ಮೈಸೂರು | ಪ್ಲಾಸ್ಟಿಕ್ ಚೀಲ ಬಿಡಿ; ಬಟ್ಟೆ ಚೀಲ ಹಿಡಿ : ಜಾಗೃತಿ ಅಭಿಯಾನ

Date:

ಮೈಸೂರು ನಗರದ ದೇವರಾಜ ಮಾರ್ಕೆಟ್ ನಲ್ಲಿ ಶುಕ್ರವಾರ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಮೈಸೂರು ಮಹಾನಗರ ಪಾಲಿಕೆ, ಕೆ.ಎಂ.ಪಿ.ಕೆ ಚಾರಿಟೇಬಲ್ ಟ್ರಸ್ಟ್ ಹಾಗೂ ಜೀವದಾರ ರಕ್ತ ನಿಧಿ ಕೇಂದ್ರದ ವತಿಯಿಂದ ‘ ಪ್ಲಾಸ್ಟಿಕ್ ಬ್ಯಾಗ್ ಬಿಡಿ, ಬಟ್ಟೆ ಬ್ಯಾಗ್ ಹಿಡಿ ‘ ಎಂಬ ಜಾಗೃತಿ ಅಭಿಯಾನದ ಮೂಲಕ ಗ್ರಾಹಕರಿಗೆ ಹಾಗೂ ವ್ಯಾಪಾರಸ್ಥರಿಗೆ ಉಚಿತ ಬಟ್ಟೆ ಬ್ಯಾಗ್ ವಿತರಿಸಿ ಪ್ಲಾಸ್ಟಿಕ್ ನಿಂದ ಆಗುವ ಅನಾಹುತಗಳ ಬಗ್ಗೆ ಅರಿವು ಮೂಡಿಸಲಾಯಿತು.

ಪ್ಲಾಸ್ಟಿಕ್ ಮುಕ್ತ ದೇಶವನ್ನಾಗಿಸಲು ಮನೆಗೊಂದು ಮರ ಬೆಳೆಸುವ ಮೂಲಕ ಪ್ರತಿಯೊಬ್ಬರೂ ಪರಿಸರವನ್ನು ಉಳಿಸಿ, ಬೆಳೆಸಬೇಕು. ಪ್ಲಾಸ್ಟಿಕ್ ಮುಕ್ತ ಭಾರತ ಪ್ರತಿಯೊಬ್ಬರ ಕರ್ತವ್ಯವಾಗಲಿ, ಅಂಗಡಿ, ಮಾರುಕಟ್ಟೆಗೆ ತೆರಳುವಾಗ ಪ್ಲಾಸ್ಟಿಕ್ ಕವರ್ ಬದಲಾಗಿ ಪರಿಸರಸ್ನೇಹಿ ವಸ್ತುಗಳಿಂದ, ಬಟ್ಟೆಗಳಿಂದ ಮಾಡಿದ ಚೀಲಗಳನ್ನು ಬಳಸಬೇಕು, ಕಸದ ನಿರ್ವಹಣೆ ಮನೆಯಿಂದಲೇ ಆರಂಭವಾಗಬೇಕು, ಹಸಿ ಕಸ ಮತ್ತು ಒಣ ಕಸವನ್ನು ಪ್ರತ್ಯೇಕವಾಗಿ ಬೇರ್ಪಡಿಸುವ ಮೂಲಕ ಮಾಲಿನ್ಯವನ್ನು ತಡೆಯಬೇಕು. ನಾವು ನೆಟ್ಟ ಗಿಡವನ್ನು ಪೋಷಿಸುವ ಜವಾಬ್ದಾರಿ ನಮ್ಮ ಮೇಲಿದೆ ಎನ್ನುವುದು ಮರೆಯಬಾರದು. ಹತ್ತಿರದ ಸ್ಥಳಗಳಲ್ಲಿ ವಾಹನ ಬಿಟ್ಟು ನಡೆದುಕೊಂಡು ಹೋಗುವುದು ಹಾಗೂ ಬೈಸಿಕಲ್ ಬಳಕೆ ಮಾಡಬೇಕು ಎಂದು ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್ ಸಲಹೆ ನೀಡಿದರು.

ಮಾಜಿ ನಗರಪಾಲಿಕ ಸದಸ್ಯೆ ಪ್ರಮೀಳಾ ಭರತ್ ಮಾತನಾಡಿ ಪ್ಲಾಸ್ಟಿಕ್ ಬಳಕೆಯಿಂದ ಪರಿಸರಕ್ಕೆ ಧಕ್ಕೆಯಾಗುತ್ತಿದೆ. ವಿದ್ಯಾವಂತರೇ ಪ್ಲಾಸ್ಟಿಕ್‌ ಬಳಸುತ್ತಿದ್ದಾರೆ. ಪರಿಸರದ ಮಹತ್ವ ತಿಳಿದಿದ್ದರೂ ಅನಕ್ಷರಸ್ಥರ ರೀತಿಯಲ್ಲಿ ಪರಿಸರವನ್ನು ನಾಶ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪರಿಸರವನ್ನು ಕಾಪಾಡಿ, ಮುಂದಿನ ಪೀಳಿಗೆಗೆ ಕೊಡುಗೆಯಾಗಿ ನೀಡಬೇಕು. ಗಿಡ ಬೆಳೆಸಿ, ನಾಡು ಬೆಳೆಸಿ ఎంబ ಘೋಷಣೆ ವಾಸ್ತವದಲ್ಲಿ ಜಾರಿಯಾಗಬೇಕು. ನಾವು ಇರುವ ಜಾಗದ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಸುತ್ತಮುತ್ತ ಇರುವ ಜಾಗದಲ್ಲಿ ಹಸಿರು ಇರುವ ರೀತಿಯಲ್ಲಿ ನೋಡಿಕೊಳ್ಳುವುದು ನಮ್ಮ ಕರ್ತವ್ಯವಾಗಬೇಕು ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವಿಶೇಷ ವರದಿ ಓದಿದ್ದೀರಾ?ಮೈಸೂರು | ಶವಾಗಾರದಲ್ಲಿ ಕೆಲಸ ಮಾಡುವ ಏಕಮೇವ ಮಹಿಳೆ ರಾಜಮ್ಮ

ಅಭಿಯಾನದಲ್ಲಿ ಕೆ.ಎಂ.ಪಿ.ಕೆ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್, ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ರಾಜ್ಯ ಸಂಚಾಲಕ ರವಿಶಂಕರ್, ಎಸ್ ಎನ್ ರಾಜೇಶ್, ಚರಣ್, ಪರಿಸರ ಅಭಿಯಂತೆ ಮೈತ್ರಿ, ಹೆಲ್ತ್ ಇನ್ಸ್ಪೆಕ್ಟರ್ ಮಂಜು ಕುಮಾರ್ ಎಸ್, ಸೂಪರ್ ವೈಸರ್ ಗಳು , ದೇವರಾಜ ಮಾರ್ಕೆಟ್ ನ ಬೀದಿ ಬದಿ ವ್ಯಾಪಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...