ಲೋಕಸಭಾ ಚುನಾವಣೆ | ರಾಯಚೂರು-ಯಾದಗಿರಿ ಕ್ಷೇತ್ರದಲ್ಲಿ ಜೆಡಿಎಸ್‌ ಸ್ಪರ್ಧೆಗೆ ಮನವಿ

Date:

ಕಲ್ಯಾಣ ಕರ್ನಾಟಕ ಜಿಲ್ಲೆಗಳ ಲೋಕಸಭಾ ಕ್ಷೇತ್ರಗಳ ಪೈಕಿ, ಒಂದು ಕ್ಷೇತ್ರದಲ್ಲಾದರೂ ಜೆಡಿಎಸ್‌ ಸ್ಪರ್ಧಿಸಬೇಕು. ರಾಯಚೂರು-ಯಾದಗಿರಿ ಕ್ಷೇತ್ರವನ್ನು ಜೆಡಿಎಸ್ ತನ್ನ ಪಾಲಿಗೆ ಪಡೆದು, ಪಕ್ಷದ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕು ಎಂದು ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ ದೇವೆಗೌಡರಿಗೆ ಮನವಿ ಮಾಡಿರುವುದಾಗಿ ಜೆಡಿಎಸ್ ಜಿಲ್ಲಾಧ್ಯಕ್ಷ ಎಂ ವಿರೂಪಾಕ್ಷಿ ಹೇಳಿದರು.

ರಾಯಚೂರಿನಲ್ಲಿ ಮಾಧ್ಯಮಗೋಷ್ಟಿ ಉದ್ದೇಶಿಸಿ ಅವರು ಮಾತನಾಡಿದರು. “ಜೆಡಿಎಸ್ ಪಕ್ಷಕ್ಕೆ ಜಿಲ್ಲೆಯಲ್ಲಿ ಮತಬ್ಯಾಂಕ್‌ ಇದ್ದು, ಪ್ರತಿ ಬಾರಿಯೂ ಇಬ್ಬರ ಶಾಸಕರನ್ನು ಜಿಲ್ಲೆಯ ಜನತೆ ಗೆಲ್ಲಿಸುತ್ತಾ ಬಂದಿದ್ದಾರೆ. ಇಬ್ಬರು ಕಡಿಮೆ ಅಂತರದಲ್ಲಿ ಸೋಲು ಅನುಭವಿಸಿದ್ದಾರೆ. ಮಾಜಿ ಸಚಿವ ವೆಂಕಟರಾವ್ ನಾಡಗೌಡ ಹಾಗೂ ಶಾಸಕಿ ಕರಿಯಮ್ಮ ನಾಯಕ ಸೇರಿದಂತೆ ಪಕ್ಷದ ಹಿರಿಯ ಮುಖಂಡರೊಂದಿಗೆ ಸೇರಿ ಪಕ್ಷದ ವರಿಷ್ಟರಲ್ಲಿ ಮನವಿ ಮಾಡಲಾಗಿದೆ. ಮಾನ್ವಿ ಕ್ಷೇತ್ರದ ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಎಂಬುವವರಿಗೆ ಟಿಕೆಟ್ ನೀಡುವಂತೆ ಒತ್ತಾಯಿಸಲಾಗಿದೆ. ಪಕ್ಷದ ನಾಯಕರು ಮನವಿಯನ್ನು ಆಲಿಸಿದ್ದು, ಸೂಕ್ತ ನಿರ್ಧಾರ ಕೈಗೊಳ್ಳುವಂತೆ ಆಗ್ರಹಿಸಲಾಗಿದೆ” ಎಂದರು.

ಈ ಸುದ್ದಿ ಒದಿದ್ದೀರಾ? ಹಾವೇರಿ | ಹಲವು ಬೇಡಿಕೆ ಈಡೇರಿಸುವಂತೆ ರೈತ ಸಂಘ ಆಗ್ರಹ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಲೋಕಸಭಾ ಕ್ಷೇತ್ರದದ ಎಲ್ಲ ವಿಧಾನಸಭಾ ಕ್ಷೇತ್ರಗಗಳಿಗೆ ಈಗಾಗಲೇ ಉಸ್ತುವಾರಿಗಳನ್ನು ನೇಮಿಸಲಾಗಿದೆ. ಬಿಜೆಪಿ ಕ್ಷೇತ್ರವಾರು ಜೆಡಿಎಸ್ ಉಸ್ತುವಾರಿಗಳು ಸಭೆ ನಡೆಸಿ ಚುನಾವಣಾ ಸಿದ್ದತೆ ನಡೆಸಲೂ ಕೂಡ ಪಕ್ಷದ ರಾಜ್ಯಾಧ್ಯಕ್ಷರು ಸೂಚನೆ ನೀಡಿದ್ದಾರೆ” ಎಂದರು.

ಈ ಸಂದರ್ಬದಲ್ಲಿ ಎನ್ ಶಿವಶಂಕರ್‌, ಬಿ ತಿಮ್ಮಾರೆಡ್ಡಿ, ನರಸಿಂಹನಾಯಕ, ವಿಶ್ವನಾಥ ಪಟ್ಟಿ, ಜಂಬುನಾಥ ಯಾದವ, ಹಂಪಯ್ಯನಾಯಕ, ನಾಗರಾಜಗೌಡ ಇದ್ದರು.

ವರದಿ : ಹಫೀಜುಲ್ಲ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...