ಬಿಬಿಎಂಪಿ ಅಧಿಕಾರಿ ಗಂಗಾಧರಯ್ಯ ನಿವಾಸ ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ

Date:

  • ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಎಸ್‌ಪಿ ಅಶೋಕ್ ನೇತೃತ್ವದಲ್ಲಿ ದಾಳಿ
  • 15 ಮಂದಿ ಲೋಕಾಯುಕ್ತ ಅಧಿಕಾರಿಗಳ ತಂಡದಿಂದ ಮುಂಜಾನೆಯಿಂದ ಶೋಧ

ವಿಧಾನಸಭಾ ಚುನಾವಣೆಗೆ ಕೆಲ ದಿನಗಳು ಬಾಕಿ ಇರುವಾಗಲೇ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಸೋಮವಾರ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಕೆಲ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ.

ಬೆಂಗಳೂರಿನ ಯಲಹಂಕದಲ್ಲಿರುವ ಬಿಬಿಎಂಪಿ ಎಡಿಟಿಪಿ ಗಂಗಾಧರಯ್ಯ ಅವರ ಮನೆ ಮೇಲೆ ಸೋಮವಾರ ಬೆಳಗ್ಗೆ ಲೋಕಾಯುಕ್ತ ದಾಳಿ ನಡೆಸಿದ್ದು, ಪರಿಶೀಲನೆ ನಡೆಸಲಾಗುತ್ತಿದೆ.

ಅಕ್ರಮ ಆಸ್ತಿ ಗಳಿಕೆಯ ಆರೋಪದ ಮೇಲೆ ಎಸ್‌ಪಿ ಅಶೋಕ್ ನೇತೃತ್ವದಲ್ಲಿ ಪಾಲಿಕೆ ಅಧಿಕಾರಿ ಗಂಗಾಧರಯ್ಯ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಒಬ್ಬರು ಎಸ್‌ಪಿ, ಇಬ್ಬರು ಡಿವೈಎಸ್‌ಪಿ ಹಾಗೂ ಇನ್ಸ್‌ಪೆಕ್ಟರ್ ಸೇರಿದಂತೆ 15 ಜನ ಲೋಕಾಯುಕ್ತ ಅಧಿಕಾರಿಗಳ ತಂಡ ಮುಂಜಾನೆ 5 ಗಂಟೆಗೆ ದಾಳಿ ನಡೆಸಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗಂಗಾಧರಯ್ಯ ಅವರು ಬಿಬಿಎಂಪಿ ಟೌನ್ ಪ್ಲಾನಿಂಗ್‌ನಲ್ಲಿ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ಗಂಗಾಧರಯ್ಯ ನಿವಾಸ, ಮನೆಯ ಆವರಣ, ಕಾರು ಸೇರಿದಂತೆ ಎಲ್ಲೆಡೆ ಪರಿಶೀಲನೆ ನಡೆಸುತ್ತಿದ್ದಾರೆ.

ದಾವಣಗೆರೆಯಲ್ಲಿ ಇಬ್ಬರು ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ನಿವೃತ್ತ ಡಿಸಿಎಫ್ ನಾಗರಾಜ್ ಅವರ ಶಿವಮೊಗ್ಗದ ಮನೆ ಮತ್ತು ಹೊಳಲ್ಕೆರೆ ತಹಶೀಲ್ದಾರ್ ನಾಗರಾಜ್ ಅವರ ಶಿಕಾರಿಪುರದಲ್ಲಿರುವ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಿ ಪರಿಶೀಲನೆ ಮಾಡಲಾಗುತ್ತಿದೆ.

ನಿವೃತ್ತ ಡಿಸಿಎಫ್ ನಾಗರಾಜ್ ಅವರ ದಾವಣಗೆರೆ ಜಿಲ್ಲೆಯ ಹೊನ್ನಾಳಿ ಬಳಿಯ ತೋಟದ ಮನೆಯ ಮೇಲೂ ದಾಳಿ ನಡೆದಿದೆ. ಇಬ್ಬರು ಅಧಿಕಾರಿಗಳ ಏಳು ಸ್ಥಳಗಳ ಮೇಲೆ ಏಕ ಕಾಲಕ್ಕೆ ರೇಡ್ ಆಗಿದೆ. ದಾವಣಗೆರೆ ಲೋಕಾಯುಕ್ತ ಎಸ್ಪಿ ಎಂಎಸ್ ಕೌಲಾಪುರೆ ನೇತೃತ್ವದಲ್ಲಿ ಇಪ್ಪತ್ತಕ್ಕೂ ಹೆಚ್ಚು ಅಧಿಕಾರಿಗಳಿಂದ ದಾಳಿ ನಡೆದಿದೆ.

