ಮಧುಗಿರಿ | ಗೃಹ ಸಚಿವರ ಕ್ಷೇತ್ರದಲ್ಲಿ ಮೂಲಭೂತ ಸೌಕರ್ಯ ಮರೀಚಿಕೆ : ಗ್ರಾಪಂಗೆ ಬೀಗ ಹಾಕಿ ಬಟ್ಟಗೆರೆ ಗ್ರಾಮಸ್ಥರ ಪ್ರತಿಭಟನೆ

Date:

 ಗ್ರಾಮದಲ್ಲಿ ಸುಮಾರು ವರ್ಷಗಳಿಂದ ಮೂಲಭೂತ ಸೌಕರ್ಯಗಳು ಮರೀಚಿಕೆಯಾಗಿದ್ದು ಈ ಬಗ್ಗೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಗಮನಕ್ಕೆ ತಂದರೂ ಯಾವುದೆ ಪ್ರಯೋಜನವಾಗಿಲ್ಲ ಎಂದು ಆರೋಪಿಸಿ ಬಟ್ಟಗೆರೆ ಗ್ರಾಮಸ್ಥರು ಕೊಂಡವಾಡಿ ಗ್ರಾಪಂಗೆ ಬೀಗ ಹಾಕಿ ಪ್ರತಿಭಟಿಸಿದರು.

ಮಧುಗಿರಿ ತಾಲೂಕಿನ ಕೊರಟಗೆರೆ ವಿಧಾನಸಭಾ ಕ್ಷೇತ್ರ ಮೀಸಲು ಕ್ಷೇತ್ರದ ಪುರವರ ಹೋಬಳಿಯ ಕೊಂಡವಾಡಿ ಗ್ರಾಪಂ ಮುಂಭಾಗದಲ್ಲಿ ಬಟ್ಟೆಗೆರೆ ಗ್ರಾಮಸ್ಥರು ಗ್ರಾಪಂಗೆ ಬೀಗ ಹಾಕಿ ಧರಣಿ ನಡೆಸಿದರು.

  ಗ್ರಾಮದಲ್ಲಿ  ಸೂಕ್ತ ಚರಂಡಿ, ರಸ್ತೆ ಹಾಗೂ ವಿದ್ಯುತ್ ಸಂಪರ್ಕವಿಲ್ಲದೆ ಭಟ್ಟಗೆರೆ ಗ್ರಾಮಸ್ಥರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಈ ಬಗ್ಗೆ ಸುಮಾರು ಬಾರಿ ಅರ್ಜಿ ನೀಡಿದರು ಅಧಿಕಾರಿಗಳು ಮೌನಕ್ಕೆ ಶರಣಾಗಿದ್ದಾರೆ ಎಂದು ಪ್ರತಿಭಟನಕಾರರು ಆರೋಪಿಸಿದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1001070023

ನರೇಗಾ ಯೋಜನೆ, 15 ನೇ ಹಣಕಾಸು, ಸ್ಥಳೀಯ ಹುಟ್ಟುವಳಿ ಆದಾಯವಿದ್ದರೂ ಅನುದಾನದ ಕೊರತೆಯ ನೆಪ್ಪವೊಡ್ಡುತಿದ್ದು ಗೃಹ ಸಚಿವರ ಕ್ಷೇತ್ರದಲ್ಲಿ ದಲಿತರಿಗೆ ಮೂಲ ಸೌಲಭ್ಯ ಕಲ್ಪಿಸುವಲ್ಲಿ ಇಲ್ಲಿನ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಕೆರಳಿದ ಗ್ರಾಮಸ್ಥರು ಗ್ರಾಪಂ ಆವರಣದಲ್ಲಿ ಬಿತ್ತಿ ಪತ್ರಗಳನ್ನು ಹಿಡಿದು ಪಿಡಿಒ, ಜನ ಪ್ರತಿನಿಧಿಗಳ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. 

ಗೃಹ ಸಚಿವರು ಪ್ರತಿನಿಧಿಸುವ ಮೀಸಲು ಕ್ಷೇತ್ರದಲ್ಲೇ ದಲಿತರ ಕೇರಿಗಳಲ್ಲಿ ಮೂಲಭೂತ ಸಮಸ್ಯೆಗಳು ಮರೀಚಿಕೆಯಾಗಿದ್ದು ಯಾರೊಬ್ಬ ಅಧಿಕಾರಿಯು ಈ ಬಗ್ಗೆ ಗಮನಹರಿಸುತ್ತಿಲ್ಲ. ಒಂದು ವಾರದೊಳಗೆ ಸಮಸ್ಯೆಗೆ ಪರಿಹಾರ ಸಿಗದಿದ್ದರೆ ಗ್ರಾಪಂ ಮುಂಭಾಗ ಅಹೋರಾತ್ರಿ ಧರಣಿ ಮಾಡುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದರು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಧರಣಿ ಕೈಬಿಡುವಂತೆ ಮನವೋಲಿಸಿದರು.

ಇದೇ ಸಂದರ್ಭದಲ್ಲಿ ಗ್ರಾಪಂ ಸದಸ್ಯ ವಿನಯ್ ಕುಮಾರ್, ರಾಮ ಹನುಮಯ್ಯ. ಶಿವಕುಮಾರ್, ಕೃಷ್ಣ, ಆನಂದ, ಪ್ರಸನ್ನ, ಲೋಕೇಶ್, ರಾಮಕೃಷ್ಣಪ್ಪ, ಪ್ರೇಮ, ಶಿವಣ್ಣ., ಹನುಮಂತರಾಜು, ಅನಿಲ್, ಲಕ್ಷ್ಮಿದೇವಮ್ಮ, ರಂಗಮ್ಮ, ರತ್ನಮ್ಮ, ಶಿರಿಷ ಅನ್ನಪೂರ್ಣ ಪಾರ್ವತಮ್ಮ, ಗಂಗಾದೇವಿ, ಸಾಕಮ್ಮ, ನರಸಮ್ಮ, ಶೋಭರಾಣಿ, ಸಾವಿತ್ರಮ್ಮ, ಕರಿಯಮ್ಮ, ರಾಧಮ್ಮ ಹಾಜರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...