ಕೊಡಗು | ಜಿಲ್ಲಾಡಳಿತದಿಂದ ಮಹಾವೀರ ಜಯಂತ್ಯುತ್ಸವ

Date:

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕೊಡಗು ಜಿಲ್ಲೆ, ಮಡಿಕೇರಿ ನಗರದ ಗಾಂಧಿ ಭವನದಲ್ಲಿ ಗುರುವಾರ ಭಗವಾನ್ ಮಹಾವೀರರ ಜಯಂತ್ಯುತ್ಸವ ಕಾರ್ಯಕ್ರಮಕ್ಕೆ ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ ಚಾಲನೆ ನೀಡಿ ‘ ಸಮಾಜದಲ್ಲಿ ಎಲ್ಲರೂ ಬದುಕಬೇಕು ಹಾಗೂ ಬದುಕಲು ಬಿಡಬೇಕು ‘ಎಂಬ ಭಗವಾನ್ ಮಹಾವೀರರ ಸಂದೇಶವನ್ನು ಅರಿತು ನಡೆಯಬೇಕು ಎಂದರು.

” ಭಗವಾನ್ ಮಹಾವೀರರು ಅಹಿಂಸಾ ಧರ್ಮದ ಪ್ರವರ್ತಕರಾಗಿದ್ದು, ಸನ್ಮತಿ, ವರ್ಧಮಾನ ಹಾಗೂ ವೀರ ಹೆಸರುಗಳಿಂದ ಮಹಾವೀರರನ್ನು ಕರೆಯುತ್ತಾರೆ. ಕ್ರಿ.ಪೂ.6 ನೇ ಶತಮಾನದಲ್ಲಿ ರಾಜಪುತ್ರನಾಗಿ ಜನಿಸಿದರೂ, ಜನ ಕಲ್ಯಾಣಕ್ಕಾಗಿ ರಾಜತ್ವವನ್ನೂ ತ್ಯಾಗಮಾಡಿ ಸಾಮಾನ್ಯರಲ್ಲಿ ಸಾಮಾನ್ಯರಾಗಿ ಜೀವನ ನಡೆಸಿದರು. ಸತ್ಯ, ಅಹಿಂಸೆ, ಅಪರಿಗ್ರಹ, ಅಸ್ತೇಯ‌ ಮತ್ತು ಬ್ರಹ್ಮಚರ್ಯ ಈ ಪಂಚ ವ್ರತಗಳ ಅನುಷ್ಠಾನದ ಅಡಿಪಾಯ ಹಾಕಿದರು.

ಅಹಿಂಸೆಯೇ ಪರಮ ಧರ್ಮ ಎಂಬುದು ದಿವ್ಯ ಮಂತ್ರವಾಗಿ ಅಳವಡಿಸಿಕೊಂಡಿದ್ದ ಮಹಾವೀರರು ಅದರಂತೆ ನಡೆದುಕೊಂಡರು ಪ್ರತಿಯೊಂದು ಜೀವಿಯೂ ಸಂತೋಷವಾಗಿರಲು ಬಯಸುತ್ತದೆ. ಯಾವುದೇ ಜೀವಿಯು ನೋವನ್ನು ಬಯಸುವುದಿಲ್ಲ ಎಂಬುದನ್ನ ಭಗವಾನ್ ಮಹಾವೀರರು ಪ್ರತಿಪಾದಿಸಿದ್ದಾರೆ ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶರಣ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಸ್. ಮೂರ್ತಿ ಅವರು ಮಾತನಾಡಿ ” ಪುಣ್ಯ ಭೂಮಿಯಲ್ಲಿ ಕಾಲದಿಂದ ಕಾಲಕ್ಕೆ ಅನೇಕ ಪುಣ್ಯರನ್ನು ಕಂಡ ಶ್ರೇಷ್ಠತೆ ಹೊಂದಿದೆ. ಇಂತಹ ನಾಡಿನಲ್ಲಿ ಆಗಿ ಹೋಗಿರುವ ಋಷಿ ಮುನಿಗಳು, ಶರಣರು, ಸಂತರು ಹಾಗೂ ಮಹನೀಯರ ಸಂದೇಶಗಳನ್ನು ಪಾಲನೆ ಮಾಡುವ ಮೂಲಕ ನಾಡನ್ನು ಇನ್ನಷ್ಟು ಪುಣ್ಯಮಯ ಗೊಳಿಸಬೇಕೆಂದು ಹೇಳಿದರು.

