ಕಾಂಗ್ರೆಸ್ ಲಿಂಗಾಯತರಿಗೆ ಯಾವ ಹುದ್ದೆ ನೀಡಲಿದೆ ನೋಡೋಣ: ಬಸವರಾಜ ಬೊಮ್ಮಾಯಿ

Date:

  • ಪೂರ್ಣ ಬಹುಮತವಿದ್ದರೂ ಸಿಎಂ ಆಯ್ಕೆ ಮಾಡಲು ವಿಳಂಬ
  • ರಾಜಕಾರಣ ಬಿಟ್ಟು ಬೇಗ ಸರ್ಕಾರ ರಚಿಸಿ ಜನರ ಸೇವೆ ಮಾಡಲಿ

ಕಾಂಗ್ರೆಸ್‌ನವರು ಲಿಂಗಾಯತರ ಬಗ್ಗೆ ಬಹಳ ಮಾತನಾಡಿದ್ದಾರೆ. ಈಗ ಲಿಂಗಾಯತ ನಾಯಕರಿಗೆ ಯಾವ ಸ್ಥಾನ ಕೊಡುತ್ತಾರೆ ನೋಡೊಣ ಎಂದು ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಜನರು ಕಾಂಗ್ರೆಸ್‌ಗೆ ಮತ ನೀಡಿದ್ದಾರೆ. ಜನರು ಮತ್ತು ರಾಜ್ಯದ ಅಭಿವೃದ್ಧಿಯನ್ನು ಕಾಂಗ್ರೆಸ್ ಮಾಡಲಿ. ಅವರಿಗೆ ಇಲ್ಲಿಯವರೆಗೂ ಮುಖ್ಯಮಂತ್ರಿ ಆಯ್ಕೆ ಮಾಡಲು ಅಗುತ್ತಿಲ್ಲ. ಬೇಗ ಮುಖ್ಯಮಂತ್ರಿ ಆಯ್ಕೆ ಮಾಡಲಿ” ಎಂದರು.

“ಪೂರ್ಣ ಬಹುಮತ ಇದ್ದರೂ ಮುಖ್ಯಮಂತ್ರಿ ಆಯ್ಕೆ ನಿರ್ಧಾರ ಮಾಡದೇ ಇರುವುದು ಪಕ್ಷದಲ್ಲಿನ ಹೊಂದಾಣಿಕೆ ಸರಿ ಇಲ್ಲ ಎನ್ನುವುದನ್ನು ತೋರಿಸುತ್ತದೆ. ಅದು ಕಾಂಗ್ರೆಸ್‌ನವರ ಆಂತರಿಕ ವಿಚಾರ. ಅದರ ಬಗ್ಗೆ ನಾನು ಹೆಚ್ಚು ಮಾತನಾಡುವುದಿಲ್ಲ. ತಮ್ಮ ರಾಜಕೀಯ ಬಿಟ್ಟು ಆದಷ್ಟು ಬೇಗ ಮುಖ್ಯಮಂತ್ರಿ ಆಯ್ಕೆ ಮಾಡಿ, ಸರ್ಕಾರ ರಚಿಸಿ ಜನರ ಸೇವೆ ಮಾಡಲಿ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಸಿಎಂ ಆಯ್ಕೆ ಅಂತಿಮವಾಗಿಲ್ಲ, ಸುಳ್ಳುಸುದ್ದಿ ಹಬ್ಬಿಸಬೇಡಿ: ರಣದೀಪ್‌ ಸಿಂಗ್‌ ಸುರ್ಜೇವಾಲ

“ಲಿಂಗಾಯತ ಸಮುದಾಯದ ಬಗ್ಗೆ ಕಾಂಗ್ರೆಸ್ ಪಕ್ಷದ ನಾಯಕರು ಬಹಳ ಮಾತನಾಡಿದ್ದಾರೆ. ಅವರು ಲಿಂಗಾಯತ ನಾಯಕರಿಗೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಸೇರಿದಂತೆ ಯಾವ ಯಾವ ಹುದ್ದೆಗಳನ್ನು ಕೊಡುತ್ತಾರೆ ಕಾದು ನೋಡೋಣ” ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...