ಧರ್ಮಸ್ಥಳದಲ್ಲಿನ ಅಸಹಜ ಸಾವುಗಳ ಕುರಿತ ಪತ್ರ: ಭೇಟಿಗೆ ಸಿಗದ ಎಸ್‌ಪಿ; ಹಿಂದಿರುಗಿದ ವಕೀಲರ ನಿಯೋಗ

Date:

ಕಳೆದ ಒಂದು ವಾರದ ಹಿಂದೆ ಧರ್ಮಸ್ಥಳ ಗ್ರಾಮದಲ್ಲಿನ ಅಸಹಜ ಸಾವುಗಳ ಮಾಹಿತಿ ಇರುವ ವ್ಯಕ್ತಿ ಪೊಲೀಸ್ ಶರಣಾಗತಿ ಆಗುತ್ತೇನೆ ಎಂದು ವಕೀಲರ ಮೂಲಕ ಬರೆದಿದ್ದ ಪತ್ರವೊಂದು ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿತ್ತು. ಇದೀಗ ಆ ಪತ್ರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ವಕೀಲರ ತಂಡವೊಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರನ್ನು ಭೇಟಿ ಮಾಡಲು ಮಂಗಳೂರಿಗೆ ಆಗಮಿಸಿತ್ತಾದರೂ, ಎಸ್‌ಪಿಯವರು ಭೇಟಿಗೆ ಸಿಗದ ಕಾರಣ ಹಿಂದಿರುಗಿದ ಬೆಳವಣಿಗೆ ನಡೆದಿದೆ.

ಧರ್ಮಸ್ಥಳದಲ್ಲಿನ ಅಸಹಜ ಸಾವುಗಳ ಕುರಿತ ವೈರಲ್ ಪತ್ರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ವಕೀಲರಾದ ಓಜಸ್ವಿ ಗೌಡ ಮತ್ತು ಸಚಿನ್‌ ಎಸ್‌. ದೇಶಪಾಂಡೆ ನೇತೃತ್ವದ ಆರು ಮಂದಿ ವಕೀಲರ ನಿಯೋಗ ದಕ್ಷಿಣ ಕನ್ನಡ ಜಿಲ್ಲಾ ಎಸ್‌ಪಿ ಅರುಣ್ ಅವರನ್ನು ಭೇಟಿಯಾಗಲು ಶುಕ್ರವಾರ ಮಂಗಳೂರಿಗೆ ಆಗಮಿಸಿತ್ತು. ಆದರೆ ಎಸ್‌ಪಿಯವರ ಅನುಪಸ್ಥಿತಿ ಹಿನ್ನಲೆ ತಂಡಕ್ಕೆ ಎಸ್ಪಿ ಭೇಟಿ ಸಾಧ್ಯವಾಗಿಲ್ಲ. ಎಸ್‌ಪಿಯವರು ಇಲಾಖೆಯ ಕೆಲಸದ ನಿಮಿತ್ತ ಬೆಂಗಳೂರಿನಲ್ಲಿದ್ದಾರೆಂದು ತಿಳಿದ ಬಳಿಕ, ಕಚೇರಿಯಿಂದ ಹಿಂದಿರುಗಿದ್ದಾರೆ.

ವಕೀಲರ ಭೇಟಿಯ ಬಗ್ಗೆ ಮಾಹಿತಿ ಇದ್ದ ಹಿನ್ನೆಲೆಯಲ್ಲಿ ಎಸ್‌ಪಿ ಕಚೇರಿಯ ಬಳಿ ಮಾಧ್ಯಮಗಳ ದಂಡೇ ನೆರೆದಿತ್ತು. ತಮ್ಮ ಕಾರಿನಲ್ಲೇ ಕುಳಿತು ಮಾಧ್ಯಮಗಳೊಂದಿಗೆ ಮಾತನಾಡಿದ ವಕೀಲ ಓಜಸ್ವಿ ಗೌಡ, “ಪೊಲೀಸರಿಗೆ ಶರಣಾಗತಿ ಆಗಲು ಬಯಸಿದ್ದ ವ್ಯಕ್ತಿಯು ನಮ್ಮ ಮೂಲಕವೇ ಪತ್ರವನ್ನು ಬರೆದಿದ್ದಾರೆ. ಇದು ಸತ್ಯಾಂಶದಿಂದ ಕೂಡಿದೆ. ಈ ಬಗ್ಗೆ ಎಸ್‌ಪಿಯವರ ಜೊತೆ ಮಾತನಾಡಲು ಬಂದಿದ್ದೆವು. ಎಸ್‌ಪಿ ಜೊತೆ ಮಾತನಾಡಲು ಇರುವ ವಿಚಾರದ ಬಗ್ಗೆ ಸದ್ಯ ಯಾವುದೇ ಮಾಹಿತಿ ನೀಡಲು ಬಯಸುವುದಿಲ್ಲ. ನೋ ಕಮೆಂಟ್ಸ್” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಓಜಸ್ವಿ ಗೌಡ

