ಮಧುಗಿರಿ | ಜೀತ ವಿಮುಕ್ತರ ಪುನರ್ವಸತಿಗೆ ₹500 ಕೋಟಿ ಮೀಸಲಿಡಲು ಆಗ್ರಹ

Date:

ಜೀತ ವಿಮುಕ್ತರಿಗೆ ಸಮಗ್ರ ಪುನರ್ವಸತಿ ಕಲ್ಪಿಸಲು ಈ ಬಾರಿಯ ಬಜೆಟ್‌ನಲ್ಲಿ ಸುಮಾರು ₹500 ಕೋಟಿ ಅನುದಾನ ಮೀಸಲಿಡಬೇಕು ಎಂದು ಆಗ್ರಹಿಸಿ ಜೀವಿಕ ಸಂಘಟನೆಯು ಮಧುಗಿರಿ ಪಟ್ಟಣದ ಬೀದಿಗಳಲ್ಲಿ ಪ್ರತಿಭಟನೆ ನಡೆಸಿತು. ಜತೆಗೆ ಸಂಘಟನೆಯ ಪದಾಧಿಕಾರಿಗಳು ನಿನ್ನೆ ತಹಶೀಲ್ದಾರ್‌ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಸಂಘಟನೆಯ ಜಿಲ್ಲಾ ಸಂಚಾಲಕ ಡಿ. ಟಿ. ಸಂಜೀವಮೂರ್ತಿ ಮಾತನಾಡಿ, “ಜೀತ ವಿಮುಕ್ತರ ಶ್ರೇಯೋಭಿವೃದ್ಧಿಗೆ ಪ್ರತ್ಯೇಕ ನಿಗಮ ಸ್ಥಾಪಿಸಬೇಕು. 2017ರಿಂದ ಅರ್ಜಿ ಸಲ್ಲಿಸಿರುವ ಎಲ್ಲಾ ಜೀತದಾಳುಗಳಿಗೆ ಬಿಡುಗಡೆ ಪತ್ರ ನೀಡಬೇಕು. ಜೀತಮುಕ್ತರಿಗೆ ವಿಶೇಷ ಪ್ಯಾಕೇಜ್‌ ಘೋಷಿಸಬೇಕು. ಈ ಬಗ್ಗೆ ಜಿಲ್ಲಾಧಿಕಾರಿಗಳು ಕೂಡಲೇ ಜಾಗೃತಿ ಸಮಿತಿ ಸಭೆ ಕರೆದು ತೀರ್ಮಾನ ಕೈಗೊಳ್ಳಬೇಕು. ಜೀವಿಕ ಸಂಘಟನೆಗೆ ಪುರಸಭೆ ವತಿಯಿಂದ ನಿವೇಶನ ಮಂಜೂರು ಮಾಡಬೇಕು. ಸಾಗುವಳಿ ಮಾಡುತ್ತಿರುವ ಜೀತದಾಳುಗಳಿಗೆ ಸಾಗುವಳಿ ಚೀಟಿ ನೀಡಿ ಖಾತೆ ಮತ್ತು ಪಹಣಿ ನೀಡಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ?: ಮಧುಗಿರಿ | ಬೀದಿ ನಾಯಿ ದಾಳಿ; 43 ಕುರಿ ಸಾವು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿಭಟನೆಯಲ್ಲಿ ಸಂಘಟನೆಯ ತಾಲೂಕು ಸಂಚಾಲಕ ಹನುಮಂತರಾಯಪ್ಪ, ಒಕ್ಕೂಟದ ಅಧ್ಯಕ್ಷ ತಿಮ್ಮಯ್ಯ, ಕದರಪ್ಪ, ಶ್ಯಾಮಣ್ಣ, ನರಸಿಂಹಪ್ಪ, ಪಾವಗಡ ತಾಲೂಕು ಸಂಚಾಲಕ ನರಸಿಂಹಮೂರ್ತಿ, ಟಿ. ಗಂಗಾಧರಪ್ಪ, ಹನುಮಂತರಾಯ, ಸತೀಶ್‌ ಹಾಗೂ ಗಂಗಣ್ಣ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...