ಮಾದಿಗ ಸಮಾಜದ ಸಂಘಟನೆ ಶೈಕ್ಷಣಿಕ ಜಾಗೃತಿಗೆ ಒತ್ತು: ಕೃಷ್ಣಪ್ಪ

Date:

ಬಾಗೇಪಲ್ಲಿ:- ತುಳಿತಕ್ಕೊಳಗಾಗಿರುವ ಮಾದಿಗ ಸಮುದಾಯವನ್ನು ಸಂಘಟಿಸಿ, ಶಿಕ್ಷಣ ಜಾಗೃತಿ ಮೂಡಿಸಿ ಅವರು ಸಮಾಜದ ಮುಖ್ಯವಾಹಿನಿಯಲ್ಲಿ ಸ್ವಾಭಿಮಾನದಿಂದ ಬಾಳುವಂತೆ ಅರಿವು ಮೂಡಿಸುವ ಉದ್ದೇಶದಿಂದ ಹಳ್ಳಿ ಹಳ್ಳಿಗಳಿಗೂ ಹೋಗಿ ಸಮಾಜ ಬಾಂಧವರಿಗೆ ಮಾರ್ಗದರ್ಶನ ಮಾಡುವ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಕರ್ನಾಟಕ ಮಾದರ ಮಹಾಸಭಾದ ಜಿಲ್ಲಾಧ್ಯಕ್ಷ ಕೃಷ್ಣಪ್ಪ ಹೇಳಿದರು.

ಅವರು ಪಟ್ಟಣದ ಕಾರ್ಯನಿರತ ಪತ್ರಕರ್ತರ ಸಂಘದ ಭವನದಲ್ಲಿ ತಾಲ್ಲೂಕು ಮಾದರ ಮಹಾಸಭಾ ಪದಾಧಿಕಾರಿಗಳು ನೂತನ ಪಟ್ಟಿ ಬಿಡುಗಡೆ ಮಾಡಿ ಮಾತನಾಡಿ ತಾಲ್ಲೂಕು ಸಮಿತಿಯ ಪದಾಧಿಕಾರಿಗಳು ಎಲ್ಲ ಊರುಗಳಲ್ಲೂ ಪ್ರವಾಸ ಮಾಡಿ ಮಾಹಾಸಭಾದ ಆಶಯಗಳನ್ನು ತಿಳಿಸಿ ಸದಸ್ಯತ್ವ ಅಭಿಯಾನ ನಡೆಸಿ ಸಂಘಟಿಸಬೇಕು ಸಮುದಾಯದ ಸಮಸ್ಯೆಗಳಿಗೆ ಸ್ಪಂದಿಸಿ ಅವರಲ್ಲಿ ಶಿಕ್ಷಣದ ಅರಿವು ಮೂಡಿಸಿ ಇದು ಮಾಹಾಸಭಾದ ಆಶಯವಾಗಿದೆ ಎಂದರು.

ನೂತನ ಕರ್ನಾಟಕ ಮಾದರ ಮಹಾಸಭಾ ಅದ್ಯಕ್ಷ ಅ.ನಾ.ಮೂರ್ತಿ ಮಾತಮಾಡಿ ಇಡೀ ರಾಜ್ಯದಲ್ಲಿ ಹೋರಾಟದಲ್ಲಿ ಮುಂಚೂಣಿಯಲ್ಲಿರುವುದು ಮಾದಿಗ ಸಮುದಾಯ ಆ ನಿಟ್ಟಿನಲ್ಲಿ ಮಾದಿಗ ಸಮುದಾಯವನ್ನು ವ್ಯವಸ್ಥಿತವಾಗಿ ಆರ್ಥಿಕ, ಶೈಕ್ಷಣಿಕ ಹಾಗೂ ಸಾಮಾಜಿಕವಾಗಿ ಮುಂಚೂಣಿಗೆ ತರುವ ನಿಟ್ಟಿನಲ್ಲಿ ನಮ್ಮ ಸಮುದಾಯದ ರಾಜ್ಯ ನಾಯಕರಾದ ಕೆ. ಎಚ್. ಮುನಿಯಪ್ಪ, ನಾರಾಯಣಸ್ವಾಮಿ ಆಂಜನೇಯ ಗೋವಿಂದ ಕಾರಜೋಳ ಸೇರಿದಂತೆ ಸಮುದಾಯದ ಎಲ್ಲ ಮುಖಂಡರು ಪಕ್ಷಾತೀತವಾಗಿ ಒಗ್ಗಟ್ಟಿನಿಂದ ಸೇರಿ ಕರ್ನಾಟಕ ಮಾದರ ಮಹಾಸಭಾವನ್ನು ಕಟ್ಟಿ ಬೆಳೆಸಿದ್ದಾರೆ ಅವರ ಮಾರ್ಗದರ್ಶನದಲ್ಲಿ ಸಮುದಾಯವನ್ನು ಕಟ್ಟುವ ಕೆಲಸಕ್ಕೆ ಮಾಡುತ್ತೇನೆ ಸಮುದಾಯದ ಬಂಧುಗಳು ಒಕ್ಕೊರಲಿನಿಂದ ಸದಸ್ಯತ್ವ ತೆಗೆದುಕೊಳ್ಳುವ ಮೂಲಕ ಸಂಘವನ್ನು ಸದೃಢವನ್ನಾಗಿ ಮಾಡೋಣ ಎಂದು ಹೇಳಿದರು.

ಇದನ್ನು ಓದಿದ್ದೀರಾ..? ಅಪಘಾತ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪೊಲೀಸ್ ವಾಹನ

ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರಾದ ಎ.ವಿ. ಪೂಜಪ್ಪ,ಕಿರಣ್ ಕುಮಾರ್,ಬುಲೆಟ್ ಬಾಬು,ಚಿನ್ನಪೂಜಪ್ಪ, ಜೀವಿಕವ ನಾರಾಯಣ ಸ್ವಾಮಿ, ಎಲ್.ಎನ್.ನರಸಿಂಹಯ್ಯ,ನಾಗರಾಜು,ನಂದೀಶ ಹಾಗೂ ಕರ್ನಾಟಕ ಮಾದರ ಮಹಾಸಭಾ ಜಿಲ್ಲಾ ಹಾಗೂ ತಾಲ್ಲೂಕು ಪದಾಧಿಕಾರಿಗಳು ಹಾಜರಿದ್ದರು

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...