ದಕ್ಷಿಣ ಕನ್ನಡ | ಗಾಂಧೀಜಿ ಕುರಿತು ಸತ್ಯ ವಿಚಾರ ಪಸರಿಸೋಣ: ರಮಾನಾಥ ರೈ

Date:

ನಮ್ಮ ದೇಶದ ಜಾತ್ಯತೀತ ಪರಂಪರೆಯನ್ನು ಉಳಿಸಿಕೊಳ್ಳುವುದಕ್ಕಾಗಿ ಪ್ರಾಣ ತ್ಯಾಗ ಮಾಡಿದವರು ಮಹಾತ್ಮ ಗಾಂಧೀಜಿ. ಅವರ ಕುರಿತು ಅಪಪ್ರಚಾರ ನಡೆಯುತ್ತಿರುವ ಕಾಲಘಟ್ಟದಲ್ಲಿ ಅವರ ಜೀವನ, ಆದರ್ಶ, ಮೌಲ್ಯಗಳ ಕುರಿತ ಸತ್ಯ ವಿಚಾರಗಳನ್ನು ಸಮಾಜದಲ್ಲಿ ಪಸರಿಸುವ ಕಾರ್ಯ ನಡೆಯಬೇಕು ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದ್ದಾರೆ.

ಮಂಗಳೂರಿನಲ್ಲಿ ನಡೆದ ಗಾಂಧೀಜಿ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ಗಾಂಧೀಜಿ ಕುರಿತು ತಪ್ಪು ಭಾವನೆಗಳನ್ನು ಇಟ್ಟುಕೊಂಡವರು ಬಹಳಷ್ಟು ಮಂದಿ ಇದ್ದಾರೆ. ಆದರೆ ಗಾಂಧೀಜಿ ಇಡೀ ಜಗತ್ತು ಮೆಚ್ಚಿದ, ಒಪ್ಪಿಕೊಂಡ ನಾಯಕ, ಗಾಂಧಿ ಜನ್ಮದಿನವನ್ನು ಜಗತ್ತಿನ ದೇಶಗಳು ಅಹಿಂಸಾ ದಿನವಾಗಿ ಆಚರಿಸುತ್ತಿದ್ದರೆ, ನಮ್ಮ ದೇಶದಲ್ಲಿ ಗಾಂಧಿ ಹತ್ಯೆ ಮಾಡಿದವರನ್ನೇ ವೈಭವೀಕರಿಸುವುದು ನೋವು ತರುವ ವಿಚಾರ. ಗಾಂಧೀಜಿ ಯಾಕೆ ಹುತಾತ್ಮರಾದರು ಎನ್ನುವುದನ್ನು ವಿಮರ್ಶೆ ಮಾಡಬೇಕಾದ ಕಾಲ ಸನ್ನಿಹಿತವಾಗಿದೆ” ಎಂದು ಹೇಳಿದರು.

“ಅಹಿಂಸಾ ಚಳವಳಿ ಮೂಲಕ ಸ್ವಾತಂತ್ರ್ಯ ತಂದುಕೊಡಬಹುದು ಅಂತ ಇಡೀ ಪ್ರಪಂಚಕ್ಕೆ ತೋರಿಸಿಕೊಟ್ಟದ್ದು ಮಹಾತ್ಮಾ ಗಾಂಧೀಜಿ. ಎಷ್ಟೋ ವರ್ಷಗಳ ಕಾಲ ಜೈಲುವಾಸವನ್ನೂ ಅನುಭವಿಸಿದ್ದಾರೆ. ಆದರೆ ಗಾಂಧೀಜಿ ದೇಶಕ್ಕಾಗಿ ಏನು ತ್ಯಾಗ ಮಾಡಿದ್ದಾರೆ ಎಂದು ಲಘುವಾಗಿ ಮಾತನಾಡುವವರಿದ್ದಾರೆ. ಈ ಹಿನ್ನೆಲೆಯಲ್ಲಿ, ಗಾಂಧೀಜಿ ಬಗ್ಗೆ ಸತ್ಯ ವಿಚಾರಗಳುಳ್ಳ ಪುಸ್ತಕಗಳನ್ನು ಓದಿಕೊಂಡು, ಸತ್ಯ ವಿಚಾರಗಳನ್ನು ಸಮಾಜದಲ್ಲಿ ಪಸರಿಸಬೇಕು. ಗಾಂಧೀಜಿ ಅವರ ಕೊಡುಗೆಗಳನ್ನು ಸದಾ ಕಾಲ ದೇಶ ಸ್ಮರಿಸಿಕೊಳ್ಳಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇಂದು ದೇಶದ ಪರಿಸ್ಥಿತಿ ಅಪಾಯದಲ್ಲಿದೆ. ಆಡಳಿತ ಯಂತ್ರ ಒಂದು ದೃಷ್ಟಿಯಲ್ಲಿ ಅಪಾಯದ ಕಡೆ ಹೋಗ್ತಿದೆ. ಅದನ್ನು ತಡೆಯಬೇಕಾದರೆ ದೇಶದ ಜಾತ್ಯತೀತ ಚಳವಳಿಯನ್ನು ಸ್ಥಿರಗೊಳಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಒಂದಾಗುವ ಅಗತ್ಯವಿದೆ” ಎಂದು ರೈ ಹೇಳಿದರು.

ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಮಾತನಾಡಿ, “ಗಾಂಧೀಜಿ ಆಚಾರ ವಿಚಾರಗಳು ಇಂದಿಗೂ ಪ್ರಸ್ತುತ. ಗಾಂಧೀಜಿ ಬಗ್ಗೆ ಇಂದಿನ ಪೀಳಿಗೆಗೆ ಶಾಲೆ ಕಾಲೇಜುಗಳಲ್ಲಿ, ಯುವಕರಿಗೆ ಆದಷ್ಟು ತಿಳಿಹೇಳುವ ಕೆಲಸ ಮಾಡಬೇಕಿದೆ. ಗಾಂಧೀಜಿ ಕಾಣುತ್ತಿದ್ದ ಕನಸನ್ನು ಯಾವಾಗ ಮರೆಯುತ್ತೇವೋ ಅಂದು ದೇಶದ ಪ್ರಜಾಪ್ರಭುತ್ವಕ್ಕೆ ಕಂಟಕ ಬರಲಿದೆ. ಹಾಗಾಗಿ ಗಾಂಧೀಜಿ ಆದರ್ಶಗಳನ್ನು ಯುವ ಪೀಳಿಗೆಗೆ ತಿಳಿಸುವುದು ಎಲ್ಲರ ಕರ್ತವ್ಯ” ಎಂದು ಹೇಳಿದರು.

ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಮಾತನಾಡಿದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್., ಕೃಪಾ ಆಳ್ವಾ, ಬ್ಲಾಕ್ ಅಧ್ಯಕ್ಷರಾದ ಅಬ್ದುಲ್ ಸಲೀಂ, ಪ್ರಕಾಶ್ ಸಾಲಿಯಾನ್, ಮುಂಚೂಣಿ ಘಟಕದ ಜಿಲ್ಲಾಧ್ಯಕ್ಷರಾದ ಬಿ.ಎಂ. ಅಬ್ಬಾಸ್ ಅಲಿ, ಮನೋರಾಜ್ ರಾಜೀವ್, ಲಾರೆನ್ಸ್ ಡಿಸೋಜ, ಸುಹಾನ್ ಆಳ್ವ, ಅಬ್ದುಲ್ ರವೂಫ್, ಕಿರಣ್ ಬುಡ್ಲೆಗುತ್ತು, ನೀರಜ್‌ಪಾಲ್, ಶಬೀರ್ ಎಸ್., ಸುಧೀರ್ ಟಿ ಕೆ, ಪ್ರಕಾಶ್ ಆಳ್ವಿನ್, ತನ್ವಿರ್ ಶಾ, ಗಣೇಶ್ ಪೂಜಾರಿ, ವಿಕಾಸ್ ಶೆಟ್ಟಿ, ಹೈದರ್ ಬೋಳಾರ್, ಸುರೇಖಾ ಚಂದ್ರಹಾಸ್, ಲಿಯಾಕತ್ ಶಾ, ಯೋಗೀಶ್ ನಾಯಕ್, ಚಂದ್ರಕಲಾ ಜೋಗಿ, ಸುರೇಶ್ ಪೂಜಾರಿ, ನಮಿತಾ ಡಿ ರಾವ್, ಸಲೀಮ್ ಮಕ್ಕ, ಶಾಂತಲಾ ಗಟ್ಟಿ, ಜೋರ್ಜ್, ಸಬಿತಾ ಮಿಸ್ಕಿತ್, ಮಲರ್ ಮೋನು, ದಿನೇಶ್ ರಾವ್, ನಝೀರ್ ಬಜಾಲ್ ಇದ್ದರು. ಮಾಜಿ ಮೇಯರ್‌ ಶಶಿಧರ್ ಹೆಗ್ಡೆ ಸ್ವಾಗತಿಸಿದರು. ಶುಭೋದಯ ಆಳ್ವ ವಂದಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...