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಯಾಗಿದ್ದ ಅಭ್ಯರ್ಥಿ ಕಾರಿಗೆ ಬೆಂಕಿ

ಕೋಲಾರ ಜಿಲ್ಲೆಯಲ್ಲೂ ಲೋಕಾಯುಕ್ತ ಅಧಿಕಾರಿಗಳ ದಾಳಿ ನಡೆದಿದೆ. ತಾಲೂಕು ಪಂಚಾಯಿತಿ ಇಒ ಎನ್​​ ವೆಂಕಟೇಶಪ್ಪಗೆ ಸೇರಿದ 5 ಮನೆಗಳ ಮೇಲೆ ರೇಡ್ ಆಗಿದೆ. ಬಂಗಾರಪೇಟೆ ಪಟ್ಟಣದ ಮೂರು ಕಡೆ ಹಾಗೂ ಮುಳಬಾಗಿಲು ತಾಲೂಕಿನ ತಿಪ್ಪದೊಡ್ಡಿ ಗ್ರಾಮದ ಎರಡು ಕಡೆ ಲೋಕಾಯುಕ್ತ ಎಸ್​​ಪಿ ಉಮೇಶ್ ನೇತೃತ್ವದಲ್ಲಿ ದಾಳಿ ನಡೆಸಿ ಪರಿಶೀಲನೆ ಮಾಡಲಾಗುತ್ತಿದೆ.

ವೆಂಕಟೇಶಪ್ಪ ಅವರು ಕಳೆದ 8 ವರ್ಷದಿಂದ ಬಂಗಾರಪೇಟೆ ತಾಲೂಕು ಪಂಚಾಯಿತಿ ಇಒ ಆಗಿ ಕೆಲಸ ಮಾಡುತ್ತಿದ್ದು ಎರಡು ದಿನಗಳ ಹಿಂದೆಯಷ್ಟೇ ಚಿಕ್ಕಬಳ್ಳಾಪುರ ಜಿಲ್ಲೆ‌ ಬಾಗೇಪಲ್ಲಿಗೆ ವರ್ಗಾವಣೆ ಆಗಿದ್ದರು.

ಚಿತ್ರದುರ್ಗ ಜಿಲ್ಲೆಯಲ್ಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು ಬೆಂಗಳೂರಿನ ಬಿಬಿಎಂಪಿ ಎಇಇ ಟಿ ಹನುಮಂತರಾಯ ಮನೆ ಮೇಲೆ ದಾಳಿ ನಡೆದಿದೆ.

ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಬೋಚಾಪುರ ಗ್ರಾಮದ ಬಳಿಯ ಫಾರ್ಮ್​ ಹೌಸ್ ಮೇಲೆ ಲೋಕಾಯುಕ್ತ ಎಸ್​ಪಿ ವಾಸುದೇವ ನೇತೃತ್ವದಲ್ಲಿ ದಾಳಿ ನಡೆಸಿ ಪರಿಶೀಲನೆ ಮಾಡಲಾಗುತ್ತಿದೆ.

ಬೀದರ್ ಜಿಲ್ಲೆಯ ಆರು ಕಡೆ ಲೋಕಾಯುಕ್ತ ಅಧಿಕಾರಿಗಳ ದಾಳಿ ನಡೆದಿದ್ದು, ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ನಡೆದಿದೆ.

ಬಸವಕಲ್ಯಾಣ ತಾಲೂಕಿನ ಮುಡಬಿಯ ಉಪ ತಹಶೀಲ್ದಾರ್​ ವಿಜಯಕುಮಾರ್​ ಸ್ವಾಮಿ ಮನೆಗಳ ಮೇಲೆ ದಾಳಿ ನಡೆದಿದೆ.

ಬೀದರ್​​ನ ಆನಂದ್ ನಗರ ಮನೆ, ಬಸವಕಲ್ಯಾಣದ ಮನೆ, ಕಚೇರಿ, ನಗರದ ಗ್ಯಾರೆಜ್ ಮೇಲೂ ದಾಳಿ ನಡೆಸಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಜೊತೆಗೆ ಸಣ್ಣ ನೀರಾವರಿ ಇಲಾಖೆ ಇಇ ಸುರೇಶ್ ಮೇದಾ​ ಅವರ ಬೀದರ್​ನ ಗುರುನಗರದ ಮನೆ, ನೌಬಾದ್​​ನ ಕಚೇರಿಯಲ್ಲಿ ಪರಿಶೀಲನೆ ನಡೆಯುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...