ಮಧುಗಿರಿ | ಬರಪೀಡಿತ ಪ್ರದೇಶ ಘೋಷಣೆಗೆ ರೈತ ಸಂಘ ಒತ್ತಾಯ

Date:

ಮುಂಗಾರು ವಿಫಲವಾಗಿದ್ದು ಕೃಷಿ ಭೂಮಿಯಲ್ಲಿ ಬಿತ್ತನೆಯಾಗದೆ ರೈತರು ಉದ್ಯೋಗ ಆರಿಸಿ ನಗರಕ್ಕೆ ವಲಸೆ ಹೋಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮಧುಗಿರಿ ತಾಲೂಕನ್ನು ಶಾಶ್ವತ ಬರಗಾಲ ಪೀಡಿತ ಪ್ರದೇಶ ಎಂದು ಘೋಷಿಸುವಂತೆ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಂಕರಪ್ಪ ಒತ್ತಾಯಿಸಿದರು

  ಮಧುಗಿರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ  ಮಾತನಾಡಿದ ಅವರು,  ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ ಹೇಮಾವತಿ ನೀರಿನ ಯೋಜನೆ ಅಡಿಯಲ್ಲಿ ಕನಿಷ್ಠ ಮೂರು ಟಿಎಂಸಿ ನೀರು ಹಂಚಿಕೆ ಮಾಡಿ ಕೊಡಬೇಕು.ಬೆಸ್ಕಾಂ ವತಿಯಿಂದ ಕಾನೂನು ಬಾಹಿರವಾಗಿ ಹೆಚ್ಚಿನ ಮೊತ್ತ ನಿಗದಿಪಡಿಸಿ ವಸೂಲಿ ಮಾಡುತ್ತಿದ್ದು ಅದನ್ನು ನಿಲ್ಲಿಸಿ ಹೆಚ್ಚುವರಿ ಬಿಲ್ ಹಣ ವಾಪಸ್ ನೀಡಬೇಕು.ಎತ್ತಿನಹೊಳೆ ಯೋಜನೆ ಅಡಿಯಲ್ಲಿ ಎರಡು ಟಿಎಂಸಿ ನೀರು ಹಂಚಿಕೆ ಮಾಡಬೇಕು ಎಂದು ಆಗ್ರಹಿಸಿದರು

ರೈತ ಸಂಘದ ವತಿಯಿಂದ ತಾಲೂಕಿನಲ್ಲಿ ಸದಸ್ಯತ್ವ ಅಭಿಯಾನ ನಡೆಸಲಾಗುತ್ತಿದೆ ಸದಸ್ಯರಾದವರಿಗೆ ಅಧ್ಯಯನ ಶಿಬಿರ ಹಮ್ಮಿಕೊಳ್ಳಲಾಗುವುದು ಎಂದರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

 ರೈತ ಸಂಘದ ಜಿಲ್ಲಾಧ್ಯಕ್ಷ ಎ. ಗೋವಿಂದರಾಜು ಮಾತನಾಡಿ ಜಿಲ್ಲೆಯ ಮೂರು ತಾಲೂಕುಗಳಲ್ಲಿ ಮಳೆಯ ಬಾವದಿಂದ ಹೆಚ್ಚು ಬಿತ್ತನೆ ಆಗಿಲ್ಲ ಆದ್ದರಿಂದ ಬರಗಾಲ ಕಾಮಗಾರಿ ಕೈಗೊಳ್ಳಬೇಕು ಮತ್ತು ಹೆಕ್ಟೇರ್ ಗೆ 20,000 ಪರಿಹಾರ ನೀಡಬೇಕು ಲಿಂಕ್ ಕೆನಾಲ್ ದೊಡ್ಡ ಪ್ರಮಾಣದಲ್ಲಿ ಕುಡಿಯುವ ನೀರಿನ ಯೋಜನೆ ಅಪಾಯವಿದೆ ಎಂದರು

 ಇದೇ  ಸಂದರ್ಭದಲ್ಲಿ ಮೃತರಾದ ರೈತರದ ಹನುಮಂತರಾಯಪ್ಪ ತಿರುಪತಪ್ಪ ರವರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು.

ರೈತ ಸಂಘದ ಸಂಘಟನಾ ಕಾರ್ಯದರ್ಶಿ ದೊಡ್ಡಮಾಳಯ್ಯತಾಲೂಕು ಅಧ್ಯಕ್ಷ ರಾಜಶೇಖರ್ ಜಿಲ್ಲಾ ಮಹಿಳಾ ಅಧ್ಯಕ್ಷೆ ನಾಗರತ್ನಮ್ಮ ಕಾರ್ಯದರ್ಶಿ ನಾಗರಾಜು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...