ಮಧುಗಿರಿ | ಮಳೆಗೆ ಶಾಲಾ ಕೊಠಡಿ ಕುಸಿತ : ವಿದ್ಯಾರ್ಥಿಗಳು ಅಪಾಯದಿಂದ ಪಾರು!

Date:

ಇತ್ತೀಚಿಗೆ ಸುರಿದ ಭಾರಿ ಮಳೆಗೆ ಯಾಕರ‍್ಲಹಳ್ಳಿ ಗ್ರಾಮದ ಸರಕಾರಿ ಶಾಲೆಯ ಕೊಠಡಿ ಕುಸಿದು ಬಿದ್ದು ಅದೃಷ್ಟವಶಾತ್ ಶಾಲಾ ಮಕ್ಕಳ ದೂರವಿದ್ದ ಕಾರಣ ಭಾರಿ ಅನಾಹುತದಿಂದ ಪಾರಾಗಿದ್ದಾರೆ.

ಮಧುಗಿರಿ ತಾಲೂಕಿನ ಕೊಡಗೇನಹಳ್ಳಿ ಹೋಬಳಿಯ ಕಡಗತ್ತೂರು ಗ್ರಾಪಂ ವ್ಯಾಪ್ತಿಯ ಯಾಕರ‍್ಲಹಳ್ಳಿ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕೊಠಡಿ ಕುಸಿದಿದೆ. ಕೇವಲ 3 ಕೊಠಡಿಗಳಿದ್ದು ಇರುವ ಸೌಲಭ್ಯಗಳನ್ನು ಬಳಸಿಕೊಂಡು ಮಕ್ಕಳಿಗೆ ಶಿಕ್ಷಣ ನೀಡಲಾಗುತ್ತಿದೆ. ಸುಮಾರು 81 ಮಕ್ಕಳು ಶಿಕ್ಷಣ ಪಡೆಯುತಿದ್ದು ಇದರ ಜತೆ ಪೋಷಕರ ಸಹಕಾರದಿಂದ ಎಲ್‌ಕೆಜಿ ಶಿಕ್ಷಣವನ್ನು ನೀಡಲಾಗುತಿದ್ದು ಕೊಠಡಿ ಸಮಸ್ಯೆ ಬಗ್ಗೆ ಇಲಾಖೆ ವರದಿ ನೀಡಲಾಗುವುದು ಎಂದು ಮುಖ್ಯ ಶಿಕ್ಷಕ ಎಂ.ಆರ್ ನಾರಯಣಪ್ಪ ತಿಳಿಸಿದ್ದಾರೆ.

ಗ್ರಾಪಂ ಸದಸ್ಯ ನರಸೇಗೌಡ ಮಾತನಾಡಿ ಗ್ರಾಮದ ಶಾಲೆಯಲ್ಲಿ ಈಗಾಗಲೇ ಕೊಠಡಿ ಸಮಸ್ಯೆ ಇದ್ದು ಇದೀಗ ಮತ್ತೊಂದು ಕೊಠಡಿ ಕುಸಿದು ಬಿದಿದ್ದು ಇದರಿಂದ ಇದರ ಪಕ್ಕದ ಎರಡು ಕೊಠಡಿಗಳು ಡ್ಯಾಮೇಜ್ ಆಗಿವೆ, ಈ ಭಾಗದಲ್ಲಿ ತೀರ ಬಡವರ ಮಕ್ಕಳು ಶಿಕ್ಷಣ ಪಡೆಯುತಿದ್ದು ಶಿಕ್ಷಣ ಇಲಾಖೆ ಅಧಿಕಾರಿಗಳು ತುರ್ತಾಗಿ ಕೊಠಡಿ ಸಮಸ್ಯೆ ಪರಿಹಾರ ಮಾಡಬೇಕು ಎಂದು ಒತ್ತಾಯಿಸಿದರು..

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...