ಮಡಿಕೇರಿ | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ; ಬಿಜೆಪಿ ಅಹೋರಾತ್ರಿ ಧರಣಿ

Date:

ಕೊಡಗು ವಿಶ್ವವಿದ್ಯಾಲಯ ಮುಚ್ಚಬಾರದು, ಎಸ್‌ಸಿ/ಎಸ್‌ಟಿ ಸಮುದಾಯಗಳಿಗೆ ಮೀಸಲಿಟ್ಟ ಅನುದಾನವನ್ನು ಬೇರೆ ಯೋಜನೆಗಳಿಗೆ ದುರುಪಯೋಗಪಡಿಸಕೊಳ್ಳಬಾರದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಬಿಜೆಪಿ ಕೊಡಗು ಜಿಲ್ಲಾ ಘಟಕ ಅಹೋರಾತ್ರಿ ಧರಣಿ ನಡೆಸಿದೆ.

ನಿನ್ನೆ ರಾತ್ರಿ ಪ್ರತಿಭಟನಾ ಸ್ಥಳಕ್ಕೆ ಬಿಜೆಪಿ ನಾಯಕ ಪ್ರತಾಪ್‌ ಸಿಂಹ ಭೇಟಿ ನೀಡಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ವಿವಿಗಳನ್ನು ಆರಂಭಿಸಿದ್ದು ಬಿಜೆಪಿ ಸರ್ಕಾರ. ಇದೀಗ ಕಾಂಗ್ರೆಸ್‌ ಸರ್ಕಾರ ಅವುಗಳನ್ನು ಕಡೇಪಕ್ಷ ನಿರ್ವಹಣೆ ಮಾಡಲೂ ಆಗದೇ ಮುಚ್ಚಲು ಮುಂದಾಗಿರುವುದು ನಾಚಿಕೆಗೇಡಿನ ವಿಚಾರ ಎಂದರು.

ನಿನ್ನೆ ಪ್ರತಿಭಟನೆ ಆರಂಭವಾದಾಗ ಮಾತನಾಡಿದ ಮುಖಂಡ ಎಂ ಪಿ ಅಪ್ಪಚ್ಚುರಂಜನ್‌, “ವಿವಿ ಮುಚ್ಚಬಾರದು, ಎಸ್‌, ಎಸ್‌ಟಿ ಅನುದಾನ ದುರ್ಬಳಕೆ ಮಾಡಬಾರದು ಹಾಗೂ ಸರ್ಕಾರಿ ಸ್ವಾಮ್ಯದ ʼಸಿʼ & ʼಡಿʼ ಭೂಮಿಯನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸಬಾರದು.. ಈ ಮೂರು ಬೇಡಿಕೆಗಳನ್ನು ಕಡ್ಡಾಯವಾಗಿ ಈಡೇರಿಸಬೇಕು. ಇಲ್ಲದಿದ್ದರೆ ಇದೇ ಮಾ.11ರಂದು ಕೊಡಗು ಬಂದ್‌ ಮಾಡಲಾಗುವುದು. ಜತೆಗೆ ಡಿಸಿಎಂ ಡಿಕೆ ಶಿವಕುಮಾರ್‌ ಅವರ ಮನೆಗೆ ಮುತ್ತಿಗೆ ಹಾಕಿ ಪ್ರತಿಭಟಿಸಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಮಡಿಕೇರಿ | ಹೋರಾಟದಿಂದ ಹಿಂದೆ ಸರಿಯುವ ಪ್ರೆಶ್ನೆಯೇ ಇಲ್ಲ: ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಅಮೀನ್ ಮೊಹ್ಸಿನ್

ಪ್ರತಿಭಟನೆಯಲ್ಲಿ ಮುಖಂಡ ಸುನಿಲ್‌ ಸುಬ್ರಮಣಿ, ರಾಬಿನ್‌ ದೇವಯ್ಯ, ಮಹೇಶ್‌ ಜೈನಿ, ಡಾ. ನವೀನ್‌ ಕುಮಾರ್‌, ಉಮೇಶ್‌ ಸುಬ್ರಮಣಿ, ನೆಲ್ಲಿರ ಚೆಲನ್,‌ ರವಿ ಕುಶಾಲಪ್ಪ, ಸತೀಶ್‌, ಪಿಎಂ ರವಿ, ಅನಿತಾ ಪೂವಯ್ಯ, ಸಬಿತಾ ಸೇರಿದಂತೆ ಪಕ್ಷದ ಕಾರ್ಯಕರ್ತರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...