ಬೀದರ್ ಎಪಿಎಂಸಿಗೆ 80 ಎಕರೆ ಜಮೀನು ನೀಡಲು ಪತ್ರ

Date:

ಬೀದರ್ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಕನಿಷ್ಠ 60 ರಿಂದ 80 ಎಕರೆ ಸರ್ಕಾರಿ ಜಮೀನು ಉಚಿತವಾಗಿ ನೀಡಲು ಜಿಲ್ಲಾಧಿಕಾರಿಗೆ ಎಪಿಎಂಸಿ ಕಾರ್ಯದರ್ಶಿ ಪತ್ರ ಬರೆದಿದ್ದಾರೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರು ಮಂಗಳವಾರ ವಿಧಾನ ಪರಿಷತ್ತಿನಲ್ಲಿ ತಿಳಿಸಿದರು.

ವಿಧಾನ ಪರಿಷತ್‌ ಸದಸ್ಯ ಭೀಮರಾವ್‌ ಪಾಟೀಲ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ಪ್ರಸ್ತುತ ಬೀದರ್ ಎಪಿಎಂಸಿ 39 ಎಕರೆ 28 ಗುಂಟೆ ಜಮೀನು ಹೊಂದಿದ್ದು. ಈಗಾಗಲೇ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಇನ್ನೂ ಎಪಿಎಂಸಿ ವಹಿವಾಟು ವಿಸ್ತರಣೆಗೆ ಸ್ಥಳಾವಕಾಶದ ಕೊರತೆ ಇರುವ ಕಾರಣ ಬೀದರ್ ಸುತ್ತಮುತ್ತ 80 ಎಕರೆ ಸರ್ಕಾರಿ ಜಮೀನು ಒದಗಿಸಲು ಕೋರಲಾಗಿದೆ’ ಎಂದರು.

‘ಬೀದರ್ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಅಧಿಸೂಚಿತ ಕೃಷಿ ಉತ್ಪನ್ನಗಳ ಮಾರುಕಟ್ಟೆ ಪ್ರಾಂಗಣದ ವಿಸ್ತರಣೆಗಾಗಿ ಅನುಮೋದಿತ ದರದ ಶೇ50ರ ರಿಯಾಯಿತಿ ದರದಲ್ಲಿ ನೂರು ಎಕರೆ ಜಮೀನು ಮಂಜೂರು ಮಾಡುವಂತೆ ಕೃಷಿ ಮಾರಾಟ ಇಲಾಖೆ ನಿರ್ದೇಶಕರು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗೆ ಕೋರಿದ್ದಾರೆ’ ಎಂದು ಸಚಿವರು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೀದರ್‌ | ಬಾಲ್ಯವಿವಾಹ ತಡೆದ ಅಧಿಕಾರಿಗಳು

ಬೀದರ್ ಜಿಲ್ಲೆಯ ಬೀದರ್, ಔರಾದ್ (ಬಿ), ಹುಮನಾಬಾದ್, ಬಸವಕಲ್ಯಾಣ ಮತ್ತು ಭಾಲ್ಕಿಯಲ್ಲಿ ಎಪಿಎಂಸಿಗಳು ಕಾರ್ಯನಿರ್ವಹಿಸುತ್ತಿವೆ. ಔರಾದ್ ಎಪಿಎಂಸಿ 45 ಎಕರೆ, ಹುಮನಾಬಾದ್ 16 ಎಕರೆ 15 ಗುಂಟೆ, ಬಸವಕಲ್ಯಾಣ 16 ಎಕರೆ 8 ಗುಂಟೆ ಹಾಗೂ ಭಾಲ್ಕಿ ಎಪಿಎಂಸಿ 36 ಎಕರೆ 37 ಗುಂಟೆ ಜಮೀನು ಹೊಂದಿದೆ. ಈ ಮಾರುಕಟ್ಟೆಗಳಲ್ಲಿ ಕೃಷಿ ಉತ್ಪನ್ನಗಳ ಮಾರಾಟಕ್ಕೆ ಸ್ಥಳಾವಕಾಶದ ಕೊರತೆ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...