ಮದ್ದೂರು | ರೈತರ ಬೆನ್ನೆಲುಬಾಗಿದ್ದ ಮಹಾನ್‌ ಚೇತನ ʼನಂಜುಂಡಸ್ವಾಮಿʼ: ರೈತ ಮುಖಂಡ ನಾಗರಾಜು

Date:

ʼರಾಜ್ಯ ರೈತ ಸಂಘವನ್ನು ಕಟ್ಟುವ ಮೂಲಕ ರೈತರಿಗೆ ಬೆನ್ನೆಲುಬಾಗಿ ನಿಂತ ಮಹಾನ್ ಚೇತನ ಪ್ರೊ. ಎಂ ಡಿ ನಂಜುಂಡಸ್ವಾಮಿಯವರುʼ ಎಂದು ರೈತ ಮುಖಂಡ ನಾಗರಾಜು ಅಭಿಪ್ರಾಯಪಟ್ಟರು.

ಮದ್ದೂರು ಪಟ್ಟಣದ ಟಿಎಪಿಸಿಎಂಎಸ್ ಹತ್ತಿರ ಇರುವ ಎಂ ಡಿ ನಂಜುಂಡಸ್ವಾಮಿಯವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, “ಸರ್ಕಾರದ ಅಧಿಕಾರಿಗಳು ರೈತರ ಸಾಲ ವಸೂಲಾತಿ ಮಾಡಲು ಮುಂದಾದ ಸಂದರ್ಭದಲ್ಲಿ ಸಾಲ ಕಟ್ಟದೆ ಇರುವವರ ಮನೆಯನ್ನು ಜಪ್ತಿ ಮಾಡದಂತೆ ಸಂವಿಧಾನ ಬದ್ಧವಾಗಿ ಕಾನೂನು ಹೋರಾಟ ರೂಪಿಸಿದವರು ನಂಜುಂಡಸ್ವಾಮಿಯವರು. ಅಧಿಕಾರಿಗಳು ರೈತರ ಮನೆ ಜಪ್ತಿ ಮಾಡದಂತೆ ಊರುಗಳಲ್ಲಿ ರೈತ ಸಂಘದ ಬೋರ್ಡ್ ಹಾಕಿಸಿ ರೈತರ ಅನುಮತಿ ಇಲ್ಲದೆ ಊರಿಗೆ ಪ್ರವೇಶವಿಲ್ಲ ಎನ್ನುವ ಬೋರ್ಡ್‌ ಹಾಕುವ ಮೂಲಕ ರೈತರಿಗೆ ಬೆಂಬಲವಾಗಿ ನಿಂತಿದ್ದರು. ಅವರ ಪ್ರತಿ ಮಾತು ರೈತರ ಪಾಲಿಕೆ ರಕ್ಷಣೆಯಂತಿರುತ್ತಿತ್ತು” ಎಂದರು.

ಈ ಸುದ್ದಿ ಓದಿದ್ದೀರಾ?: ಮದ್ದೂರು | ಕುವೆಂಪು ರಾಮಾಯಣದ ನೋವಿನ ಪಾತ್ರಗಳಿಗೆ ತಮ್ಮ ಕೃತಿಗಳ ಮೂಲಕ ಜೀವ ತುಂಬಿದರು : ಹೆಚ್.ಹನುಮಂತರಾಯಪ್ಪ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವೇಳೆ ಪುರಸಭಾ ಮಾಜಿ ಅಧ್ಯಕ್ಷ ಎಂ ಸಿ ಬಸವರಾಜು, ಶಿಕ್ಷಕ, ಸಾಹಿತಿ ಬಿ ವಿ ಹಳ್ಳಿ ನಾರಾಯಣ್, ಪ್ರಗತಿಪರ ಸಂಘಟಕ ಕೆ ಟಿ ಶಿವಕುಮಾರ್, ಸುಮುಖ ನಿಧಿ ಬ್ಯಾಂಕ್ ಅಧ್ಯಕ್ಷ ಕುಂದನ ಕುಪ್ಪೆ ಕುಮಾರ್, ಅಹಿಂದ ಸಂರಕ್ಷಣಾ ವೇದಿಕೆಯ ಸಂಘಟನಾ ಕಾರ್ಯದರ್ಶಿ
ಶಶಿ ಕುಮಾರ್ ಪಿ, ಶಿಕ್ಷಕ ರಾಮಲಿಂಗಯ್ಯ, ಸೋಮಶೇಖರ್,ರಾಚಯ್ಯ ಚಾಮನಹಳ್ಳಿ, ಜಯಂತಿ ಲಾಲ್ ಪಾಟೀಲ್, ಬಿ ಪಿ ಗೀರೀಶ್ಹಾ ಗೂ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...