ಮಹಾಲಿಂಗಪುರ | ಟ್ರ್ಯಾಕ್ಟರ್‌ಗಳಿಗೆ ಬೆಂಕಿ ಹಚ್ಚಿದ್ದ ಸ್ಥಳಕ್ಕೆ ಸಚಿವರ ಭೇಟಿ; ಪರಿಹಾರದ ಭರವಸೆ

Date:

ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಸಮೀಪದ ಸೋಮಯ್ಯ ಸಕ್ಕರೆ ಕಾರ್ಖಾನೆಗೆ ಆಗಮಿಸುತ್ತಿದ್ದ ಮತ್ತು ಆವರಣದಲ್ಲಿ ನಿಂತಿದ್ದ ಟ್ರ್ಯಾಕ್ಟರ್‌ಗಳಿಗೆ ಕಿಡಿಗೇಡಿಗಳು ಗುರುವಾರ ಸಂಜೆ ಬೆಂಕಿ ಹಚ್ಚಿದ ಘಟನೆ ಸ್ಥಳಕ್ಕೆ ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪುರ ಭೇಟಿ ನೀಡಿ ರೈತರಿಗೆ ಸಾಂತ್ವನ ಹೇಳಿದರು. ಜತೆಗೆ ನಷ್ಟ ಅನುಭವಿಸುತ್ತಿರುವ ರೈತರಿಗೆ ಸರ್ಕಾರದಿಂದ ಪರಿಹಾರ ಕಲ್ಪಿಸುವುದಾಗಿ ಭರವಸೆ ನೀಡಿದರು.

ಭೇಟಿ ವೇಳೆ ಸಚಿವ ಶಿವಾನಂದ ಪಾಟೀಲ ಮಾತನಾಡಿ, “ಸಮೀರವಾಡಿ ಸಕ್ಕರೆ ಕಾರ್ಖಾನೆ ಆವರಣದಲ್ಲಿ ನಡೆದಿರುವ ಈ ಘಟನೆ ಬಗ್ಗೆ ಸರ್ಕಾರ ಸೂಕ್ತ ತನಿಖೆ ಮಾಡಲಿದೆ. ಇದು ರೈತರ ಹೆಸರಿನ ಮೇಲೆ ಕಿಡಿಗೇಡಿಗಳು ಮಾಡಿರುವ ಕೃತ್ಯ. ಹೀಗಾಗಿ ಹಾನಿಯಾದ ರೈತರಿಗೆ ಸರ್ಕಾರದಿಂದ ಪರಿಹಾರ ಸಿಗಲಿದೆ. ಜೊತೆಗೆ 7.30 ಕೋಟಿ ಮೆಟ್ರಿಕ್ ಟನ್ ಕಬ್ಬು ನುರಿಸಬೇಕಿದೆ. ಹೀಗಾಗಿ ರೈತರು ಸ್ವಯಂ ಪ್ರೇರಿತರಾಗಿ ಕಾರ್ಖಾನೆಗಳಿಗೆ ಕಬ್ಬು ಕಳುಹಿಸಬೇಕು. ಸಕ್ಕರೆ ಕಾರ್ಖಾನೆಗೆ ಸ್ವಲ್ಪ ಸಮಸ್ಯೆಯಾಗಿದೆ. ಅದಕ್ಕೆ ವಿಷಾದಿಸುತ್ತೇನೆ. ಯಾರೇ ತಪ್ಪು ಮಾಡಿದ್ದರೂ ಅವರ ಮೇಲೆ ಕ್ರಮವಾಗುತ್ತದೆ. ಆದ್ದರಿಂದ ಕಾರ್ಖಾನೆ ಮಾಲೀಕರು ಹಿಂಜರಿಯದೆ ಕಾರ್ಖಾನೆ ಆರಂಭಿಸಬೇಕು. ಈಗಾಗಲೇ ಮೂರು ಸಾವಿರದ ಮುನ್ನೂರು ಕೊಡಬೇಕೆಂದು ಆಗ್ರಹಿಸಿದ್ದರು. ಕಾರ್ಖಾನೆ ಮಾಲೀಕರು ಹಾಗೂ ರೈತರ ಮಧ್ಯೆ ಸಂಧಾನ ನಡೆಯುತ್ತಲೇ ಇದೆ. ರೈತರು ಕೊಬ್ಬು ಕಳಿಸ್ತೀವಿ ಎಂದು ಒಂದು ಕಡೆ ಹೇಳುತ್ತಾರೆ. ಇನ್ನೊಂದು ಕಡೆ ದರ ನಿಗದಿ ಮಾಡಿ ಕಾರ್ಖಾನೆ ಆರಂಭ ಮಾಡಿ ಎನ್ನುತ್ತಿದ್ದಾರೆ” ಎಂದು ತಿಳಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪುರ ಮಾತನಾಡಿ, “ನಾನು ಈಗಾಗಲೇ ನಾಲ್ಕು ಮೀಟಿಂಗ್ ಮಾಡಿದ್ದೇನೆ. ರೈತ ಹೋರಾಟಗಾರರು 3500 ಕೊಡಲೇಬೇಕು ಎಂದು ಆಗ್ರಹಿಸಿದರು. ರಿಕವರಿ ಬೇಡ, ಏಕರೂಪ ದರ ನಿಗದಿ ಮಾಡಿ ಎಂದರು. ಜೊತೆಗೆ 3250 ಒಮ್ಮೆ ಕೊಡಬೇಕು ಎಂದು ಬೇಡಿಕೆ ಇಟ್ಟರು. ಈ ಬಗ್ಗೆ ನಾನು ರೈತ ಹೋರಾಟಗಾರರು ಹಾಗೂ ಕಾರ್ಖಾನೆ ಮಾಲೀಕರೊಂದಿಗೆ ಮಾತನಾಡಿದ್ದೆ. ಅಷ್ಟರಲ್ಲಿ ಈ ದುರ್ಘಟನೆ ನಡೆದಿದೆ. ಕಾರ್ಖಾನೆಯವರು ಎಲ್ಲವನ್ನೂ ಕೊಡ್ತೀವಿ ಅಂದಾಗ ಈ ರೀತಿ ಆಗಿದ್ದು ವಿಷಾದಕರ ಸಂಗತಿ. ಕಬ್ಬಿಗೆ ಬೆಂಕಿ ಇಟ್ಟಿರುವುದು ಬಹಳ ನೋವಾಗಿದೆ. ಸರ್ಕಾರ ಇದನ್ನು ಗಮನಿಸುತ್ತೆ, ಕಾರ್ಖಾನೆ ಮಾಲೀಕರು ಹಾಗೂ ರೈತ ಮುಖಂಡರನ್ನು ಕರೆದು ಮಾತನಾಡುತ್ತೆ, ಇದು ಸರ್ಕಾರ ಹಾಗೂ ರೈತರ ಸಮಸ್ಯೆಯಲ್ಲ ಕಾರ್ಖಾನೆಗಳ ಮಾಲೀಕರು ಮತ್ತು ರೈತರ ಮಧ್ಯೆ ಇರುವ ಸಮಸ್ಯೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಬಾಗಲಕೋಟೆ | ಕಬ್ಬು ಬೆಳೆಗಾರ ಜೊತೆಗಿನ ಸಂಧಾನ ಯಶಸ್ವಿ, ಪ್ರತಿ ಟನ್‌ ಕಬ್ಬಿಗೆ 3,300 ರೂ. ನಿಗದಿ

