ಮಧುಗಿರಿ | ದಲಿತನ ಭೀಕರ ಕೊಲೆ : ಸಮಗ್ರ ತನಿಖೆಗೆ ದಸಂಸ ಒತ್ತಾಯ

Date:

ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಹೋಬಳಿ ಪೋಲೆನಳ್ಳಿಯ ದಲಿತ ವ್ಯಕ್ತಿಯ ಭೀಕರ  ಕೊಲೆ ಪ್ರಕರಣವನ್ನು ಸಮಗ್ರ ತನಿಖೆ ನಡೆಸಿ   ಸೂಕ್ತ ನ್ಯಾಯ ದೊರಕಿಸಿಕೊಡಬೇಕೆಂದು ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಿ ಉಪವಿಭಾಗಾಧಿಕಾರಿ ಗೊಟೂರು ಶಿವಪ್ಪನವರಿಗೆ ಮನವಿ ಪತ್ರ ಸಲ್ಲಿಸಿದರು.

ಪೋಲೆನಹಳ್ಳಿ ಗ್ರಾಮದಲ್ಲಿ ನಡೆದಿರುವ ಮಾದಿಗ ಜನಾಂಗದ ವ್ಯಕ್ತಿಯನ್ನು ಅಮಾನುಷವಾಗಿ ವಾಹನ ಚಲಾಯಿಸಿ ಕೊಲೆ ಮಾಡಿದ್ದು, ಕುಟುಂಬದವರಿಂದ ಯಾವುದೆ ಮಾಹಿತಿ ಪಡೆಯದೆ ಎಫ್ ಐ ಆರ್ ದಾಖಲಿಸಿ, ಅನ್ಯಾಯ ಮಾಡಿದ್ದಾರೆ. ಹಾಗಾಗಿ ಸಮಗ್ರವಾಗಿ ತನಿಖೆ ನಡೆಸಿ ನ್ಯಾಯ ಕೊಡಿಸಬೇಕೆಂದು ಡಿಎಸ್ಎಸ್ ಸಂಘಟನೆಯ ಪದಾಧಿಕಾರಿಗಳು ಒತ್ತಾಯಿಸಿದರು.

ದಲಿತ ವ್ಯಕ್ತಿ ಕೊಲೆ ಸಂಬಂಧಿಸಿದಂತೆ ಯಾರೆ ಅಪರಾಧಿಗಳಾದರೂ ಅವರು ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ಸಚಿವ ಎನ್ ಮಹೇಶ್ ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಧುಗಿರಿ ಪಟ್ಟಣದ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದ ಸಮೀಪ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಮೃತಪಟ್ಟಿರುವ ಯುವಕನ ಕುಟುಂಬಕ್ಕೆ ಸರಕಾರದಿಂದ ದೊರೆಯಬಹುದಾದ ಸವಲತ್ತುಗಳನ್ನು ಅವರ ಕುಟುಂಬದವರಿಗೆ ಸಕಾಲಕ್ಕೆ ದೊರೆಯಬೇಕು.  ಹಾಗೂ ಮೃತನ ಪತ್ನಿಗೆ ಸರ್ಕಾರದಿಂದ ಉದ್ಯೋಗ ನೀಡಬೇಕು. ಪ್ರಕರಣದಲ್ಲಿ ಕೆಲವರ ಹೆಸರುಗಳು ಬಿಟ್ಟು ಹೋಗಿದ್ದು ಅವರುಗಳನ್ನು ಸೇರ್ಪಡೆ ಮಾಡಬೇಕೆಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಮಾಜಿ ಜಿಪಂ ಸದಸ್ಯ ಹೆಚ್ ಡಿ ಕೃಷ್ಣ ಪ್ಪ,ವಕೀಲ ನರಸಿಂಹಮೂರ್ತಿ, ದೊಡ್ಡೇರಿ ಕಣಿಮಯ್ಯ, ತೊಂಡೊಟಿ ರಾಮಾಂಜಿ,ರಾಧಕೃಷ್ಣ,ಎಂ.ವೈ ಶಿವಕುಮಾರ್,ಕದರಪ್ಪ,ರಂಗನಾಥ್,ನರಸೀಯಪ್ಪ, ಕೊರಟಗೆರೆ ನಾಗರಾಜು ಹಾಗೂ ಮತ್ತಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...