ ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ,‌ ಗುರುರಾಜ್ ಗಂಟಿಹೊಳೆ, ಕಿರಣ್ ಕುಮಾರ್ ಕೊಡ್ಗಿ, ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್. ಭೋಜೇಗೌಡ, ಮಂಜುನಾಥ್ ಭಂಡಾರಿ, ಡಾ.ಧನಂಜಯ್ ಸರ್ಜಿ, ಜಿಲ್ಲಾ ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾಧಿಕಾರಿ ‌ಟಿ.ಕೆ.ಸ್ವರೂಪ, ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕ್ ಬಾಯಲ್, ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...