ಉಡುಪಿ | ಮಹಾಲಕ್ಷ್ಮಿ ಕೋ-ಆಪರೇಟಿವ್ ಬ್ಯಾಂಕ್ ಅವ್ಯವಹಾರ: ಎಸ್‌ಐಟಿ ತನಿಖೆ ನಡೆಸಲು ಸಿಪಿಐಎಂ ಒತ್ತಾಯ

Date:

ಮಹಾಲಕ್ಷ್ಮಿ ಕೋ-ಆಪರೇಟಿವ್ ಬ್ಯಾಂಕ್‌ನ ಮಲ್ಪೆ ಶಾಖೆಯಲ್ಲಿ ಸಾಲ ನೀಡುವಿಕೆಯಲ್ಲಿ ಅವ್ಯವಹಾರ ನಡೆದಿದೆಯೆಂದು ಪತ್ರಿಕೆಗಳು ವರದಿ ಮಾಡಿದ್ದು ರಾಜ್ಯ ಸರಕಾರ ಮಧ್ಯ ಪ್ರವೇಶ ಮಾಡಿ ವಿಶೇಷ ತನಿಖಾ ತಂಡದ ಲಕ ತನಿಖೆ ನಡೆಸಬೇಕೆಂದು ಸಿಪಿಐ(ಎಂ) ಉಡುಪಿ ಜಿಲ್ಲಾ ಸಮಿತಿ ಆಗ್ರಹಿಸಿದೆ.

ಈ ಬಗ್ಗೆ ಹೇಳಿಕೆ ನೀಡಿರುವ ಸಿಪಿಐಎಂ ಮುಖಂಡರಾದ ಬಾಲಕೃಷ್ಣ ಶೆಟ್ಟಿ, 2023ರ ಮಾರ್ಚ್ ತಿಂಗಳಲ್ಲಿ ಮಲ್ಪೆ ಶಾಖೆಯ ಮ್ಯಾನೇಜರ್ ಆಗಿದ್ದ ಶ್ರೀ ಸುಬ್ಬಣ್ಣನವರು ಆತ್ಮಹತ್ಯೆ ಮಾಡಿಕೊಂಡ ಸಂದರ್ಭದಲ್ಲಿ ಅವರ ಅಣ್ಣ ಸುರೇಶ್ ಅವರು ಬ್ಯಾಂಕಿನ ಅಧ್ಯಕ್ಷ, ಶಾಸಕರಾದ ಯಶಪಾಲ್ ಸುವರ್ಣ ಅವರ ಮೇಲೆ ದೂರು ನೀಡಿದ್ದರು. ಆ ಸಂದರ್ಭದಲ್ಲೇ ತನಿಖೆ ನಡೆಸಬೇಕೆಂದು ಸಿಪಿಐ(ಎಂ) ಒತ್ತಾಯಿಸಿತ್ತು. ಆಗ ಆಡಳಿತದಲ್ಲಿದ್ದ ಬಿಜೆಪಿ ಯಾವುದೇ ಕ್ರಮ ತೆಗೆದುಕೊಂಡಿಲ್ಲ, ಮಾತ್ರವಲ್ಲ ಆಪಾದನೆಗೆ ಒಳಗಾದ ವ್ಯಕ್ತಿಗೇ ಉಡುಪಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಮಾಡಿತ್ತು” ಎಂದು ದೂರಿದ್ದಾರೆ.

ಈಗ ಸಾಲ ಪಡೆದವರು, ಕಡಿಮೆ ಸಾಲ ಪಡೆದು ಹೆಚ್ಚು ಸಾಲ ಪಡೆದಿದ್ದೀರಿ ಎಂದು ನೋಟಿಸ್‌ ಪಡೆದವರು ಸೇರಿದಂತೆ ನೂರಾರು ಜನರು ಬ್ಯಾಂಕಿಗೆ ದೂರು ನೀಡಿರುತ್ತಾರೆ. ಈ ಕುರಿತು ಆಣೆ, ಪ್ರಮಾಣ ಕೈಗೊಳ್ಳುವುದರ ಬದಲಾಗಿ ಸಮಗ್ರ ತನಿಖೆ ನಡೆಸಿ ಆರೋಪಿಗಳಿಗೆ ಶಿಕ್ಷೆ ನೀಡಬೇಕೆಂದು ಸಿಪಿಐ(ಎಂ) ಉಡುಪಿ ಜಿಲ್ಲಾ ಸಮಿತಿ ರಾಜ್ಯ ಸರಕಾರವನ್ನು ಆಗ್ರಹಿಸುತ್ತದೆ ಎಂದು ಬಾಲಕೃಷ್ಣ ಶೆಟ್ಟಿ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...