“ನಮ್ಮ ಬೈಕ್, ಕಬ್ಬಿಗೆ ಹಾಗೂ ಟ್ರ್ಯಾಕ್ಟರ್‌, ಮತ್ತು ಇಂಜಿನ್ಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಹಾನಿಗೀಡಾದ ರೈತರು ಮತ್ತು ಮಾಲೀಕರಿಗೆ ಸೂಕ್ತ ಪರಿಹಾರ ಸರ್ಕಾರಿದಿಂದ ಒದಗಿಸಬೇಕು. ಮತ್ತು ಇಂತಹ ಘಟನೆಗಳು ಮರುಕಳಿಸದಂತೆ ಪೊಲೀಸ್ ಇಲಾಖೆ ಮುಂಜಾಗ್ರತಾ ಕ್ರಮ ವಹಿಸಬೇಕು” ರೈತ ಸಂಘಟನೆಯ ಪ್ರಮುಖರು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

“17 ಟ್ರ್ಯಾಕ್ಟರ್‌ಗಳಿಗೆ ಭಾಗಶಃ ಹಾನಿ, 12 ಟ್ರ್ಯಾಕ್ಟರ್ ಇಂಜಿನ್ ಭಾಗಶಃ ಹಾನಿ, ಒಂದು ಟ್ರ್ಯಾಕ್ಟರ್ ಇಂಜಿನ್ ಸಂಪೂರ್ಣ ಭಸ್ಮ, ಎಂಟು ದ್ವಿಚಕ್ರ ವಾಹನ ಭಾಗಶಃ ಹಾನಿ, ಒಂದು ಪೊಲೀಸ್ ವಾಹನ, 96 ಟ್ರೈಲರ್ ನಲ್ಲಿನ 1003 ಮೆಟ್ರಿಕ್ ಟನ್ ಕಬ್ಬು ಹಾನಿಗೊಳಗಾಗಿದೆ ಎಂದು ಅಂದಾಜಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...