ಬೀದರ್‌ | ಪ್ರಜ್ವಲ್‌ ರೇವಣ್ಣನನ್ನು ವಿದೇಶದಿಂದ ಕರೆತಂದು ತನಿಖೆಗೆ ಒಳಪಡಿಸಲಿ : ಎದ್ದೇಳು ಕರ್ನಾಟಕ ಆಗ್ರಹ

Date:

ಮೂರು ಸಾವಿರಕ್ಕೂ ಹೆಚ್ಚಿನ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣನ ರಾಕ್ಷಸಿಕೃತ್ಯದಿಂದ ಇಡೀ ನಾಗರಿಕ ಸಮಾಜ ತಲೆತಗ್ಗಿಸುವಂತಾಗಿದೆ. ದೇಶದ ಮಾನ ಹರಾಜಾಗಿದೆ. ಪ್ರಕರಣದ ಸಂತ್ರಸ್ತೆಯರಿಗೆ ಅಪಾಯವಿರುವ ಕಾರಣ ಕೂಡಲೇ ವಿಶೇಷ ನ್ಯಾಯಾಲಯ ಸ್ಥಾಪಿಸಿ, ಕೃತ್ಯದಲ್ಲಿ ಭಾಗಿಯಾದವರಿಗೆ ಕಾನೂನಿನ ಪ್ರಕರ ಶಿಕ್ಷೆ ವಿಧಿಸಬೇಕು ಎಂದು ʼಎದ್ದೇಳು ಕರ್ನಾಟಕʼ ಜಿಲ್ಲಾ ಸಂಯೋಜಕ ಜಗದೀಶ್ವರ ಬಿರಾದರ್‌ ಆಗ್ರಹಿಸಿದರು.

ನಗರದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ” ಹೆಣ್ಣು ಮಕ್ಕಳೊಂದಿಗೆ ಚೆಲ್ಲಾಟವಾಡಿ ಅದರ ವಿಡಿಯೋ ಚಿತ್ರಿಕರಣ ಮಾಡಿದ್ದಾನೆಂದರೆ ನಾಗರಿಕ ಸಮಾಜ ಎತ್ತ ಸಾಗುತ್ತದೆ ಎಂಬ ಪ್ರಶ್ನೆ ಕಾಡುತ್ತದೆ. ಈ ಘಟನೆಯಲ್ಲಿ ಭಾಗಿಯಾದ ಪ್ರಜ್ವಲ್‌ನನ್ನು ರಾಜತಾಂತ್ರಿಕ ಪಾಸ್‌ಪೋರ್ಟ್‌ ನೀಡಿ ವಿದೇಶಕ್ಕೆ ಓಡಿ ಹೋಗಲು ಕೇಂದ್ರ ಸರ್ಕಾರವೇ ವ್ಯವಸ್ಥೆ ಮಾಡಿದೆ. ಪ್ರಜ್ವಲ್‌ ರೇವಣ್ಣನನ್ನು ದೇಶಕ್ಕೆ ಕರೆತಂದು ತನಿಖೆಗೊಳಪಡಿಸಬೇಕು” ಎಂದು ಒತ್ತಾಯಿಸಿದರು.

ಮುಖಂಡ ಬಾಬುರಾವ್‌ ಪಾಸ್ವಾನ್‌ ಮಾತನಾಡಿ, “ಮಾಜಿ ಪ್ರಧಾನಿ ದೇವೆಗೌಡರ ಮೊಮ್ಮಗ ಪ್ರಜ್ವಲ್‌ ರೇವಣ್ಣನ ಕರ್ಮಕಾಂಡದಿಂದ ರಾಜ್ಯದ ಮಾನ ಹರಾಜಾಗಿದೆ. ಮಹಿಳೆಯರ ಮೇಲೆ ಲೈಂಗಿಕ ಅತ್ಯಾಚಾರ ಎಸಗಿದ ಕಾರಣ ಜೆಡಿಎಸ್‌ ಪಕ್ಷ ತೆನೆಹೊತ್ತ ಚಿಹ್ನೆ ಇಟ್ಟುಕೊಳ್ಳಲು ಅವರ ಅರ್ಹವಲ್ಲ. ಪಕ್ಷದ ಚಿಹ್ನೆ ಬದಲಾಯಿಸಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂಘಟನೆ ಮುಖಂಡ ಅನೀಲಕುಮಾರ್‌ ಬೆಲ್ದಾರ್‌ ಮಾತನಾಡಿ, “ಹುಬ್ಬಳಿಯಲ್ಲಿ ನೇಹಾ ಕೊಲೆಯಾದಾಗ ಬೀದಿಗಿಳಿದು ಹೋರಾಟ ನಡೆಸಿದ ಬಿಜೆಪಿ ಹಾಗೂ ಹಿಂದುತ್ವವಾದಿ ಸಂಘಟನೆಗಳು ಹಾಸನದಲ್ಲಿ ಒಬ್ಬ ಸಂಸದನಿಂದ ಸಾವಿರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣದ ಬಗ್ಗೆ ಒಬ್ಬರೂ ಚಕಾರ ಎತ್ತುತ್ತಿಲ್ಲ. ಇವರು ಹಿಂದು ಮಹಿಳೆಯರು ಅಲ್ಲವೇ?” ಎಂದು ಪ್ರಶ್ನಿಸಿದರು.

ಅತ್ಯಂತ ಭಯಂಕರವಾದ ಲೈಂಗಿಕ ದೌರ್ಜನ್ಯವೆಸಗಿದ ವ್ಯಕ್ತಿಯನ್ನು ತಮ್ಮ ಅಭ್ಯರ್ಥಿಯನ್ನಾಗಿಸಿ ಕರ್ನಾಟಕದ ಮಹಿಳೆಯರನ್ನು ಮತ್ತು ಜನತೆಯನ್ನು ಮೂರ್ಖರನ್ನಾಗಿಸಲು ಪ್ರಯತ್ನಿಸಿದ ಬಿಜೆಪಿ-ಜೆಡಿಎಸ್‌ ಪಕ್ಷಗಳು ಬಹಿರಂಗ ಕ್ಷಮೆಯಾಚಿಸಬೇಕು. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳನ್ನು ನಿಯಂತ್ರಿಸುವ ಮಾರ್ಗಸೂಚಿ ಕ್ರಮಗಳಿಗಾಗಿ ಸರ್ಕಾರ ಕೂಡಲೇ ಉನ್ನತ ಮಟ್ಟದ ಸಮಿತಿ ರಚಿಸಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಮೋದಿ ಆಡಳಿತಾವಧಿ – ಬಿಕ್ಕಟ್ಟಿನಲ್ಲಿ ದೇಶದ ಪತ್ರಿಕಾ ಸ್ವಾತಂತ್ರ್ಯ!

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಓಂಪ್ರಕಾಶ ರೊಟ್ಟೆ, ಸಂದೀಪ ಕಾಂಟೆ, ಅಶೋಕ ಮಾಳಗೆ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...