ಕ್ರಿ.ಪೂ.600 ರಲ್ಲಿ ಬೋಧಿಸಿದ ಮಹಾವೀರರ ತತ್ವಾದರ್ಶಗಳು ಹನ್ನೆರಡನೇ ಶತಮಾನದ ಸ್ಪೂರ್ತಿಯಾಗಿದ್ದರಿಂದಲೇ ಬಸವೇಶ್ವರರು ಕೂಡ ಶಾಂತಿ, ಸಮಾನತೆ ಹಾಗೂ ಅಹಿಂಸೆಯನ್ನೇ ಬೋಧಿಸಿದರು. ಉಸಿರಾಡುವಾಗ ಕಣ್ಣಿಗೆ ಕಾಣದ ಸೂಕ್ಷ್ಮಾಣು ಜೀವಿಗಳು ನಶಿಸಬಾರದು ಎಂದು ಬಾಯಿಗೆ ಬಟ್ಟೆ ಕಟ್ಟಿ ಉಸಿರಾಡಿದರು. ಸಂಪತ್ತಿನ ಕ್ರೋಢೀಕರಣ ವಿರೋಧಿಸಿದ ಜೈನ ಧರ್ಮೀಯರು, ಸತ್ಯಶೀಲವಾದ ಜೀವನಕ್ಕೆ ಆದ್ಯತೆ ಕೊಟ್ಟರು ” ಎಂದು ಹೇಳಿದರು.

ನಿವೃತ್ತ ಶಿಕ್ಷಕ ಬಿ.ಸಿ.ಶಂಕರಯ್ಯ ಮಾತನಾಡಿ ‘ ಮನುಷ್ಯರ ಜೀವನ ಉತ್ತಮವಾಗಲು ರತ್ನತ್ರಯಗಳಾದ ಸಮ್ಯಕ್ ದರ್ಶನ, ಸಮ್ಯಕ್ ಜ್ಞಾನ ಮತ್ತು ಸಮ್ಯಕ್ ಚಾರೊತ್ರ್ಯಗಳನ್ನು ಪಾಲಿಸಬೇಕು ‘ ಎಂದು ಸಲಹೆ ನೀಡಿದರು.

ಮದೆ ಮಹೇಶ್ವರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸಿದ್ದರಾಜು ಬೆಳ್ಳಯ್ಯ ಮಾತನಾಡಿ ‘ ಭಗವಾನ್ ಮಹಾವೀರರು ಮನುಷ್ಯನ ಸರಿಯಾದ ನಡವಳಿಕೆಗೆ ಹೆಚ್ಚು ಒತ್ತು ನೀಡಿದ್ದರು ‘ ಎಂದು ನುಡಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಜಿಲ್ಲೆಯ ಇಂದೂಧರ ಹೊನ್ನಾಪುರ, ಹರಿಹರ ಆನಂದ ಸ್ವಾಮಿ ಸೇರಿದಂತೆ 15 ಮಂದಿ ಸಾಧಕರಿಗೆ ‘ ಅಂಬೇಡ್ಕರ್ ಪ್ರಶಸ್ತಿ ‘

ಎಚ್.ಎಲ್. ದಿವಾಕರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ, ಬಿ.ಸಿ.ಶಂಕರಯ್ಯ, ಮಣಜೂರು ಮಂಜುನಾಥ್ ಸೇರಿದಂತೆ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...