ನಮ್ಮ ಸರ್ಕಾರ ಸ್ಥಿರವಾಗಿದ್ದು, ಬಿಜೆಪಿ ಉಳಿವಿಗಾಗಿ ಯತ್ನಾಳ್‌ ಯತ್ನಿಸಲಿ: ಪ್ರಿಯಾಂಕ್‌ ಖರ್ಗೆ ತಿರುಗೇಟು

Date:

ಕರ್ನಾಟಕದಲ್ಲಿ ಬಿಜೆಪಿ ಆಟ ನಡೆಯಲ್ಲ. ನಮ್ಮ ಸರ್ಕಾರ ಸ್ಥಿರವಾಗಿದೆ. ಇನ್ನು ಆರು ತಿಂಗಳಲ್ಲೇ ಬಿಜೆಪಿ ಹೋಳಾಗಲಿದೆ. ಈ ಅವಧಿಯಲ್ಲಿ ಎಷ್ಟು ನಾಯಕರು ಉಳಿಯುತ್ತಾರೆ ಎಂಬುದರ ಬಗ್ಗೆ ಯತ್ನಾಳ್‌ ಯೋಚಿಸಲಿ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದರು.

“ಆರು ತಿಂಗಳಲ್ಲಿ ಕಾಂಗ್ರೆಸ್‌ ಸರ್ಕಾರ ಪತನವಾಗಿ, ಬಿಜೆಪಿ ಸರ್ಕಾರ ರಚನೆಯಾಗಲಿದೆ” ಎಂದ ಯತ್ನಾಳ್‌ ಹೇಳಿಕೆಗೆ ಸೋಮವಾರ ಕಲಬುರಗಿಯಲ್ಲಿ ಪ್ರತಿಕ್ರಿಯಿಸಿದ ಅವರು, “ಬೊಮ್ಮಾಯಿ ಅವರು ದೆಹಲಿಗೆ ಹೋಗಿ ಬಂದು ಸುಸ್ತಾಗಿದ್ದಾರೆ. ನಮ್ಮ ಪಕ್ಷದ ಬಗ್ಗೆ ತೋರುವ ಕಾಳಜಿಯಲ್ಲಿ ಅರ್ಧಭಾಗ ಅವರ ಪಕ್ಷಕ್ಕೆ ತೋರಿಸಲಿ” ಎಂದು ಕುಟುಕಿದರು.

“ಬಿಜೆಪಿಯವರು ಯಾವಾಗಲು ಬಹುಮತದಿಂದ ಅಧಿಕಾರಕ್ಕೆ ಏರಲು ಪ್ರಯತ್ನಿಸಿಲ್ಲ. ಕಳೆದ ಬಾರಿ ಅನೈತಿಕವಾಗಿ ಸರ್ಕಾರ ರಚನೆ ಮಾಡಿ, ಈ ಭಾರಿ ಜನರಿಂದ ತಿರಸ್ಕಾರಕ್ಕೆ ಒಳಗಾದರು. ಅವರಿಂದ ನಮ್ಮ ಸರ್ಕಾರಕ್ಕೆ ಯಾವ ತೊಂದರೆ ಆಗಲ್ಲ. ರಾಜ್ಯದ ಜನತೆ ಆ ಪ್ರಕಾರವೇ ನಮಗೆ ಆಶೀರ್ವಾದ ಮಾಡಿದ್ದಾರೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...