ಕಲಬುರಗಿ | ಬಿಜೆಪಿಯವರು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಿ : ಸಚಿವ ಶರಣಪ್ರಕಾಶ ಪಾಟೀಲ್

Date:

ರಾಜ್ಯ ಸರಕಾರ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ ಮಾಡಲು ಕೇಂದ್ರ ಸರ್ಕಾರದ ನೀತಿಯೇ ಕಾರಣ. ಹೀಗಾಗಿ ಬಿಜೆಪಿಯವರು ಮೊದಲು ಪ್ರಧಾನಿ ನರೇಂದ್ರ ಮೋದಿಯವರ ಕಚೇರಿ‌ ಎದುರು ಪ್ರತಿಭಟನೆ ನಡೆಸಿ ಪೆಟ್ರೋಲ್, ಡೀಸೆಲ್ ದರ ಇಳಿಕೆಗೆ ಕೇಂದ್ರ ಸರಕಾರಕ್ಕೆ ಒತ್ತಾಯಿಸಲಿ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲಾಭಿವೃದ್ಧಿ ಸಚಿವ ಡಾ.ಶರಣಪ್ರಕಾಶ ಪಾಟೀಲ್‌ ತಿರುಗೇಟು ನೀಡಿದರು.

ಕಲಬುರಗಿಯಲ್ಲಿ ಸೋಮವಾರ ನಿರ್ಮಾಣ ಹಂತದ ಜಯದೇವ ಆಸ್ಪತ್ರೆಯ ಕಟ್ಟಡ ಕಾಮಗಾರಿ ಪರಿಶೀಲನೆ ನಡೆಸಿ ಸುದ್ದಿಗಾರರೊಂದಿಗೆ ಮಾತನಾಡಿದರು.

“ಈ ಹಿಂದೆ ಯುಪಿಎ ಸರಕಾರ ಅಧಿಕಾರದಲ್ಲಿದ್ದ ವೇಳೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಹೆಚ್ಚಿದ್ದರೂ ರಾಜ್ಯ ಸರ್ಕಾರ ಜನರ ಮೇಲೆ ಭಾರ ಹಾಕಲು ಪೆಟ್ರೋಲ್, ಡೀಸೆಲ್ ಮೇಲೆ ತೆರಿಗೆ ಹಾಕಿರಲಿಲ್ಲ. ನೆರೆಯ ಇತರ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಅತ್ಯಂತ ಕಡಿಮೆ ಇದೆ” ಎಂದು ಸಮಜಾಯಿಷಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಡಿಮೆಯಾದರೂ ಇಂದಿನ ಕೇಂದ್ರ ಸರ್ಕಾರ ಅದರ ಲಾಭವನ್ನು ಗ್ರಾಹಕರಿಗೆ ತಲುಪಿಸಿಲ್ಲ. ಬದಲಾಗಿ ಸಾಕಷ್ಟು ಲೂಟಿ ಮಾಡಿದ್ದಾರೆ. ಕಚ್ಚಾ ತೈಲ ಬೆಲೆ ಹೆಚ್ಚಾದಾಗ ಇಲ್ಲಿಯೂ ಹೆಚ್ಚಿಸಿದ್ದಾರೆ. ಹೀಗಾಗಿ ತೈಲ ಬೆಲೆ ಹೆಚ್ಚಾಗಿಯೇ ಇದೆ” ಎಂದರು.

“ಬರುವ ಆಗಸ್ಟ್ ಕೊನೆ ಅಥವಾ ಸೆಪ್ಟೆಂಬರ್ ಮೊದಲ ವಾರದಲ್ಲಿ ಕಲಬುರಗಿಯ ಜಯದೇವ ಹೃದ್ರೋಗ ಆಸ್ಪತ್ರೆಯ ನೂತನ ಕಟ್ಟಡ ಲೋಕಾರ್ಪಣೆಗೊಳ್ಳಲಿದೆ. ಜೊತೆಗೆ 150 ಹಾಸಿಗೆ ಸಾಮರ್ಥ್ಯದ ಕ್ಯಾನ್ಸರ್ ಆಸ್ಪತ್ರೆ, 200 ಹಾಸಿಗೆಯ ತಾಯಿ-ಮಕ್ಕಳ ಹಾಗೂ 50 ಹಾಸಿಗೆಯ ತುರ್ತು ಚಿಕಿತ್ಸಾ ಕೇಂದ್ರ ನಿರ್ಮಾಣಕ್ಕೆ ಶೀಘ್ರ ಅಡಿಗಲ್ಲು ಹಾಕಲಾಗುವುದು” ಎಂದು ಸಚಿವ ಡಾ.ಶರಣಪ್ರಕಾಶ ಪಾಟೀಲ್‌ ಹೇಳಿದರು.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಗುಟ್ಕಾ ತಂದುಕೊಡದ ಕಾರಣಕ್ಕೆ 7 ವರ್ಷದ ಬಾಲಕಿ ಹತ್ಯೆ: ಆರೋಪಿ ಬಂಧನ

“ಲೋಕಸಭಾ ಚುನಾವಣೆಯಲ್ಲಿ ಕಲ್ಯಾಣ ಕರ್ನಾಟಕದ ಜನರು ಕಾಂಗ್ರೆಸ್‌ಗೆ ಆಶೀರ್ವಾದ ಮಾಡಿದಕ್ಕಾಗಿ ಜನರ ಋಣ ತೀರಿಸುವ ನಿಟ್ಟಿನಲ್ಲಿ 371 ಹಾಸಿಗೆ ಸಾಮರ್ಥ್ಯದ ಜಯದೇವ ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಜನರಿಗೆ ಸೇವೆಗಾಗಿ ಒದಗಿಸಲಾಗುತ್ತಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...