2025ರ ವಿ.ಕೃ ಗೋಕಾಕ್‌ ಪ್ರಶಸ್ತಿಗೆ ಸಾಹಿತಿ ಆನಂದ ಪಾಟೀಲ ಆಯ್ಕೆ

Date:

ಭಾರತೀಯ ವಿದ್ಯಾಭವನ ಮತ್ತು ಬೆಂಗಳೂರಿನ ವಿ. ಕೃ ಗೋಕಾಕ್ ವಾಜ್ಙಯ ಟ್ರಸ್ಟ್ ಬೆಂಗಳೂರು ಸಹಯೋಗದೊಂದಿಗೆ 2025ರ ವಿ.ಕೃ. ಗೋಕಾಕ್ ಪ್ರಶಸ್ತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿಯ ಬಾಲ ಸಾಹಿತ್ಯ ಪುರಸ್ಕೃತ ಮಕ್ಕಳ ಸಾಹಿತಿ ಆನಂದ ಪಾಟೀಲ ಅವರನ್ನು ಆಯ್ಕೆ ಮಾಡಿದೆ.

ವಿ. ಕೃ. ಗೋಕಾಕ್ ಟ್ರಸ್ಟ್ ಅಧ್ಯಕ್ಷ ಡಾ. ನರಹಳ್ಳಿ ಬಾಲಸುಬ್ರಹ್ಮಣ್ಯ, ಅನಿಲ್ ಗೋಕಾಕ್, ಸುನೀಲ್ ಗೋಕಾಕ್, ಪ್ರೊ. ನಾಗರಾಜ ಹೆಗಡೆ ಅಪಗಾಲ, ನಿಶಾ ಗೋಕಾಕ್, ಅಭಿನವ ರವಿಕುಮಾರ್ ಹಾಗೂ ಭಾರತೀಯ ವಿದ್ಯಾಭವನದ ನಿರ್ದೇಶಕ ಎಚ್. ಎನ್. ಸುರೇಶ್ ಅವರುಗಳಿದ್ದ ಪ್ರಶಸ್ತಿ ಆಯ್ಕೆ ಸಮಿತಿಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ವಿ.ಕೃ. ಗೋಕಾಕ್ ಪ್ರಶಸ್ತಿಯು 25,000 ನಗದು ಮತ್ತು ಫಲಕವನ್ನು ಒಳಗೊಂಡಿದೆ. ಸೆಪ್ಟೆಂಬರ್ 7ರಂದು ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿರುವ ಭಾರತೀಯ ವಿದ್ಯಾಭವನದ ಕೆಆರ್‌ ಸಭಾಂಗಣದಲ್ಲಿ ಬೆಳಗ್ಗೆ 10.30ಕ್ಕೆ ರಾಯಚೂರಿನ ಮಹರ್ಷಿ ಆದಿಕವಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ಕುಲಪತಿಗ ಪ್ರೊ. ಶಿವಾನಂದ ಕೆಳಗಿನಮನಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಡಾ. ನರಹಳ್ಳಿ ಬಾಲಸುಬ್ರಹ್ಮಣ್ಯ ಪ್ರಾಸ್ತಾವಿಕ ನುಡಿ, ಅಂಕೋಲದ ಕವಯಿತ್ರಿ ಶ್ರೀದೇವಿ ಕೆರೆಮನೆ ಅವರಿಂದ ಅಭಿನಂದನಾ ನುಡಿ, ಭಾರತೀಯ ವಿದ್ಯಾಭವನದ ಅಧ್ಯಕ್ಷರೂ ಆಗಿರುವ ಹಿರಿಯ ನ್ಯಾಯವಾದಿ ಕೆ ಜಿ ರಾಘವನ್ ಮುಖ್ಯ ಅತಿಥಿಗಳಾಗಿ ಭಾವಹಿಸಲಿದ್ದಾರೆ. ಟ್ರಸ್ಟಿನ ಗೌರವಾಧ್ಯಕ್ಷ ಉನಿಲ್ ಗೋಕಾಕ್ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಈ ಕುರಿತು ಭಾರತೀಯ ವಿದ್ಯಾಭವನದ ನಿರ್ದೇಶಕ ಎಚ್‌ ಎನ್‌ ಸುರೇಶ್‌ ಹಾಗೂ ಕಾರ್ಯದರ್ಶಿ ನ. ರವಿಕುಮಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಈ ದಿನ ಸಂಪಾದಕೀಯ | ಸದನದ ಘನತೆಯನ್ನು ಮಣ್ಣುಪಾಲು ಮಾಡಿದ ಮಹನೀಯರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...