“ಎಸ್‌ಪಿಯವರ ಭೇಟಿ ಮಾಡಿ ಎಲ್ಲ ವಿಚಾರಗಳನ್ನು ತಿಳಿಸಲೆಂದು ಬಂದಿದ್ದೆವು. ಆದರೆ ಅವರು ಇವತ್ತು ಕಚೇರಿಯಲ್ಲಿ ಲಭ್ಯವಿಲ್ಲ ಎಂದು ಬಂದ ಬಳಿಕವಷ್ಟೇ ತಿಳಿಯಿತು. ನಾವು ಅವರನ್ನೇ ಕಾಣಬೇಕಿದೆ. ಹಾಗಾಗಿ, ಇದರ ಬಗ್ಗೆ ಯಾವುದೇ ಕಮೆಂಟ್ಸ್ ಮಾಡಲ್ಲ. ಪತ್ರದಲ್ಲಿನ ವಿಚಾರ ಎಲ್ಲವೂ ಸತ್ಯ” ಎಂದು ವಕೀಲ ಓಜಸ್ವಿ ಗೌಡ ತಿಳಿಸಿದರು.

ಏನಿದು ಬೆಳವಣಿಗೆ?

ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಗ್ರಾಮದಲ್ಲಿ ನಡೆದ ಕೊಲೆಗಳು ಮತ್ತು ಅತ್ಯಾಚಾರಗಳ ಪ್ರಕರಣಗಳಿಗೆ ಸಂಬಂಧಿಸಿದಂತೆ ಧರ್ಮಸ್ಥಳ ಠಾಣೆಗೆ ಬಂದು ಶರಣಾಗುತ್ತೇನೆಂದು ವ್ಯಕ್ತಿಯೊಬ್ಬ ಬರೆದಿರುವ ಪತ್ರ ವೈರಲ್ ಆಗಿತ್ತು. ಬೆಂಗಳೂರಿನ ವಕೀಲರಾದ ಓಜಸ್ವಿ ಗೌಡ ಮತ್ತು ಸಚಿನ್ ಎಸ್. ದೇಶಪಾಂಡೆ ಎಂಬವರ ಹೆಸರಿನಲ್ಲಿ ಈ ಪತ್ರ ಹರಿದಾಡಿತ್ತು.

ಪತ್ರದಲ್ಲಿ,”ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಹಲವಾರು ಹತ್ಯೆ ಮತ್ತು ಹೆಣ್ಣು ಮಕ್ಕಳ ಮೇಲಿನ ಅತ್ಯಾಚಾರ ಮತ್ತು ಕೊಲೆಗಳನ್ನು ಮುಚ್ಚಿಹಾಕುವ ಸಲುವಾಗಿ, ಮೃತದೇಹಗಳನ್ನು ಹೂತು ಹಾಕಿದ್ದ ವ್ಯಕ್ತಿಯೊಬ್ಬ ತನ್ನ ಪಾಪಪ್ರಜ್ಞೆಯನ್ನು ಪರಿಹರಿಸಿಕೊಳ್ಳಲು ಧರ್ಮಸ್ಥಳ ಪೊಲೀಸ್ ಠಾಣೆಗೆ ಕೂಡಲೇ ಹಾಜರಾಗಿ ಶರಣಾಗುವ ನಿರ್ಧಾರ ಮಾಡಿರುತ್ತಾನೆ. ಮತ್ತು ತಾನು ಹೂತು ಹಾಕಿರುವ ಮೃತದೇಹಗಳನ್ನು ಪೋಲೀಸರ ಸಮ್ಮುಖದಲ್ಲಿ ಹೊರತೆಗೆಯುವ ನಿರ್ಧಾರ ಮಾಡಿರುತ್ತಾನೆ. ಇತ್ತೀಚೆಗೆ ಹೊರತೆಗೆದ ಕಳೇಬರವೊಂದನ್ನು ಪೊಲೀಸರಿಗೆ ಒಪ್ಪಿಸುವುದಾಗಿ ಹೇಳಿದ್ದಾನೆ” ಎಂದು ಉಲ್ಲೇಖಿಸಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...