ಬೆಂ.ಗ್ರಾಮಾಂತರ | ಲಂಚ ಸ್ವೀಕಾರ; ಬೆಸ್ಕಾಂ ಎಇಇ, ಎಸ್‌ಒ ಲೋಕಾಯುಕ್ತ ಬಲೆಗೆ

Date:

ನೂತನ ಬಡಾವಣೆಗೆ ವಿದ್ಯುತ್‌ ಸಂಪರ್ಕ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಬೆಸ್ಕಾಂ ಎಇಇ ಮತ್ತು ಎಸ್‌ಒ ಗುರುವಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಬೆಂ.ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅವಲಹಳ್ಳಿ ಬೆಸ್ಕಾಂ ಎಇಇ ರಮೇಶ್‌ ಬಾಬು ಮತ್ತು ಎಸ್‌ ಒ ನಾಗೇಶ್‌ ಲೋಕಾಯುಕ್ತ ಬಲೆಗೆ ಬಿದ್ದಿರುವ ಅಧಿಕಾರಿಗಳು.

ಬೆಂ.ಗ್ರಾಮಾಂತರ ಜಿಲ್ಲೆಯ ಬೊಮ್ಮನಹಳ್ಳಿ ಗ್ರಾಮದ ಸರ್ವೆ ನಂ. 101/33, 149 ಜಮೀನಿನಲ್ಲಿ ನಿರ್ಮಾಣ ಮಾಡಿರುವ ಪಿ.ಮುತ್ತುಸ್ವಾಮಿ ಎಂಬುವರ ಬಡಾವಣೆಗೆ ವಿದ್ಯುತ್ ಸಂಪರ್ಕ ನೀಡಲು ಶ್ರೀ ಚಕ್ರ ಎಲೆಕ್ಟಿಕಲ್‌ನ ಸೀನಿಯರ್ ಮ್ಯಾನೇಜರ್ ವಿಜಯಕುಮಾರ್ ಎಂಬುವರ ಬಳಿ ಅವಲಹಳ್ಳಿ ಬೆಸ್ಕಾಂ ಎಇಇ ರಮೇಶ್‌ ಬಾಬು ಅವರು ಸೆಕ್ಷನ್‌ ಆಫೀಸರ್‌ ನಾಗೇಶ್‌ ಮೂಲಕ 16.50ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಕುರಿತು ವಿಜಯಕುಮಾರ್ ಅವರು ಬೆಂಗಳೂರು ಗ್ರಾಮಾಂತರ ಕರ್ನಾಟಕ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ದೂರಿನ ಹಿನ್ನೆಲೆ ಗುರುವಾರ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಬೊಮ್ಮೇನಹಳ್ಳಿಯ ನ್ಯೂ ರಾಯಲ್ ಪ್ರೆಷ್ ಮಾರ್ಟ್ ಬಳಿ ಎಸ್‌ಒ ನಾಗೇಶ್ ಲಂಚವನ್ನು ಪಡೆಯುವಾಗ ಹಣದ ಸಮೇತ ಬಂಧಿಸಿದ್ದಾರೆ. ಲಂಚ ನೀಡುವಂತೆ ತಿಳಿಸಿದ್ದ ಎಇಇ ರಮೇಶ್‌ ಬಾಬು ಅವರನ್ನೂ ಸಹ ದಸ್ತಗಿರಿ ಮಾಡಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈದಿನ ಸಂಪಾದಕೀಯ | ಮಳೆ ನಿರ್ವಹಣೆಗೆ ಬೇಕು 500 ವರ್ಷಗಳ ದೂರದೃಷ್ಟಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಅಧೀಕ್ಷಕ ಪವನ್ ನೆಟ್ಟೂರ್ ಮಾರ್ಗದರ್ಶನದಂತೆ ಪೊಲೀಸ್ ಇನ್ಸ್‌ಪೆಕ್ಟರ್ ರಮೇಶ್ ಹಾಗೂ ಸಿಬ್ಬಂದಿ ವರ್ಗದವರು ದಾಳಿಯಲ್ಲಿ ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...