ಈಜಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಲಿಂಗಸುಗೂರು ತಾಲ್ಲೂಕು ಬೋಗಾಪುರ ಗ್ರಾಮದ ಕೆರೆಯಲ್ಲಿ ನಡೆದಿದೆ.
ಪರಶುರಾಮ (20) ಮೃತಪಟ್ಟ ಯುವಕ ಎನ್ನಲಾಗಿದೆ. ತಾಲ್ಲೂಕಿನ ಖೈರವಾಡಿಗಿ ಗ್ರಾಮದ ನಿವಾಸಿ ಎಂದು ತಿಳಿದುಬಂದಿದೆ. ಗೆಳೆಯರ ಜೊತೆ ಈಜಾಡಲು ಹೋಗಿದ್ದು, ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ ಎಂದು ಹೇಳಲಾಗಿದೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ಧರ್ಮದ ಹೆಸರಿನಲ್ಲಿ ದೌರ್ಜನ್ಯ; ಫ್ಯಾಸಿಸಂಗೆ ವಿರುದ್ಧ ಸಾಂಸ್ಕೃತಿಕ ಹೋರಾಟದ ಅಗತ್ಯ
ಮಾಹಿತಿ ತಿಳಿಯುತ್ತಿದ್ದಂತೆ ಮುದಗಲ್ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿಶಾಮಕ ಸಿಬ್ಬಂದಿಯವರು ಹುಡುಕಾಟ ನಡೆಸಿದ್ದಾರೆ.





