ಉಡುಪಿ | ಮೊಸರಲ್ಲಿ ಕಲ್ಲು ಹುಡುಕುವುದೇ ಬಿಜೆಪಿಗರ ಕೆಲಸ – ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Date:

ವಸತಿ ಯೋಜನೆಯಲ್ಲಿ ಅಲ್ಪಸಂಖ್ಯಾತರಿಗೆ ಶೇಕಡ 5ರಷ್ಟು ಏರಿಕೆ ಮಾಡಿದ್ದು ಕೇಂದ್ರ ಸರ್ಕಾರ. ರಾಜ್ಯ ಸರ್ಕಾರ ಅದಕ್ಕೆ ಒಪ್ಪಿಗೆ ಸೂಚಿಸಿದೆಯಷ್ಟೇ. ಈ ವಿಷಯದಲ್ಲಿ ಬಿಜೆಪಿ ನಾಯಕರು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಕಿಡಿ ಕಾರಿದರು‌.

ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿದ ಸಚಿವರು, ರಾಜಕಾರಣ ಮಾಡಲು ಬೇರೆ ವಿಚಾರ ಉಳಿದಿಲ್ಲ. ಮೊದಲು ಗ್ಯಾರಂಟಿ ಯೋಜನೆಗಳನ್ನು ಟೀಕೆ ಮಾಡಿದರು. ಗ್ಯಾರಂಟಿ ಯೋಜನೆಗಳು ಯಶಸ್ವಿ ಆಗುವುದಿಲ್ಲ ಎಂದರು. ನಾವು 136 ಸೀಟು ಗೆದ್ದರೂ ಆರು ತಿಂಗಳು ಸರ್ಕಾರ ಉಳಿಯಲ್ಲ ಎಂದರು, ಜನರ ಭಾವನೆಗಳ ಜೊತೆ ಬಿಜೆಪಿ ಆಟವಾಡುತ್ತದೆ. ಮಾತನಾಡಲು ಅವರಿಗೆ ಬೇರೇನೂ ಉಳಿದಿಲ್ಲ ಎಂದು ದೂರಿದರು.

ಮುಂಜಾಗ್ರತಾ ಕ್ರಮ ಕೈಗೊಳ್ಳಲು ಸೂಚನೆ
ಈ ವರ್ಷ ವಾಡಿಕೆಗಿಂತ ಹೆಚ್ಚಿನ ಮಳೆಯಾಗುವ ಲಕ್ಷಣ ಇದೆ.‌ ಹೀಗಾಗಿ ಮಳೆ ಅವಾಂತರ ನಿಯಂತ್ರಿಸಲು ಮುಂಜಾಗ್ರತಾ ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ. ಯಾವುದೇ ಪ್ರಮಾಣದಲ್ಲಿ ಮಳೆ ಬಂದರೂ ನಾವು ಸಿದ್ಧವಾಗಿದ್ದೇವೆ ಎಂದು ಸಚಿವರು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
  • ಸೂಲಿಬೆಲೆ ಸುಳ್ಳಿನ ಚಕ್ರವರ್ತಿ
    ಕುಂದಾಪುರದಲ್ಲಿ ಚಕ್ರವರ್ತಿ ಸೂಲಿಬೆಲೆ ಉಪನ್ಯಾಸಕ್ಕೆ ಎನ್ಎಸ್ ಯುಐ ಅಕ್ಷೇಪ ವ್ಯಕ್ತಪಡಿಸಿರುವ ಕುರಿತು ಪ್ರತಿಕ್ರಿಯಿಸಿದ ಸಚಿವರು, ಚಕ್ರವರ್ತಿ ಸೂಲಿಬೆಲೆ ಸುಳ್ಳಿನ ಚಕ್ರವರ್ತಿ. ಬಾಯಿ ತೆರೆದರೆ ರಾಮಾಯಣ, ಭಗವದ್ಗೀತೆ, ಮಹಾಭಾರತ ಹೇಳುತ್ತಾರೆ. ಆದರೆ ಯಾವ ಪ್ರಮಾಣದಲ್ಲಿ ಸುಳ್ಳು ಹೇಳುತ್ತಾರೆ ಅನ್ನೋದು ಇಡೀ ಕರ್ನಾಟಕಕ್ಕೆ ಗೊತ್ತು ಎಂದರು.

