ಬೀದರ್‌ | ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ : ಸ್ಥಳದಲ್ಲೇ ಓರ್ವ ಸಾವು

Date:

ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಬಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಹುಮನಾಬಾದ್‌ ಪಟ್ಟಣದ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ.

ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಔರಾದ ಗ್ರಾಮದ ಮಲ್ಲಯ್ಯಾ ಈರಯ್ಯಾ ಸ್ವಾಮಿ (33) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಗಾಯಗೊಂಡ ಬೈಕ್‌ ಚಾಲಕ ರಮೇಶ ದತ್ತು ಎಂಬುವರನ್ನು ಮಹಾಗಾಂವ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.

ಒಂದೇ ಗ್ರಾಮದವರಾದ ಇಬ್ಬರೂ ಹುಮನಾಬಾದ್‌ ಪಟ್ಟಣದಲ್ಲಿರುವ ಸ್ನೇಹಿತರನ್ನು ಭೇಟಿಯಾಗಿ ಸ್ವಗ್ರಾಮಕ್ಕೆ ತೆರಳುವ ವೇಳೆ ಘಟನೆ ಜರುಗಿದೆ. ಈ ಕುರಿತು ಹುಮನಾಬಾದ್‌ ಸಂಚಾರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...