ಲಿಂಗಸುಗೂರು | ರಾಜ್ಯದಲ್ಲಿನ ಖಾಲಿ ಹುದ್ದೆಗಳನ್ನು ಒಳ ಮೀಸಲಾತಿ ಆಧರಿಸಿ ಭರ್ತಿಗಾಗಿ ಒತ್ತಾಯಿಸಿ ಪ್ರತಿಭಟನೆ

Date:

ಒಳ ಮೀಸಲಾತಿ ಆಧರಿಸಿ ರಾಜ್ಯದಲ್ಲಿ ಖಾಲಿಯಿರುವ 56,342 ಹುದ್ದೆಗಳನ್ನು ಭರ್ತಿ ಮಾಡಬೇಕು’ ಎಂದು ಆಗ್ರಹಿಸಿ ಒಳ ಮೀಸಲಾತಿ ಲಿಂಗಸುಗೂರು ಸಮಿತಿ ತಾಲ್ಲೂಕು ಘಟಕದಿಂದ ಪ್ರತಿಭಟನೆ ನಡೆಸಲಾಯಿತು.

ನಗರದ ಪ್ರವಾಸಿ ಮಂದಿರದಿಂದ ಗಡಿಯಾರ ಚೌಕ್, ಅಂಬೇಡ್ಕರ್ ವೃತ್ತ ಮೂಲಕ ಸಹಾಯಕ ಆಯುಕ್ತ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಗ್ಯಾರಂಟಿ ಅನುಷ್ಠಾನ ಜಿಲ್ಲಾಧ್ಯಕ್ಷರಾದ ಪಾಮಯ್ಯ ಮುರಾರಿ ಅವರು ಒಳ ಮೀಸಲಾತಿ ಅನ್ವಯಿಸದೇ ನೇಮಕಾತಿ ಮಾಡಲು ಸೂಚಿಸಿರುವುದು ಮಾದಿಗ ಸಮುದಾಯದ 35 ವರ್ಷಗಳ ದೀರ್ಘ ಹೋರಾಟಕ್ಕೆ ಮಾಡಿದ ದೊಡ್ಡ ಅನ್ಯಾಯ ಮತ್ತು ನಂಬಿಕೆ ದ್ರೋಹವಾಗಿದೆ. 56,342 ಖಾಲಿ ಹುದ್ದೆಗಳ ಭರ್ತಿಗೆ ಒಳ ಮೀಸಲಾತಿಯ ಶೇ 15ರಷ್ಟು ಹಂಚಿಕೆಯನ್ನು ಸ್ಪಷ್ಟವಾಗಿ ಅನ್ವಯಿಸಬೇಕು.

ನ್ಯಾ. ನಾಗಮೋಹನ್ ದಾಸ್ ವರದಿಯ ಆಧಾರದ ಮೇಲೆ ಪರಿಶಿಷ್ಟ ಜಾತಿಗಳನ್ನು ಗ್ರೂಪ್ ಎ, ಬಿ, ಸಿ ಎಂದು ವರ್ಗೀಕರಿಸಲಾಗಿದೆ. ಒಳ ಮೀಸಲಾತಿ ಉಪ ವರ್ಗೀಕರಣವನ್ನು ಜಾರಿಗೊಳಿಸಬೇಕು. ಶೇ 56 ರಷ್ಟು ಮೀಸಲಾತಿ ವ್ಯವಸ್ಥೆಯನ್ನು ಸಂವಿಧಾನದ 9ನೇ ಅನುಸೂಚಿಯಲ್ಲಿ ಸೇರಿಸಲು ಅಗತ್ಯ ಕ್ರಮ ವಹಿಸಬೇಕು’ ಎಂದು ಒತ್ತಾಯಿಸಿದರು.

‘ಶೇ 56ರಷ್ಟು ಮೀಸಲಾತಿ ಪ್ರಮಾಣವನ್ನು ನ್ಯಾಯಾಲಯದ ಮುಂದೆ ದೃಢವಾಗಿ ಸಮರ್ಥಿಸಬೇಕು. ನಾಗಮೋಹನ ದಾಸ್ ವರದಿ ಪ್ರಕಾರ ಅಲೆಮಾರಿ ಸಮುದಾಯಕ್ಕೆ ಪ್ರತ್ಯೇಕವಾಗಿ ಶೇ 1ರಷ್ಟು ಮೀಸಲಾತಿ ನೀಡಬೇಕು. ಇಲ್ಲವೇ ಆ ಸಮುದಾಯಗಳನ್ನು ಎ ಕೆಟಗರಿಗೆ ಸಂಬಂಧಿಸಿದ ಮಾದಿಗ ಸಂಬಂಧಿತ ಜಾತಿಗಳ ಪಟ್ಟಿಗೆ ಸೇರಿಸಬೇಕು. ನ್ಯಾಯಾಲಯದ ಅಂತಿಮ ತೀರ್ಪಿಗೆ ಒಳಪಟ್ಟು ಪರಿಶಿಷ್ಟ ಜಾತಿಗಳಿಗೆ ಶೇ 2 ಹಾಗೂ ಪರಿಶಿಷ್ಟ ಪಂಗಡಗಳಿಗೆ ಶೇ 4ರಷ್ಟು ಹುದ್ದೆಗಳನ್ನು ಪ್ರತ್ಯೇಕವಾಗಿ ಪರಿಗಣಿಸಿ ಭರ್ತಿ ಮಾಡುವ ಕುರಿತು ಸ್ಪಷ್ಟ ನಿರ್ಧಾರ ಕೈಗೊಳ್ಳಬೇಕು’ ಎಂದರು.

ಈ ಸುದ್ದಿ ಓದಿದ್ದೀರಾ? ರಾಜ್ಯ ಬಜೆಟ್‌ | ರಾಯಚೂರಿನ ನಿರೀಕ್ಷೆಗಳೇನು? ಉಚಿತ ವಿದ್ಯುತ್‌, ಖಾಲಿ ಹುದ್ದೆ ಭರ್ತಿಗೆ ಮುಂದಾಗುವುದೇ ಸರ್ಕಾರ?

ಈ ಹಕ್ಕೊತ್ತಾಯಗಳಿಗೆ ಸರ್ಕಾರ ತಕ್ಷಣ ಸ್ಪಂದಿಸದಿದ್ದರೆ, ಮಾದಿಗ ಸಮುದಾಯದಿಂದ ರಾಜ್ಯದಾದ್ಯಂತ ತೀವ್ರ ಹೋರಾಟ ನಡೆಸಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡ ಎಚ್ ಬಿ ಮುರಾರಿ, ಎಸ್ ಸಿ ಎಸ್ ಟಿ ದೌರ್ಜನ್ಯ ತಡೆ ಅಧ್ಯಕ್ಷ ಮೋಹನ್ ಗೋಸ್ಲೆ, ದುರುಗಪ್ಪ ಅಗ್ರಹಾರ, ಇನ್ನಿತರರು ಹಾಜರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...