ಲಿಂಗಸುಗೂರು | ಕರ್ತವ್ಯಲೋಪ; ಪುರಸಭೆ ಮುಖ್ಯಾಧಿಕಾರಿ ಅಮಾನತು

Date:

ಕರ್ತವ್ಯಲೋಪ, ಹಣ ದುರ್ಬಳಕೆ ಹಾಗೂ ಬೇಜವಾಬ್ದಾರಿತನ ಆರೋಪದಡಿಯಲ್ಲಿ ಲಿಂಗಸುಗೂರು ಪುರಸಭೆಯ ಮುಖ್ಯಾಧಿಕಾರಿ ರೆಡ್ಡಿರಾಯನಗೌಡ ಅವರನ್ನು ರಾಯಚೂರು ಜಿಲ್ಲಾಧಿಕಾರಿ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಅಮಾನತುಗೊಂಡ ಮುಖ್ಯಾಧಿಕಾರಿ ರೆಡ್ಡಿ ರಾಯನಗೌಡ ಹಿರಿಯ ಆರೋಗ್ಯ ನಿರೀಕ್ಷಕರಾಗಿದ್ದಾರೆ. ಈ ಹಿಂದೆ ಮಸ್ಕಿ ಪುರಸಭೆಯ ಮುಖ್ಯಾಧಿಕಾರಿಕಾರಿಯಾಗಿದ್ದರು.

ಹಾಲಿ ಲಿಂಗಸುಗೂರು ಪುರಸಭೆಯ ಮುಖ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ರೆಡ್ಡಿ ರಾಯನಗೌಡ, ಮಸ್ಕಿ ಪುರಸಭೆ ಕಾರ್ಯಾಲಯಕ್ಕೆ ಪೀಠೋಪಕರಣಗಳ ಅಳವಡಿಕೆಗೆ 57.64 ಲಕ್ಷ ಮೊತ್ತದ ಕಾಮಗಾರಿ ನಿರ್ವಹಣೆಯಲ್ಲಿ ಸರ್ಕಾರದ ನಿಯಮಗಳ ಪಾಲನೆ ಮಾಡದೇ ಕರ್ತವ್ಯಲೋಪವೆಸಗಿದ್ದರು.

ಇದನ್ನೂ ಓದಿ: ರಾಯಚೂರು | ನಾಲೆಗಳಿಗೆ ಏ.20ವರಗೆ ನೀರು ಹರಿಸಲು ರೈತರ ಅಹೋರಾತ್ರಿ ಧರಣಿ

ಪೀಠೋಪಕರಣ ಖರೀದಿಯಲ್ಲಿ ಅಕ್ರಮ ನಡೆದಿದೆ ಎಂದು ಕರವೇ ಅಧ್ಯಕ್ಷ ದುರ್ಗರಾಜ ವಟಗಲ್‌ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದರು. ಜಿಲ್ಲಾಧಿಕಾರಿ ತನಿಖೆ ನಡೆಸಿ, ಆರೋಪ ಸಾಬೀತಾದ ಹಿನ್ನೆಲೆ ರೆಡ್ಡಿ ರಾಯನಗೌಡ ಅವರನ್ನು ಅಮಾನತುಗೊಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...