ವಿಶ್ವ ಪರಿಸರ ದಿನಾಚರಣೆ ಹಿನ್ನೆಲೆ: ಬೆಂಗಳೂರಿನ ಲುಲು ಮಾಲ್‌ನಿಂದ ಪೌರ ಕಾರ್ಮಿಕರಿಗೆ ಸನ್ಮಾನ

Date:

ವಿಶ್ವ ಪರಿಸರ ದಿನಾಚರಣೆಯ ಹಿನ್ನೆಲೆಯಲ್ಲಿ ಬೆಂಗಳೂರಿನ ಲುಲು ಮಾಲ್ ವತಿಯಿಂದ ಪ್ರತಿನಿತ್ಯವೂ ನಮ್ಮ ಪರಿಸರವನ್ನು ಸ್ವಚ್ಛಗೊಳಿಸಿ, ಪರಿಸರವನ್ನು ಕಾಪಾಡುವ ಪೌರ ಕಾರ್ಮಿಕರನ್ನು ಸನ್ಮಾನಿಸಿ, ಗೌರವಿಸಲಾಯಿತು.

ಎಲೆಮರೆ ಕಾಯಿಯಂತಿರುವ ಪರಿಸರ ವೀರರನ್ನು ಸನ್ಮಾನಿಸುವ ಸಲುವಾಗಿ ಲುಲು ಮಾಲ್ ಬೆಂಗಳೂರು ವತಿಯಿಂದ 2025ರ ವಿಶ್ವ ಪರಿಸರ ದಿನವನ್ನು ಈ ಹೃದಯಸ್ಪರ್ಶಿ ಸನ್ಮಾನ ಸಮಾರಂಭದೊಂದಿಗೆ ಆಚರಿಸಿತು.

ಬೆಂಗಳೂರು ನಗರವನ್ನು ಸ್ವಚ್ಛವಾಗಿಡಿ, ನಗರವನ್ನು ಹಸಿರಾಗಿಡಿ ಎಂಬ ಘೋಷವಾಕ್ಯದೊಂದಿಗೆ ನಡೆದ ಕಾರ್ಯಕ್ರಮವು, ನಗರದ ಸ್ವಚ್ಛತೆ ಮತ್ತು ಸುಸ್ಥಿರತೆಯನ್ನು ಕಾಪಾಡುವಲ್ಲಿ ಪೌರ ಕಾರ್ಮಿಕರು ವಹಿಸುವ ಅನಿವಾರ್ಯ ಪಾತ್ರವನ್ನು ಉತ್ಸಾಹದಿಂದ ಗುರುತಿಸಿದ್ದು, ಹಸಿರು ದಳ ಮತ್ತು ಗ್ರೀನ್ ಮೈಕ್‌ನ ಬೆಂಬಲದೊಂದಿಗೆ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಮಾರಂಭದಲ್ಲಿ ಪರಿಸರವಾದಿಗಳು, ಸ್ಥಳೀಯ ಅಧಿಕಾರಿಗಳು, ಕಾರ್ಪೊರೇಟ್ ಪ್ರತಿನಿಧಿಗಳು ಮತ್ತು ಪೌರ ಕಾರ್ಮಿಕ ಸಮುದಾಯದ ಸದಸ್ಯರು ಭಾಗವಹಿಸಿದ್ದರು. ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿ “ವಾಲ್ ಆಫ್ ಫೇಮ್” ಎಂಬ ಶಾಶ್ವತ ಫಲಕವೊಂದನ್ನು ಉದ್ಘಾಟಿಸಲಾಯಿತು. ಈ “ವಾಲ್ ಆಫ್ ಫೇಮ್”ನಲ್ಲಿ ರಸ್ತೆಯನ್ನು ಶುಚಿಗೊಳಿಸುವ ಕಾರ್ಮಿಕರ ಕಥೆಗಳು, ಚಿಂತನೆಗಳು, ಅವರ ಹೋರಾಟಗಳು, ಸ್ಥಿರತೆ ಮತ್ತು ಬೆಂಗಳೂರಿನ ಕಸ ವಿಲೇವಾರಿಗೆ ನೀಡಿದ ಕೊಡುಗೆಗಳ ಬಗ್ಗೆ ವಿವರವುಳ್ಳದ್ದನ್ನು ಸಾರ್ವಜನಿಕರಿಗೆ ಪ್ರದರ್ಶಿಸಲಾಯಿತು.

ಇದನ್ನೂ ಓದಿದ್ದೀರಾ? ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ ಸಿಬ್ಬಂದಿ ಕೊರತೆ; ಸೇವಾ ಗುಣಮಟ್ಟ ಕುಂಠಿತ

ಕಾರ್ಯಕ್ರಮದಲ್ಲಿ 30ಕ್ಕೂ ಹೆಚ್ಚು ಪೌರಕಾರ್ಮಿಕರನ್ನು ಗುರುತಿಸಿ ಕಸ ವಿಂಗಡಣೆ, ಸಂಗ್ರಹಣೆ, ಮತ್ತು ಪುನರ್ಬಳಕೆಯಲ್ಲಿ ಅವರ ಮಾದರಿಯ ಸೇವೆಗಾಗಿ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಯಿತು.

lulu

ಈ ವೇಳೆ ಲುಲು ಮಾಲ್ ಬೆಂಗಳೂರಿನ ಜನರಲ್ ಮ್ಯಾನೇಜರ್ ಕಿರಣ್ ವಿ ಪುತ್ರನ್ ಮಾತನಾಡಿ, “ನಮ್ಮ ಬೆಂಗಳೂರಿಗಾಗಿ ಪೌರ ಕಾರ್ಮಿಕರ ಅವಿರತ ಕೆಲಸಕ್ಕೆ ಧನ್ಯವಾದ ಸಲ್ಲಿಸಲು ಮತ್ತು ಅವರನ್ನು ಸನ್ಮಾನಿಸಲು ಹರ್ಷಿಸುತ್ತೇನೆ. ಬೆಂಗಳೂರಿನ ಪರಿಸರಲ್ಲಿ ನಡೆಯುತ್ತಿರುವ ಬದಲಾವಣೆಗಳಲ್ಲಿ ಪೌರ ಕಾರ್ಮಿಕರ ಪಾತ್ರವೂ ಬಹಳ ಬದ್ಧತೆಯಿಂದ ಕೂಡಿದೆ. ಪೌರ ಕಾರ್ಮಿಕರ ಅಗತ್ಯಗಳಿಗಾಗಿ ಎಲ್ಲ ಕಾರ್ಪೊರೇಟ್‌ ಸಂಸ್ಥೆಗಳು ಮತ್ತು ವ್ಯಕ್ತಿಗಳು ಬೆಂಬಲ ನೀಡಬೇಕೆಂದು ವಿನಂತಿಸುತ್ತೇವೆ. ಏಕೆಂದರೆ ಅವರು ನಮ್ಮ ನಗರವನ್ನು ಸ್ವಚ್ಛವಾಗಿಯೂ ಮತ್ತು ಶುಚಿಯಾಗಿಡುವ ಬೆನ್ನೆಲುಬು” ಎಂದು ತಿಳಿಸಿದರು.

mall 1
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...