ಬೆಳಗಾವಿ | ಕಿತ್ತೂರು ಉತ್ಸವಕ್ಕೆ ಎಲ್ಲರೂ ಕೈ ಜೋಡಿಸೋಣ: ಸಚಿವ ಸತೀಶ ಜಾರಕಿಹೊಳಿ

Date:

ಚೆನ್ನಮ್ಮನ ಕಿತ್ತೂರು ಉತ್ಸವ ಅಕ್ಟೋಬರ್ 23ರಿಂದ 25ರವರೆಗೆ ನಡೆಯಲಿದೆ. ಕಿತ್ತೂರ ಉತ್ಸವವನ್ನು ದಸರಾ ಮಾದರಿಯಲ್ಲಿ ಆಚರಿಸಬೇಕು. ಉತ್ಸವಕ್ಕೆ ಮೇರಗು ತರಲು ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು ಎಂದು ಸಚಿವ ಸತೀಶ್ ಜಾರಿಹೊಳಿ ಹೇಳಿದ್ದಾರೆ.

ಕಿತ್ತೂರಿನಲ್ಲಿ ನಡೆದ ಉತ್ಸವದ ಉತ್ಸವದ ಪೂರ್ವಭಾವಿ ಸಭೆಯಲ್ಲಿ ಸಭೆಯಲ್ಲಿ ಅವರು ಮಾತನಾಡಿದರು. “ಕಿತ್ತೂರು ಅಭಿವೃದ್ಧಿಗಾಗಿ ಐದು ಕೋಟಿ ಅನುದಾನ ನೀಡಲಾಗವುದು. ಇದರಿಂದ ಕಿತ್ತೂರಿನ ಸಮಗ್ರ ಅಭಿವೃದ್ಧಿ ಮತ್ತು ಸ್ವಾತಂತ್ರ್ಯ ಹೋರಾಟಗಾರರ ಭಾವ ಚಿತ್ರ, ರಸ್ತೆ, ಶೌಚಾಲಯ ನಿರ್ಮಾಣ ಸೇರಿದಂತೆ ಇತರ ನಿರ್ಮಾಣ ಕಾರ್ಯಗಳನ್ನು ಮಾಡಲಾಗುವುದು” ಎಂದು ಹೇಳಿದರು.

“ಕಿತ್ತೂರು ಉತ್ಸವ ಕಾರ್ಯಕ್ರಮದಲ್ಲಿ ಸ್ಥಳೀಯ ಕಲಾವಿದರಿಗೆ, ನಿರೂಪಕರಿಗೆ ಆಧ್ಯತೆ ನೀಡಬೇಕು. ಪ್ರತಿ ವರ್ಷ ಅದೇ ಕಲಾವಿದರು ಹಾಗೂ ಕಲಾತಂಡಗಳಿಗೆ ಅವಕಾಶ ಕೊಡಬಾರದು. ಒಮ್ಮೆ ಅವಕಾಶ ಸಿಕ್ಕವರಿಗೆ ಮತ್ತೆ ಎರಡು ವರ್ಷ ಬಿಟ್ಟು ಕೊಡಬೇಕು. ಇದರಿಂದ ಹೊಸ ಕಲಾವಿದರಿಗೂ ಅವಕಾಶ ಸಿಗುತ್ತದೆ. ಪ್ರದರ್ಶನ ನೀಡುವ ಯಾವುದೇ ಕಲಾವಿದರಿಗೆ ಶಾಸಕರ ಅಥವಾ ಇತರರ ಪತ್ರ ತೆಗೆದುಕೊಂಡು ಬನ್ನಿ ಎಂದು ಸೂಚಿಸುವುದು ಬೇಡ ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು. ಸಣ್ಣ ನೀರಾವರಿ ಇಲಾಖೆಯಿಂದ ಐತಿಹಾಸಿಕ ‘ರಣಗಟ್ಟಿ ಕೆರೆʼ ಅಭಿವೃದ್ಧಿ ಮಾಡಲಾಗುವುದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಿತ್ತೂರು ಶಾಸಕರಾದ ಬಾಬಾಸಾಹೇಬ ಪಾಟೀಲ್ ಮಾತನಾಡಿ‌, “ಕೋಟೆಯ ಆವರಣದಲ್ಲಿ ಮಾಹಿತಿ ಫಲಕಗಳ ಅಳವಡಿಕೆ ಮಾಡುವುದರ ಜತೆಗೆ, ಧ್ವನಿ-ಬೆಳಕು ಕಾರ್ಯಕ್ರಮವನ್ನು ವಾರದಲ್ಲಿ ಕನಿಷ್ಠ ಎರಡು ಬಾರಿ ನಡೆಸಲು ಕ್ರಮ ಕೈಗೊಳ್ಳಲಾಗುವುದು. ಸ್ಥಳಿಯ ಕಲಾವಿದರಿಗೆ ಆಧ್ಯತೆ ನೀಡಲಾಗುವುದು” ಎಂದು ಹೇಳಿದರು.

“ಕಿತ್ತೂರು ಉತ್ಸವದ ಅಂಗವಾಗಿ ಹೊರಡುವ ವಿಜಯ ಜ್ಯೋತಿಯು, ಕಿತ್ತೂರು ಕರ್ನಾಟಕ ವ್ಯಾಪ್ತಿಯ ಎಲ್ಲ ತಾಲ್ಲೂಕುಗಳಿಗೆ ಹಾಗೂ ಪ್ರವಾಸಿ ತಾಣಗಳಲ್ಲಿ ಸಂಚರಿಸಲಿದೆ” ಎಂದು ಜಿಲ್ಲಾಧಿಕಾರಿ ನಿತೇಶ್‌ ಪಾಟೀಲ್‌ ಮಾಹಿತಿ ನೀಡಿದರು.

ಸಭೆಯಲ್ಲಿ ರಾಜಗುರು ಸಂಸ್ಥಾನ ಕಲ್ಮಠದ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣ ಅಧಿಕಾರಿ ಹರ್ಷಲ್ ಬೋಯರ್, ಎ.ಸಿ ಪ್ರಭಾವತಿ ಪಕೀರಪುರ, ಜಿಲ್ಲಾ ಪೊಲೀಸ್ ವರಿಷ್ಠ ಭೀಮಾಶಂಕರ ಗುಳೇದ, ಡಿವೈಎಸ್‌ಪಿ ರವಿ ನಾಯ್ಕ್, ಯೋಜನಾ ನಿರ್ದೇಶಕ ಮಲ್ಲಿಕಾರ್ಜುನ ಕಲಾದಗಿ, ಕನ್ನಡ ಸಂಸ್ಕೃತಿ ಇಲಾಖೆ ಉಪನಿರ್ದೇಶಕಿ ವಿದ್ಯಾವತಿ ಭಜಂತ್ರಿ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...