ಸಾರ್ವಜನಿಕರಿಗೆ ಅನಗತ್ಯ ತೊಂದರೆ ನೀಡುವ ವರ್ತಕರ ವಿರುದ್ಧ ಈ ಕಾನೂನು ಕ್ರಮ : ಡಾ. ಎಂ. ಆರ್. ರವಿ

Date:

ಕೋಲಾರ:ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿನ ಯುದ್ಧದ ವಿದ್ಯಮಾನಗಳ ಹಿನ್ನೆಲೆಯಲ್ಲಿ ಜಿಲ್ಲೆಯ ಮಾರುಕಟ್ಟೆಯಲ್ಲಿ ಆಹಾರ ಪದಾರ್ಥಗಳು ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಅಥವಾ ಅಕ್ರಮ ದಾಸ್ತಾನು ಮಾಡುವುದು ಶಿಕ್ಷಾರ್ಹ ಅಪರಾಧವಾಗಿದ್ದು ಇಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಕೋಲಾರ ಜಿಲ್ಲಾಧಿಕಾರಿಗಳಾದ ಡಾ. ಎಂ. ಆರ್. ರವಿ ಅವರು ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಸಾರ್ವಜನಿಕರಿಗೆ ಅನಗತ್ಯ ತೊಂದರೆ ನೀಡುವ ವರ್ತಕರ ವಿರುದ್ಧ ಈ ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಅಗತ್ಯ ವಸ್ತುಗಳ ಕೃತಕ ಅಭಾವ ಸೃಷ್ಟಿಸಿದರೆ ಕ್ರಮ ಯುದ್ಧದ ನೆಪವೊಡ್ಡಿ ಅಡುಗೆ ಅನಿಲ (LPG), ಖಾದ್ಯ ತೈಲ, ಧಾನ್ಯಗಳು ಸೇರಿದಂತೆ ಯಾವುದೇ ಅಗತ್ಯ ವಸ್ತುಗಳನ್ನು ಅಕ್ರಮವಾಗಿ ದಾಸ್ತಾನು ಮಾಡುವುದು ಅಥವಾ ನಿಗದಿಗಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡುವುದು ಕಂಡುಬಂದಲ್ಲಿ ಅಗತ್ಯ ವಸ್ತುಗಳ ಕಾಯ್ದೆ 1955 (Essential Commodities Act, 1955) ರ ಅಡಿಯಲ್ಲಿ ಮೊಕದ್ದಮೆ ದಾಖಲಿಸಲಾಗುವುದು. ಜಿಲ್ಲೆಯಾದ್ಯಂತ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳು ನಿರಂತರವಾಗಿ ಗೋದಾಮುಗಳ ಮೇಲೆ ಸರಬರಾಜು ಮತ್ತು ವಿತರಣೆ ಕುರಿತು ನಿಗಾ ವಹಿಸಲಾಗುವುದು ಎಂದು ತಿಳಿಸಿದರು.

ಇತ್ತೀಚಿನ ದಿನಗಳಲ್ಲಿ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗಳು ಚುರುಕುಗೊಂಡಿದ್ದು, ರೈತರಿಗೆ ಬೇಕಾದ ರಸಗೊಬ್ಬರ, ಬಿತ್ತನೆ ಬೀಜ ಹಾಗೂ ಕೀಟನಾಶಕಗಳನ್ನು ಕಾಳಸಂತೆಯಲ್ಲಿ (Black Market) ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿರುವುದು ಜಿಲ್ಲಾಡಳಿತದ ಗಮನಕ್ಕೆ ಬಂದಿದೆ. ರೈತರಿಗೆ ನಿಗದಿತ ಬೆಲೆಗಿಂತ (MRP) ಹೆಚ್ಚಿನ ದರಕ್ಕೆ ಕೃಷಿ ಪರಿಕರ ಮಾರಾಟ ಮಾಡುವ ವರ್ತಕರ ಮಾರಾಟ ಪರವಾನಗಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಪಡಿಸಲಾಗುವುದು. ಇಂತಹ ಪ್ರಕರಣಗಳಲ್ಲಿ ತೊಡಗುವವರ ವಿರುದ್ಧ ರಸಗೊಬ್ಬರ ನಿಯಂತ್ರಣ ಆದೇಶ (Fertilizer Control Order) ಹಾಗೂ ಸಂಬಂಧಿತ ಕೃಷಿ ಕಾಯ್ದೆಗಳಡಿ ಕ್ರಿಮಿನಲ್ ಪ್ರಕರಣ ದಾಖಲಿಸಲು ಆಯಾ ತಾಲ್ಲೂಕು ತಹಶೀಲ್ದಾರ್ ಕಚೇರಿ ಅಥವಾ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರುಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಇದನ್ನು ಓದಿದ್ದೀರಾ..? ಕಾರು ಅಪಘಾತ ಪ್ರಾಂತ ರೈತ ಸಂಘದ ಟಿ.ಎಂ ವೆಂಕಟೇಶ್ ದುರ್ಮರಣ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಯಾವುದೇ ವರ್ತಕರು ಅಥವಾ ವಿತರಕರು ನಿಗದಿಗಿಂತ ಹೆಚ್ಚಿನ ದರ ವಸೂಲಿ ಮಾಡಿದಲ್ಲಿ ಅಥವಾ ಸರಕು ನೀಡಲು ನಿರಾಕರಿಸಿದಲ್ಲಿ ಸಾರ್ವಜನಿಕರು ಮತ್ತು ರೈತರು ತಕ್ಷಣವೇ ಹತ್ತಿರದ ತಹಶೀಲ್ದಾರ್ ಕಚೇರಿ ಅಥವಾ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರ ಗಮನಕ್ಕೆ ತರಬೇಕು. ಜಿಲ್ಲೆಯಲ್ಲಿ ಯಾವುದೇ ವಸ್ತುವಿನ ಕೊರತೆಯಾಗದಂತೆ ಜಿಲ್ಲಾಡಳಿತ ಮುನ್ನೆಚ್ಚರಿಕೆ ವಹಿಸಿದೆ ಸಾರ್ವಜನಿಕರು ಆತಂಕ ಪಡಬೇಕಿಲ್ಲ ಎಂದು ಜಿಲ್ಲಾಧಿಕಾರಿಗಳು ಭರವಸೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...