ಲಿಂಗಸೂಗೂರು | ಕೃಷಿ ಉಪ ನಿರ್ದೇಶಕರ ಕಛೇರಿ ಸ್ಥಳಾಂತರ ಖಂಡಿಸಿ ಉಪವಾಸ ಸತ್ಯಾಗ್ರಹ; ಶಿವಪುತ್ರ ನಂದಿಹಾಳ

Date:

ಲಿಂಗಸುಗೂರು ಕೃಷಿ ಉಪ ನಿರ್ದೇಶಕರ ಕಛೇರಿ ಸಿಂಧನೂರಿಗೆ ಸ್ಥಳಾಂತರ ಖಂಡಿಸಿ ರಾಜ್ಯ ರೈತ ಹಸಿರು ಸೇನೆ ವತಿಯಿಂದ ಉಪವಾಸ ಸತ್ಯಾಗ್ರಹ ಇಂದಿನಿಂದ ಹಮ್ಮಿಕೊಳ್ಳಲಾಗಿದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶಿವಪುತ್ರ ಗೌಡ ನಂದಿಹಾಳ ತಿಳಿಸಿದರು.

ಕಳೆದ 13 ದಿನಗಳಿಂದ ಅನಿರ್ಧಿಷ್ಟಾವಧಿ ಹೋರಾಟ ಮಾಡುತ್ತಿದ್ದರು ಅಧಿಕಾರಿಗಳು ಸ್ಪಂದಿಸದ ಕಾರಣ ಉಪವಾಸ ಸತ್ಯಾಗ್ರಹ ಇಂದಿನಿಂದ ಹಮ್ಮಿಕೊಳ್ಳಲಾಗಿದೆ. ಲಿಂಗಸೂಗೂರು ಕೃಷಿ ಉಪ ನಿರ್ದೇಶಕರ ಕಛೇರಿಯನ್ನು ಸಿಂಧನೂರಿಗೆ ಸ್ಥಳಾಂತರ ಮಾಡಿದ್ದನ್ನು ವಿರೋಧಿಸಿ ಹೋರಾಟ ನಡೆಯುತ್ತಿದ್ದರು ಜಿಲ್ಲಾಧಿಕಾರಿಗಳು ಸಂಬಂಧಪಟ್ಟ ಅಧಿಕಾರಿಗಳು ತಮಗೆ ಸಂಬಂಧವಿಲ್ಲದಂತೆ ಇದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಸ್ಥಳಾಂತರ ವಿರೋಧಿಸಿ ತಾಲ್ಲೂಕಿನ ನಾನಾ ಪ್ರಗತಿಪರ ಸಂಘಟನೆಗಳು ಪ್ರತಿಭಟನೆಗೆ ಬೆಂಬಲ ನೀಡುತ್ತಿದ್ದಾರೆ. ಹೀಗೆ ನಿರ್ಲಕ್ಷ್ಯ ಮುಂದುವರೆಸಿದರೆ ಮುಂದಿನ ದಿನಗಳಲ್ಲಿ ಕುಟುಂಬ ಸಮೇತ ಉಪವಾಸ ಸತ್ಯಾಗ್ರಹ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಉಪವಾಸ ಸತ್ಯಾಗ್ರಹದಲ್ಲಿ ಆರೋಗ್ಯದಲ್ಲಿ ತೊಂದರೆ ಉಂಟಾದರೆ ಅದಕ್ಕೆ ಸರ್ಕಾರವೇ ನೇರ ಹೊಣೆಯಾಗುತ್ತದೆಂದು ಎಚ್ಚರಿಕೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಯಚೂರು | ದಲಿತ ಯುವಕನ ಹತ್ಯೆ ಪ್ರಕರಣ; ಆರೋಪಿತರ ಬಂಧನಕ್ಕೆ ಭೀಮ್‌ ಆರ್ಮಿ ಆಗ್ರಹ

ಪ್ರತಿಭಟನೆಯಲ್ಲಿ ಮುಖಂಡರಾದ ಆನಂದ, ಹನುಮನಗೌಡ,ಅಮರೇಶ ಪವಾರ,ಲಕ್ಷ್ಮಣ, ಅಮರೇಶ ಗೋಸ್ಲೆ,ಹನುಮಂತ ಕುರ್ಲಿ, ಬಸವರಾಜ ಗೋಸ್ಲೆ, ಶರೀಫ್, ಸಿದ್ದಪ್ಪ, ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...