ಕಪ್ಪಗಿರುವುದನ್ನು ಬೆಳ್ಳಗೆ ಮಾಡುವುದರಲ್ಲಿ, ಬೆಳ್ಳಗೆ ಇರುವುದನ್ನು ಕಪ್ಪು ಮಾಡುವುದರಲ್ಲಿ ನಿಸ್ಸೀಮರು. ವಾಕ್ ಸ್ವಾತಂತ್ರ್ಯ ಸೇರಿದಂತೆ ಎಲ್ಲಾ ರೀತಿಯ ಸ್ವಾತಂತ್ರ್ಯವನ್ನು ಕಾಂಗ್ರೆಸ್ ಪಕ್ಷ ಕೊಟ್ಟಿದೆ. ಇಡೀ ದೇಶದ ಇತಿಹಾಸದಲ್ಲಿ ಸಂವಿಧಾನವನ್ನು ಎತ್ತಿ ಹಿಡಿದ ಪಕ್ಷ ಕಾಂಗ್ರೆಸ್ ಎಂದು ಸಚಿವರು ಹೇಳಿದರು.

ನಾವು ಚಕ್ರವರ್ತಿ ಸೂಲಿಬೆಲೆ ಅವರಿಂದ ಪಾಠ ಕೇಳಬೇಕಾಗಿಲ್ಲ. ಮೂರು ದಿನ ಉಡುಪಿ ಜಿಲ್ಲೆಯಲ್ಲಿ ಸೂಲಿಬೆಲೆ ಇರುವ ವಿಚಾರ ಪೊಲೀಸ್ ವರಿಷ್ಠಾಧಿಕಾರಿಗಳಿಂದ ತಿಳಿಯಿತು. ಖಂಡಿತವಾಗಿ ಸೂಲಿಬೆಲೆ ತಮ್ಮ ಪ್ರವಾಸ ಮಾಡಬಹುದು. ದ್ವೇಷದ ಭಾಷಣ, ಸುಳ್ಳು ಬಿತ್ತುವ ಕೆಲಸ, ವಿಷ ಬೀಜ ಬಿತ್ತುವ ಕೆಲಸ ಮಾಡದಿರಲಿ. ಯಾಕೆಂದರೆ ಉಡುಪಿ ಶಾಂತಿ ಪ್ರಿಯರ ಜಿಲ್ಲೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

  • ಬಿಜೆಪಿ ಶಾಸಕರ ಆಕ್ಷೇಪಕ್ಕೆ ಸಚಿವರ ತಿರುಗೇಟು

ಒಂದು ಕಡೆ ಬಿಜೆಪಿ ಕೋಮುವಾದವನ್ನು ಪ್ರಚೋದನೆ ಮಾಡುತ್ತದೆ. ನಾವು ಕೋಮು ಪ್ರಚೋದನೆ ಮಾಡುತ್ತಿಲ್ಲ ಎನ್ನುತ್ತಾರೆ. ಇನ್ನೊಂದು ಕಡೆ ಕೋಮು ನಿಗ್ರಹದಳಕ್ಕೆ ವಿರೋಧ ವ್ಯಕ್ತಪಡಿಸುತ್ತಾರೆ.‌ ಇಂಥ ಮನೋಭಾವನೆಯ ಬಿಜೆಪಿ ಶಾಸಕರನ್ನು ನೋಡಿದರೆ ಅವರ ಮನಸ್ಥಿತಿ ಏನು ಅನ್ನೋದು ಉಡುಪಿಯ ಜನತೆಗೆ ಅರ್ಥವಾಗುತ್ತೆ ಎಂದು ಸಚಿವರು ಜಿಲ್ಲೆಯ ಬಿಜೆಪಿ ಶಾಸಕರ ವಿರುದ್ಧ ಕಿಡಿ ಕಾರಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...