ಕುಷ್ಟಗಿ | ಕರ್ತವ್ಯ ಲೋಪ; ಪುರಸಭೆ ಅಧಿಕಾರಿಗೆ ಕಡ್ಡಾಯ ನಿವೃತ್ತಿ ಶಿಕ್ಷೆ

Date:

ಪ್ರಸ್ತುತ ಕೊಪ್ಪಳ ಜಿಲ್ಲೆ ಕುಷ್ಟಗಿ ಪುರಸಭೆಯಲ್ಲಿ ಪ್ರಭಾರ ಮುಖ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಡಿ ಎನ್‌ ಧರಣೇಂದ್ರ ಕುಮಾರ್‌ ಅವರನ್ನು ಕರ್ತವ್ಯ ಲೋಪ ಸಾಬೀತಾದ ಹಿನ್ನೆಲೆ ಕಡ್ಡಾಯ ನಿವೃತ್ತಿಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

ಧರಣೇಂದ್ರ ಕುಮಾರ್‌ ಈ ಹಿಂದೆ ಹಾವೇರಿ ಜಿಲ್ಲೆ ಗುತ್ತಲ ಪಟ್ಟಣ ಪಂಚಾಯತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ 2015ರಿಂದ 2018ರ ಅವಧಿಯಲ್ಲಿ ವಿವಿಧ ಕಾಮಗಾರಿಗಾರಿಗಳಿಗೆ ಬಿಡುಗಡೆಯಾಗಿದ್ದ ಅನುದಾನದಲ್ಲಿ ನಿಯಮ ಬಾಹಿರವಾಗಿ 2.53 ಕೋಟಿಯನ್ನು ಗುತ್ತಿಗೆದಾರರಿಗೆ ಪಾವತಿಸಿದ್ದರು. ಆಗ ಅಲ್ಲಿನ ಜಿಲ್ಲಾಧಿಕಾರಿ ಅವರನ್ನು ಅಮಾನತು ಮಾಡುವಂತೆ ಸರ್ಕಾರಕ್ಕೆ ಶಿಫಾರಸು ಮಾಡಿದ್ದರು.

ಅವರ ವಿರುದ್ಧದ ಪ್ರಕರಣಗಳು ಗಂಭೀರ ಸ್ವರೂಪದ್ದಾಗಿದ್ದು, ಕರ್ತವ್ಯಲೋಪ ಸಾಬೀತಾಗಿರುವ ಹಿನ್ನೆಲೆ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರು ಅವರನ್ನು ನಿವೃತ್ತಿಗೊಳಿಸಿ ಆದೇಶಿಸಿದ್ದಾರೆ. ಎರಡು ವರ್ಷಗಳಿಂದ ಕುಷ್ಟಗಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಧರಣೇಂದ್ರ ಅವರ ಸೇವಾವಧಿ ಇನ್ನೂ 10 ವರ್ಷಗಳು ಬಾಕಿ ಇರುವಾಗಲೇ ಕೊಪ್ಪಳ ಜಿಲ್ಲಾಧಿಕಾರಿ ನಳಿನ್‌ ಅತುಲ್‌ ಅವರು ಧರಣೇಂದ್ರ ಅವರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಆದೇಶ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ರಾಯಚೂರು | ವಿವೇಚನಾ ನಿಧಿಯ ಅನುದಾನ ಸಮರ್ಪಕ ಬಳಕೆಯಾಗಬೇಕು: ರಾಘವೇಂದ್ರ ಕುಷ್ಟಗಿ

ಸರ್ಕಾರಿ ನೌಕರಿಯಲ್ಲಿರುವ ಅಧಿಕಾರಿಗಳು ಕರ್ತವ್ಯಲೋಪ ಎಸಗುವುದು ಮೊದಲೇನಲ್ಲ. ಆದರೆ ಇಲ್ಲಿವರೆಗೆ ಎಷ್ಟು ಮಂದಿಗೆ ಶಿಕ್ಷೆಯಾಗಿದೆ ಎನ್ನುವುದು ಗಮನಿಸಬೇಕಾದ ವಿಚಾರ. ಬೆರಳೆಣಿಕೆಯಷ್ಟೇ.. ಇನ್ನು ಅಧಿಕಾರಿಗಳಿಗೆ ಶಿಕ್ಷೆ ನೀಡುವ ಅಧಿಕಾರವಿರುವ ಜನಪ್ರತಿನಿಧಿಗಳು ಎಷ್ಟರಮಟ್ಟಿಗೆ ಸದಾಚಾರಿಗಳು ಎನ್ನುವುದು ಜಗಜ್ಜಾಹೀರು. ಆದರೂ ಮೇಲಿನಂತಹ ಪ್ರಕರಣಗಳು ಹೆಚ್ಚು ಮುನ್ನಲೆಗೆ ಬಂದು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಗಳಾದಲ್ಲಿ ಮಾತ್ರ ಬದಲಾವಣೆ ನಿರೀಕ್ಷಿಸಲು ಸಾಧ್ಯ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...