ಮದ್ದೂರು | ಸಂವಿಧಾನದ ಆಶಯಗಳ ಜಾರಿಗೆ ಕಟಿಬದ್ಧತೆಯಿಂದ ಶ್ರಮಿಸೋಣ: ಗ್ರಾ. ಪಂ. ಅಧ್ಯಕ್ಷೆ ಗೌರಮ್ಮ

Date:

ಸಂವಿಧಾನದ ಆಶಯಗಳ ಯಶಸ್ವಿ ಜಾರಿಗಾಗಿ ಕಟಿಬದ್ದತೆಯಿಂದ ಶ್ರಮಿಸುವ ಮೂಲಕ ಸಮಾನತೆ ಭಾತೃತ್ವಗಳ ಯಶಸ್ವಿ ಜಾರಿಯ ಮೂಲಕ ಸರ್ವಜನರ ಹಿತ ಕಾಯಬೇಕಾದ ಹೊಣೆ ಆಡಳಿತ ವರ್ಗಕ್ಕಿದೆ. ಅದಕ್ಕಾಗಿ ಕಟಿಬದ್ದತೆಯಿಂದ ಶ್ರಮಿಸೋಣ ಎಂದು ಗೊರವನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೌರಮ್ಮ ಕರೆ ನೀಡಿದರು.

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಗೊರವನಹಳ್ಳಿ‌ ಗ್ರಾಮ ಪಂಚಾಯಿತಿ ಹಾಗೂ ಅರಿವು ಕೇಂದ್ರ ಏರ್ಪಡಿಸಿದ್ದ ಸಂವಿಧಾನ ದಿನಾಚರಣೆ ವೇಳೆ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ‌ ಮಾಡಿ ಮಾತನಾಡಿದರು.

“ಸ್ವಾತಂತ್ರ್ಯ ಬಂದ ನಂತರ ಭಾರತ ತನ್ನದೇ ಸಂವಿಧಾನ ಹೊಂದುವ ಮೂಲಕ ಸರ್ವಜನಾಂಗದ ಹಿತಕ್ಕಾಗಿ ಶ್ರಮಿಸುತ್ತಿದೆ. ಇಂದು ಎಲ್ಲ ಜನರೂ ಮುಖ್ಯವಾಹಿನಿಗೆ ಬರಲು ಸಹಕಾರಿಯಾಗಿದೆ. ನವೆಂಬರ್ 26ರಂದು ಸಂವಿಧಾನ ಅಳವಡಿಕೆಗೆ ಚಾಲನೆ ಸಿಕ್ಕ ದಿನವಾಗಿದೆ. ಈ ದಿನವನ್ನು ಸಂವಿಧಾನ ದಿನವಾಗಿ ಆಚರಿಸಲಾಗುತ್ತಿದೆ. ಈ ದಿನದಂದು ಸಂವಿದಾನದ ಆಶಯ ಹಾಗೂ ಮೌಲ್ಯಗಳ ಕುರಿತು ಮನನ ಮಾಡಿಕ್ಕೊಳ್ಳುವ, ಗೌರವಿಸುವ ಮತ್ತು ಸಂವಿಧಾನದ ಯಶಸ್ವಿ ಜಾರಿಗಾಗಿ ಸಂಕಲ್ಪ ಬದ್ದರಾಗುವ ದಿನವಾಗಿದೆ” ಎಂದು ಪಿಡಿಒ ಪೂರ್ಣಿಮಾ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಮಂಡ್ಯ | ಎತ್ತಂಗಡಿ ಭೀತಿಯಲ್ಲಿ ತಮಿಳು ಕಾಲೋನಿ ನಿವಾಸಿಗಳು: ‘ಜಾಗ ಬಿಟ್ಟು ಕದಲಲ್ಲ’ ಎಂದ ಜನ

ಅರಿವು ಕೇಂದ್ರದ ಮಾಹಿತಿದಾರ ಚನ್ನಸಂದ್ರ ವಿವೇಕ್ ಮಾತನಾಡಿ, “ಇಂದಿನ ಮಕ್ಕಳು ಸಂವಿಧಾನ ಓದು ಹಾಗೂ ಅಧ್ಯಯನ ಮಾಡುವ ಮೂಲಕ ಜವಬ್ದಾರಿಯುತ ನಾಗರಿಕರಾಗಿ ರೂಪುಗೊಳ್ಳಬೇಕು” ಎಂದು ಸಲಹೆ ನೀಡಿದರು.

ಇದೇ ವೇಳೆ ಗೊರವನಹಳ್ಳಿ‌ ಸರ್ಕಾರಿ ಶಾಲೆಯ ಮಕ್ಕಳಿಗೆ ಸಂವಿಧಾನದ ಪೀಠಿಕೆ ಓದಿಸಿ ಸಂವಿಧಾನ ದಿನಾಚರಣೆಯನ್ನು ಆರ್ಥಪೂರ್ಣವಾಗಿ ಆಚರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...