ಹಾವೇರಿ | ಕಾವೇರಿ ನೀರು ವಿಚಾರದಲ್ಲಿ ಪ್ರಧಾನಿ ಮೋದಿ ಮಧ್ಯ ಪ್ರವೇಶಿಸಿ ನ್ಯಾಯ ಒದಗಿಸಲಿ

Date:

  • ರಾಜ್ಯ ಸರ್ಕಾರ ಕಾವೇರಿ ನೀರು ತಮಿಳುನಾಡಿಗೆ ಹರಿಸುವುದನ್ನು ನಿಲ್ಲಿಸುವಂತೆ ಒತ್ತಾಯ
  • ವಿವಿಧ ಸಂಘಟನೆಗಳ ಒಕ್ಕೂಟದಿಂದ ʼಕರ್ನಾಟಕ ಬಂದ್ʼ ಗೆ ಬೆಂಬಲಿಸಿ ಹಕ್ಕೊತ್ತಾಯ ಪತ್ರ ಸಲ್ಲಿಕೆ

ರಾಜ್ಯದಲ್ಲಿ ಬರದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇರುವ ಅಲ್ಪ ಪ್ರಮಾಣದ ನೀರನ್ನು ತಮಿಳುನಾಡಿಗೆ ಬಿಟ್ಟರೆ ಕಾವೇರಿ ನೀರನ್ನೇ ಅವಲಂಬಿತ ರೈತರು ಹಾಗೂ ಆ ಭಾಗದ ಜನರಿಗೆ ಕುಡಿಯುವ ನೀರಿಗೂ ಹಾಹಾಕಾರ ಉಂಟಾಗುತ್ತದೆ. ರಾಜ್ಯ ಸರ್ಕಾರ ಕಾವೇರಿ ನೀರು ತಮಿಳುನಾಡಿಗೆ ಹರಿಸುವುದನ್ನು ಕೂಡಲೇ ನಿಲ್ಲಿಸಬೇಕೆಂದು ಒತ್ತಾಯಿಸಿ ವಿವಿಧ ಸಂಘಟನೆಗಳ ಒಕ್ಕೂಟ ನಗರದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಡಿಎಸ್‌ಎಸ್), ಭೂಮಿಪುತ್ರ ರೈತ ಸಂಘ, ಅಲೆಮಾರಿ ಬುಡಕಟ್ಟು ಮಹಾಸಭಾ ಹಾಗೂ ಕರ್ನಾಟಕ ಮಾದಿಗರ ಸಂಘಗಳ ಒಕ್ಕೂಟದಿಂದ ʼಕರ್ನಾಟಕ ಬಂದ್ʼ ಗೆ ಬೆಂಬಲಿಸಿ ಪ್ರತಿಭಟನೆ ನಡೆಸಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ತಹಶೀಲ್ದಾರ್ ಜಿ.ಎಸ್. ಶಂಕರ ಅವರಿಗೆ ಸಲ್ಲಿಸಿದರು.

“ಪ್ರಧಾನಿ ಮಂತ್ರಿ ನರೇಂದ್ರ ಮೋದಿಯವರು ಕಾವೇರಿ ವಿಚಾರವಾಗಿ ಮಧ್ಯ ಪ್ರವೇಶಿಸಿ ಕರ್ನಾಟಕದ ಜನತೆಗೆ ನ್ಯಾಯ ಒದಗಿಸಬೇಕು. ಕೂಡಲೇ ರಾಜ್ಯ ಸರ್ಕಾರ ತಮಿಳುನಾಡಿಗೆ ಹರಿಸುತ್ತಿರುವ ಕಾವೇರಿ ನೀರನ್ನು ನಿಲ್ಲಿಸಬೇಕು. ನಿಲ್ಲಿಸದಿದ್ದರೆ ಹೋರಾಟ ಇನ್ನಷ್ಟು ತೀವ್ರವಾಗುತ್ತದೆ ಎಂದು ಎಚ್ಚರಿಸಿದ ಪ್ರತಿಭಟನಾಕಾರರು ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ ಕರೆಗೆ ನಮ್ಮ ಜಿಲ್ಲಾ ಸಂಘಟನೆಗಳ ಸಂಪೂರ್ಣ ಬೆಂಬಲವಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕಾವೇರಿ ವಿವಾದ | ಕಲಾವಿದರನ್ನು ಹಿಂಸಿಸುವುದು ತಪ್ಪು; ಬಹುಭಾಷಾ ನಟ ಪ್ರಕಾಶ್ ರಾಜ್

ಈ ಸಂದರ್ಭದಲ್ಲಿ ಡಿಎಸ್‌ಎಸ್ ರಾಜ್ಯ ಸಮಿತಿ ಸದಸ್ಯ ಉಡಚಪ್ಪ ಮಾಳಗಿ, ಭೂಮಿಪುತ್ರ ರೈತ ಸಂಘ ಅಧ್ಯಕ್ಷ ಫಕ್ಕೀರಗೌಡ ಗಾಜೀಗೌಡ್ರ, ಅಲೆಮಾರಿ ಸಂಘದ ಅಧ್ಯಕ್ಷ ವಿಭೂತಿ ಶೆಟ್ಟಿ, ಧಾರವಾಡ ಜಿಲ್ಲಾ ಕರ್ನಾಟಕ ರಾಜ್ಯ ಮಾದಿಗರ ಸಂಘದ ಅಧ್ಯಕ್ಷ ದುರ್ಗಪ್ಪ ಮಾದರ, ಆನಂದ ಕುಮಾರಿ, ರಾಜು ಕುಮಾರಿ ಸೇರಿದಂತೆ ಅನೇಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...