ಯಕ್ಷಗಾನದಲ್ಲಿ ಹೊಸಬೆಳಕು ಮೂಡಿಸಿದ ಮೇರು ವ್ಯಕ್ತಿತ್ವ ಲೀಲಾವತಿ ಬೈಪಾಡಿತ್ತಾಯ: ಡಾ. ಪ್ರಭಾಕರ ಜೋಶಿ

Date:

ಭಾಗವತರಾದ ಲೀಲಾವತಿ ಬೈಪಾಡಿತ್ತಾಯ ಅವರು ಯಕ್ಷಗಾನದಲ್ಲಿ ಹೊಸಬೆಳಕು ಮೂಡಿಸಿದ ಮೇರು ವ್ಯಕ್ತಿತ್ವ ವನ್ನು ಹೊಂದಿದ್ದರು ಎಂದು ಯಕ್ಷಗಾನ ವಿದ್ವಾಂಸ ಡಾ.ಪ್ರಭಾಕರ ಜೋಶಿ ಅವರು ಹೇಳಿದರು.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಶ್ರೀ ಮಹಾಗಣಪತಿ ಮಹಿಳಾ ಯಕ್ಷಗಾನ ಸಂಘದ ಸಹಯೋಗದೊಂದಿಗೆ ಮಂಗಳೂರಿನ ತುಳು ಭವನದಲ್ಲಿ ರವಿವಾರ ಹಮ್ಮಿಕೊಂಡ ಮಹಿಳಾ ಭಾಗವತೆ ದಿ| ಲೀಲಾವತಿ ಬೈಪಾಡಿತ್ತಾಯ ಸಂಸ್ಮರಣಾ ಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.

“ಮಧೂರು ಯಕ್ಷಗಾನ ಪರಿಸರದಲ್ಲಿ ಬೆಳೆದ ಲೀಲಾವತಿ ಬೈಪಾಡಿತ್ತಾಯರು ಹಲವು ಸವಾಲುಗಳ ಮಧ್ಯೆ ಪೂರ್ಣಾವಧಿಯಾಗಿ ವೃತ್ತಿ ಪರ ಯಕ್ಷಗಾನ ಮೇಳದಲ್ಲಿ ಪ್ರಥಮವಾಗಿ ತೊಡಗಿಸಿಕೊಂಡ ಮಹಿಳಾ ಭಾಗವತರಾಗಿದ್ದಾರೆ. ಲೀಲಾವತಿಯವರ ಮೊದಲು ಯಕ್ಷಗಾನ ರಂಗಕ್ಕೆ ಹವ್ಯಾಸಿ ಕಲಾವಿದರಾಗಿ ಮಹಿಳೆಯರ ಪ್ರವೇಶವಾಗಿದೆ. ಆದರೆ, ಲೀಲಾವತಿ ಬೈಪಾಡಿತ್ತಾಯ ಅವರು ವೃತ್ತಿಪರ ಯಕ್ಷಗಾನ ರಂಗದಲ್ಲಿ ಅಚ್ಚಳಿಯದ ನೆನಪು ಉಳಿಯುವಂತೆ ಸಾಧನೆ ಮಾಡಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಲೀಲಾವತಿ ಅವರು ವ್ಯವಸಾಯಿ ಪೂರ್ಣಾ ಕಲಾವಿದೆಯಾಗಿ 25 ವರ್ಷ ತಿರುಗಾಟ ನಡೆಸಿರುವುದು ಅಸಾಧಾರಣ ದಾಖಲೆ.ಅವರು ವೃತ್ತಿಪರ ಮಹಿಳಾ ಭಾಗವತರಾಗಿ ಮೇಳದ ತಿರುಗಾಟ ನಡೆಸಿದಾಗ ಅವರ ಬಗ್ಗೆ ಸಹಾನುಭೂತಿ, ನಿರೀಕ್ಷೆ ಇತ್ತು. ಯಕ್ಷಗಾನ ಭಾಗವತರಾಗಿ ಯಾವುದೇ ಕಪ್ಪುಚುಕ್ಕೆ ಇಲ್ಲದ ವ್ಯಕ್ತಿತ್ವ ಅವರದ್ದು” ಎಂದು ಬಣ್ಣಿಸಿದರು.

ಲೀಲಾವತಿ ಅವರು ಸೇರಿದಂತೆ ಯಕ್ಷಗಾನ ಕಲಾವಿದರ ಮಾಹಿತಿಯನ್ನು ದಾಖಲೀಕರಿಸುವ ಕೆಲಸ ತುಳು ಅಕಾಡೆಮಿಯಿಂದ ಆಗಬೇಕಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಮಂಗಳೂರು | ಬಂಟ್ವಾಳ-ಮೂಡುಬಿದ್ರೆ ಮಾರ್ಗಕ್ಕೆ ಬಸ್‌ ಸೌಲಭ್ಯ ಕಲ್ಪಿಸಲು NSUI ಮನವಿ

ಲೀಲಾವತಿ ಅವರ ಶಿಷ್ಯ ಭಾಗವತ ಹಾಗೂ ಸಂಗೀತ ಕಲಾವಿದ ನಾದ ಮಣಿನಾಲ್ಕೂರು ಮಾತನಾಡಿ, “ಲೀಲಾವತಿ ಬೈಪಡಿತ್ತಾಯರು ನನ್ನನ್ನು ಸೇರಿದಂತೆ ಸಾಕಷ್ಟು ಕಲಾವಿದರ ಬೆಳವಣಿಗೆಗೆ ಕಾರಣರಾಗಿದ್ದಾರೆ. ಅವರಿಂದಾಗಿ ನಾನು ಭಾಗವತಿಕೆಯ ಅನೇಕ ವಿಷಯಗಳ ಬಗ್ಗೆ ಸ್ಪಷ್ಟತೆಯನ್ನು ಪಡೆದುಕೊಂಡೆ” ಎಂದರು.

ಕಾರ್ಯಕ್ರಮದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ, ಲೀಲಾವತಿ ಬೈಪಾಡಿತ್ತಾಯ ಅವರ ಪತಿ ಹರಿನಾರಾಯಣ ಬೈಪಾಡಿತ್ತಾಯ, ಉರ್ವಸ್ಟೋರ್ ಶ್ರೀ ಮಹಾಗಣಪತಿ ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷ ಎಸ್ ‌ಸುರೇಂದ್ರರಾವ್, ಮಾಜಿ ಮೇಯರ್ ಶಶಿಧರ ಹೆಗ್ಡೆ, ಕಲಾವಿದ ನಾದ ಮಣಿನಾಲ್ಕೂರು, ಅವಿನಾಶ್ ಬೈಪಾಡಿತ್ತಾಯ, ಶ್ರೀ ಮಹಾ ಗಣಪತಿ ಮಹಿಳಾ ಯಕ್ಷಗಾನ ಸಂಘದ ನಿರ್ದೇಶಕಿ ಪೂರ್ಣಿಮಾ ಯತೀಶ್ ರೈ, ತುಳು ಸಾಹಿತ್ಯ ಅಕಾಡೆಮಿಯ ಸದಸ್ಯ ಸಂತೋಷ್ ಶೆಟ್ಟಿ ಹಾಗೂ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...