ಬೀದರ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚಿರತೆ ಕಾಣಿಸಿಕೊಂಡಿರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಬೀದರ ಜಿಲ್ಲಾ ಉಪ ಸಂರಕ್ಷಣಾಧಿಕಾರಿ ಆಶಿಷ್ ರೆಡ್ಡಿ ಅವರು ತಿಳಿಸಿದ್ದಾರೆ.
ಈ ಬಗ್ಗೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ಡಂಗೂರ ಸಾರುವ ಮೂಲಕ ಎಚ್ಚರಿಕೆ ನೀಡಿ ಗ್ರಾಮ ಸಭೆಗಳನ್ನು ನಡೆಸಲಾಗುತ್ತಿದೆ. ಸಾರ್ವಜನಿಕರು ಬೆಳಿಗ್ಗೆ ಮತ್ತು ಸಂಜೆ ಸಮಯದಲ್ಲಿ ಎಚ್ಚರಿಕೆಯಿಂದ ಇರಬೇಕು, ಸೂರ್ಯಾಸ್ತದ ನಂತರ ಮಕ್ಕಳನ್ನು ಮನೆಯೊಳಗೆ ಇರಿಸಿ, ರಾತ್ರಿ ನಡೆಯುವಾಗ ಟಾರ್ಚ್, ಬೆಳಕು ಬಳಸಿ, ಪಶುಗಳನ್ನು ಮುಚ್ಚಿದ, ಬೆಳಕು ಇರುವ ಕೊಟ್ಟಿಗೆಯಲ್ಲಿ ಇರಿಸಿ ಎಂದು ಸಾರ್ವಜನಿರಲ್ಲಿ ಕೋರಿದ್ದಾರೆ.
ಚಿರತೆ ಪ್ರತ್ಯಕ್ಷ ಆಗಿರುವ ಬಗ್ಗೆ ಆಯಾ ಗ್ರಾಮಗಳಲ್ಲಿ ಬಿತ್ತಿ ಪತ್ರಗಳನ್ನು ಅಂಟಿಸಿ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚಿರತೆ ಕಂಡುಬಂದರೆ ತಕ್ಷಣವೇ ಅರಣ್ಯ ಇಲಾಖೆಯ ಆರ್‌ಎಫ್‌ಓ. ವಿಜಯಕುಮಾರ ಜಾಧವ (9591317807), ಡಿಆರ್‌ಎಫ್‌ಒ ರವಿ (9900561007), ಡಿಆರ್‌ಎಫ್‌ಒ ಆರ್.ಎಲ್.ರಾಠೋಡ (8618002638), ಬಿಟ್ ಫಾರೇಸ್ಟರ್ ಪರಶುರಾಮ (9845112328) ಹಾಗೂ ಅರಣ್ಯ ಸಹಾಯವಾಣಿ ಸಂಖ್ಯೆ: 1926ಗೆ ಕರೆ ಮಾಡಿ ಮಾಹಿತಿ ನೀಡಬೇಕೆಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ : ಬೀದರ್ | ಬಾರದ ಬೆಳೆ ಹಾನಿ ಪರಿಹಾರ : ರೈತರಿಂದ ಜಿಲ್ಲಾಧಿಕಾರಿಗೆ ಮನವಿ





