ಬೀದರ್‌ | ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕರನ್ನಾಗಿ ಘೋಷಿಸಿದ ಪಕ್ಷಕ್ಕೆ ಲಿಂಗಾಯತರು ಬೆಂಬಲಿಸಿ : ರೊಟ್ಟೆ

Date:

ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ ಪಕ್ಷಕ್ಕೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಲಿಂಗಾಯತರು ಬೆಂಬಲಿಸಬೇಕು ಎಂದು ವಿಶ್ವಕ್ರಾಂತಿ ದಿವ್ಯಪೀಠದ ಅಧ್ಯಕ್ಷ ಓಂಪ್ರಕಾಶ ರೊಟ್ಟೆ ಹೇಳಿದರು.

ಬೀದರ್‌ನ ಪತ್ರಿಕಾಭವನದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, “ಲಿಂಗಾಯತ ಸ್ವತಂತ್ರ ಧರ್ಮದ ಮಾನ್ಯತೆಗಾಗಿ ಸಮಿತಿ ರಚಿಸಿ ಕೇಂದ್ರಕ್ಕೆ ವರದಿ ಸಲ್ಲಿಸಿದ ಸಿದ್ದರಾಮಯ್ಯ ನೇತ್ರತ್ವದ ಕಾಂಗ್ರೆಸ್‌ ಸರ್ಕಾರಕ್ಕೆ ಲಿಂಗಾಯತರು ಮತ ಚಲಾಯಿಸುವ ಮೂಲಕ ಕೋಮುವಾದಿ ಸರ್ಕಾರವನ್ನು ಸೋಲಿಸಬೇಕು ಎಂದು” ಮನವಿ ಮಾಡಿದರು.

“2017ರಲ್ಲಿ ಬೀದರ್‌ನಲ್ಲಿ ನಡೆದ ಲಿಂಗಾಯತ ಸ್ವತಂತ್ರ ಧರ್ಮ ಸಾಂವಿಧಾನಿಕ ಮಾನ್ಯತೆಗಾಗಿ ನಡೆದ ಹೋರಾಟದಲ್ಲಿ ಪಾಲ್ಗೊಳ್ಳುವಂತೆ ಸಂಸದ ಭಗವಂತ ಖೂಬಾರವರನ್ನುಆಹ್ವಾನಿಸಿದರೆ, ಲಿಂಗಾಯತ ಹೋರಾಟದಲ್ಲಿ ಭಾಗವಹಿಸಬಾರದೆಂದು ಸಂಘ ಪರಿವಾರದ ಆದೇಶವಿದೆʼ ಎಂದು ಉತ್ತರಿಸಿದರು. ದೆಹಲಿಯಲ್ಲಿ ಲಿಂಗಾಯತ ಹೋರಾಟ ನಡೆದ ವೇಳೆ ಪೊಲೀಸರು ಸಾವಿರಾರು ಲಿಂಗಾಯತರ ಮೇಲೆ ಲಾಟಿ ಪ್ರಹಾರ ನಡೆಸಿ ಬಂಧಿಸಿದರು. ಆದರೆ ಅಲ್ಲೇ ಇದ್ದ ಭಗವಂತ ಖೂಬಾ ನಮಗೆ ಸ್ಪಂದಿಸಲಿಲ್ಲ. ಇಂತಹ ಲಿಂಗಾಯತ ವಿರೋಧಿ ಸಂಸದರಿಗೆ ಲಿಂಗಾಯತರು ಯಾಕೆ ಮತ ಹಾಕಬೇಕು” ಎಂದು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಅಭಿವೃದ್ಧಿ ಪ್ರಚಾರದಿಂದ ಕೋಮು ಧೃವೀಕರಣಕ್ಕೆ ಮೋದಿ ಬದಲಾಗಿದ್ದೇಕೆ? ಗೆಲ್ಲುವುದಾ ದ್ವೇಷ ಭಾಷಣ?

ಬಿಜೆಪಿ ಕಾರ್ಯಕರ್ತರನ್ನು ಕಡೆಗಣಿಸಿದ್ದಾರೆಂದು ಸ್ವಪಕ್ಷೀಯರೇ ಭಗವಂತ ಖೂಬಾ ಅವರನ್ನು ವಿರೋಧಿಸಿ ಟಿಕೆಟ್‌ ಕೊಡಬೇಡಿ ಎಂದು ಹೈಕಮಾಂಡ್‌ಗೆ ಎಚ್ಚರಿಸಿದರು. ಆದರೆ ಸನಾತನ ಧರ್ಮಕ್ಕೆ ಗೊಂಬೆಯಂತೆ ಕುಣಿಯುವ ವ್ಯಕ್ತಿ ಭಗವಂತ ಖೂಬಾಗೆ ಮತ್ತೆ ಬಿಜೆಪಿ ಟಿಕೆಟ್‌ ನೀಡಿದೆ. ವೈದಿಕ ಸಿದ್ಧಾಂತ ಒಪ್ಪುವ ಭಗವಂತ ಖೂಬಾರನ್ನು ಸೋಲಿಸುವ ಮೂಲಕ ಲಿಂಗಾಯತರು ಕಲ್ಯಾಣ ನಾಡಿನಲ್ಲಿ ಬಸವತತ್ವ ಸಿದ್ಧಾಂತ ಒಪ್ಪುವ ಸರ್ಕಾರವನ್ನು ಬೆಂಬಲಿಸಬೇಕು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...