ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಚಿರತೆ ಪತ್ತೆ; ಉದ್ಯೋಗಿಗಳಿಗೆ ವರ್ಕ್ ಫ್ರಮ್ ಹೋಮ್

Date:

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮಂಗಳವಾರ ಮುಂಜಾನೆ ಚಿರತೆಯೊಂದು ಕಾಣಿಸಿಕೊಂಡಿದೆ. ಈ ಬೆನ್ನಲ್ಲೇ ಸಂಸ್ಥೆಯು ಇಂದು (ಡಿಸೆಂಬರ್ 31) ಉದ್ಯೋಗಿಗಳಿಗೆ ವರ್ಕ್ ಫ್ರಮ್ ಹೋಮ್ ಘೋಷಣೆ ಮಾಡಿದೆ ಎಂದು ವರದಿಯಾಗಿದೆ.

ಈ ಬಗ್ಗೆ ಸಂಸ್ಥೆಯ ಮಾನವ ಸಂಪನ್ಮೂಲ ವಿಭಾಗವು ಸಿಬ್ಬಂದಿಗಳಿಗೆ ಮಾಹಿತಿ ನೀಡಿದೆ. “ಆತ್ಮೀಯ ಇನ್ಫೋಶಿಯನ್‌ಗಳೇ, ಇಂದು ಮೈಸೂರು ಕ್ಯಾಂಪಸ್‌ನಲ್ಲಿ ಕಾಡು ಪ್ರಾಣಿ ಕಾಣಿಸಿಕೊಂಡಿದೆ. ಕಾರ್ಯಪಡೆಯ ಸಹಯೋಗದೊಂದಿಗೆ ಕ್ಯಾಂಪಸ್ ಸುರಕ್ಷತೆಗಾಗಿ ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ” ಎಂದು ತಿಳಿಸಿದೆ.

ಇದನ್ನು ಓದಿದ್ದೀರಾ? ಚಿರತೆ ಹಿಡಿಯಲು ‘ಸೊಳ್ಳೆ ಪರದೆ’ ಜೊತೆ ಕಾಡಿಗೆ ಹೊರಟ ಬಿಜೆಪಿ ಮಾಜಿ ಶಾಸಕ; ವಿಡಿಯೋ ವೈರಲ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವರದಿ ಪ್ರಕಾರ, ಕ್ಯಾಂಪಸ್‌ಗೆ ಪ್ರವೇಶವನ್ನು ನಿರ್ಬಂಧಿಸುವಂತೆ ಇನ್ಫೋಸಿಸ್ ಕ್ಯಾಂಪಸ್‌ನ ಭದ್ರತಾ ತಂಡಕ್ಕೆ ಸೂಚಿಸಿದೆ. “ದಯವಿಟ್ಟು ಇಂದು (ಡಿಸೆಂಬರ್ 31) ಕ್ಯಾಂಪಸ್‌ಗೆ ಪ್ರವೇಶಿಸಬೇಡಿ” ಎಂದು ನೋಟಿಸ್ ಹಾಕಲಾಗಿದೆ.

ನಸುಕಿನ 2 ಗಂಟೆ ಸುಮಾರಿಗೆ ಸಿಸಿಟಿವಿ ದೃಶ್ಯಾವಳಿಯಲ್ಲಿ ಚಿರತೆ ಓಡಾಟ ಕಂಡುಬಂದಿದೆ. ಕೆಲವೇ ಕ್ಷಣದಲ್ಲಿ ಚಿರತೆ ಸೆರೆಹಿಡಿಯಲು ತಂಡವನ್ನು ನಿಯೋಜಿಸಲಾಗಿದೆ. ಶೋಧ ಕಾರ್ಯಾಚರಣೆ ಆರಂಭವಾಗಿದೆ.

ಈ ಬಗ್ಗೆ ಮಾಧ್ಯಮವೊಂದಕ್ಕೆ ಮಾಹಿತಿ ನೀಡಿರುವ ಉಪ ಅರಣ್ಯ ಸಂರಕ್ಷಣಾಧಿಕಾರಿ (ವನ್ಯಜೀವಿ) ಐಬಿ ಪ್ರಭುಗೌಡ, “ಬೆಳಿಗ್ಗೆ 2 ಗಂಟೆ ಸುಮಾರಿಗೆ ಚಿರತೆ ಸಿಸಿಟಿವಿಯಲ್ಲಿ ಕಾಣಿಸಿಕೊಂಡಿದೆ. ನಮ್ಮ ತಂಡವು 4 ಗಂಟೆಗೆ ಸ್ಥಳಕ್ಕೆ ತಲುಪಿ ತಕ್ಷಣ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ” ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಗುಬ್ಬಿ | ಚಿರತೆ ದಾಳಿಗೆ 9 ಕುರಿಗಳ ಬಲಿ : ಆತಂಕದಲ್ಲಿ ಸುರುಗೇನಹಳ್ಳಿ ಗ್ರಾಮಸ್ಥರು.

ಇನ್ನು ಉದ್ಯೋಗಿಗಳಿಗೆ ವರ್ಕ್ ಫ್ರಮ್ ಹೋಮ್ ಘೋಷಿಸಲಾಗಿದೆ. ಆದರೆ ಇನ್ಫೋಸಿಸ್ ಗ್ಲೋಬಲ್ ಎಜುಕೇಶನ್ ಸೆಂಟರ್‌ನ ಶಿಕ್ಷಣಾರ್ಥಿಗಳಿಗೆ ತೊಂದರೆ ಉಂಟಾಗಿದೆ ಎಂದು ಹೇಳಲಾಗಿದೆ. ತರಬೇತಿ ಕಾರ್ಯಕ್ರಮಗಳು, ಮೌಲ್ಯಮಾಪನಗಳನ್ನು ಮುಂದೂಡಲಾಗಿದ್ದು, ಕ್ಯಾಂಪಸ್‌ಗೆ ಬರದಂತೆ ಸೂಚಿಸಲಾಗಿದೆ.

ಇನ್ನು 2011ರಲ್ಲಿಯೂ ಚಿರತೆಯೊಂದು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಕಾಣಿಸಿಕೊಂಡಿತ್ತು. ಹೆಬ್ಬಾಳ ಇಂಡಸ್ಟ್ರಿಯಲ್ ಏರಿಯಾ ಬಳಿ ಚಿರತೆ ಕಾಣಿಸಿಕೊಂಡಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...