ರಾಮನಗರ | ಕನಕಪುರ ಹೆರಿಗೆ ಆಸ್ಪತ್ರೆಗೆ ಡಾ.ದಾಕ್ಷಾಯಿಣಿ ಮರು ನೇಮಕಕ್ಕೆ ಕುಮಾರಸ್ವಾಮಿ ವಿರೋಧ

Date:

ಭ್ರೂಣಪತ್ತೆ ಸ್ಕ್ಯಾನಿಂಗ್ ಯಂತ್ರದ ದುರ್ಬಳಕೆ ಮಾಡಿಕೊಂಡು ಭ್ರೂಣಪತ್ತೆ ಮತ್ತು ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿ ಪಿಸಿಪಿಎನ್‌ಡಿಟಿ ಕಾಯಿದೆ ನಿಯಮ ದುರುಪಯೋಗದ ಅಡಿಯಲ್ಲಿ ದೂರು ದಾಖಲಾಗಿ, ತನಿಖಾ ಹಂತದಲ್ಲಿರುವ ಆರೋಪಿ ಡಾ. ದಾಕ್ಷಾಯಣಿ ಮತ್ತೆ ಕನಕಪುರ ಹೆರಿಗೆ ಆಸ್ಪತ್ರೆಗೆ ಬರಲು ನಡೆಸುತ್ತಿರುವ ನಡೆಯನ್ನು ಪ್ರಗತಿಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕುಮಾರಸ್ವಾಮಿ ವಿರೋಧಿಸಿದ್ದಾರೆ.

ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರಿಗೆ ಪತ್ರ ಬರೆದಿರುವ ಅವರು, “ಡಾ. ದಾಕ್ಷಾಯಿಣಿ ಸಾಕ್ಷಿ ನಾಶ ಮಾಡುವ ಉದ್ದೇಶದಿಂದ ಮತ್ತೆ ಬರುತ್ತಿದ್ದು, ಅದಕ್ಕೆ ಆಸ್ಪದ ಕೊಡಬಾರದು” ಎಂದು ಒತ್ತಾಯಿಸಿದ್ದಾರೆ.

ವೈದ್ಯೆ ದಾಕ್ಷಾಯಿಣಿ ವಿರುದ್ಧ ಕನಕಪುರ ಸಿವಿಲ್ ನ್ಯಾಯಾಲಯದಲ್ಲಿ ದಿನಾಂಕ 23/04/2024ರಂದು ಕ್ರಿಮಿನಲ್ ಮೊಕದ್ದಮೆ ದಾಖಲಾಗಿರುತ್ತದೆ. ತನಿಖಾ ಹಂತದಲ್ಲಿರುವ ಈ ಸಂದರ್ಭದಲ್ಲಿ ಸ್ಕ್ಯಾನಿಂಗ್ ಯಂತ್ರವನ್ನು ಕನಕಪುರ ಸಾರ್ವಜನಿಕ ಹೆರಿಗೆ ಆಸ್ಪತ್ರೆಯ ಕೊಠಡಿಯಲ್ಲಿ ಸೀಜ್ ಮಾಡಲಾಗಿದೆ ಮತ್ತು ಮೂರು ಜನ ಸಿಬ್ಬಂದಿಗಳ ಲಿಖಿತವಾಗಿ ಡಾ. ದಾಕ್ಷಾಯಿಣಿ ಸ್ಕ್ಯಾನಿಂಗ್ ಯಂತ್ರವನ್ನು ಉಪಯೋಗಿಸುತ್ತಿದ್ದರು ಎಂದು ಜಿಲ್ಲಾ ಆರೋಗ್ಯ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ಕೊಟ್ಟ ಸಂದರ್ಭದಲ್ಲಿ ಹೇಳಿಕೆ ದಾಖಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1001189549

ಈ ಎಲ್ಲ ಆರೋಪದ ಮೇಲೆ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಿಕ್ಷಾರ್ಹ ವರ್ಗಾವಣೆ ಮಾಡಲಾಗಿತ್ತು. ಅಲ್ಲಿಗೆ ಹೋಗಿ ಕೆಲಸಕ್ಕೆ ವರದಿ ಮಾಡಿಕೊಂಡಿಲ್ಲ. ಅಸಹಜ ಕಾರಣಗಳನ್ನು ಕೊಟ್ಟು ಮೇಲಾಧಿಕಾರಿಗಳಾದ ತಮ್ಮ ಆದೇಶಕ್ಕೆ ಮತ್ತು ಕಾನೂನಿಗೂ ಗೌರವ ಕೊಡದೆ ಉದ್ದಟತನ ಪ್ರದರ್ಶನ ಮಾಡುತ್ತಿರುವ ನಡೆಯನ್ನು ಗಮನಿಸಿ ಸೂಕ್ತ ತೀರ್ಮಾನಕ್ಕೆ ಬರಬೇಕು ಎಂದು ಕುಮಾರಸ್ವಾಮಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಡಾ.‌ದಾಕ್ಷಾಯಣಿಯವರನ್ನು ಯಾವುದೇ ಕಾರಣಕ್ಕೂ ತನಿಖೆ ಮುಗಿದು, ಸತ್ಯಾಸತ್ಯತೆ ಗೊತ್ತಾಗುವ ತನಕ ರಾಮನಗರ ಜಿಲ್ಲೆಯ ಕನಕಪುರ ತಾಲೂಕು ಹೆರಿಗೆ ಆಸ್ಪತ್ರೆಗೆ ಮರು ನೇಮಕ ಮಾಡಬಾರದೆಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...