ಉಡುಪಿ | ಬಿಜೆಪಿ ರಾಷ್ಟ್ರೀಯ ಮುಖಂಡರ ತೇಜೋವಧೆ ಆರೋಪ; ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ದೂರು ದಾಖಲು

Date:

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್‌ ರವರ ಬಗ್ಗೆ ಸಾಮಾಜಿಕ ತಾಣದಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿ ತೇಜೋವಧೆ ಮಾಡಿದ ಆರೋಪದ ಹಿನ್ನಲೆಯಲ್ಲಿ ಮಹೇಶ ಶೆಟ್ಟಿ ತಿಮರೋಡಿಯವರ ವಿರುದ್ಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಆಗಸ್ಟ್ 16 ರಂದು ಫೇಸ್ ಬುಕ್‌ ಪೇಜ್‌ ನಲ್ಲಿ ವೀಡಿಯೋ ಮಾಡಿ ಪಕ್ಷದ ಹಿರಿಯರು, ಹಿಂದೂ ಧರ್ಮದ ನಾಯಕನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಅವಹೇಳನ ಮಾಡಿ ಬೇರೆ ಬೇರೆ ಧರ್ಮಗಳ ಹಾಗೂ ಸಮುದಾಯದ ನಡುವೆ ವೈಮನಸ್ಸಿನ ದ್ವೇ಼ಷ ಭಾವನೆಯನ್ನು ಉಂಟು ಮಾಡಿರುವ ಮಹೇಶ ಶೆಟ್ಟಿ ತಿಮರೋಡಿಯ ವಿರುದ್ಧ ಕಾನೂನು ಕ್ರಮಕ್ಕಾಗಿ ರಾಜೀವ ಕುಲಾಲ್, ಉಡುಪಿ ಗ್ರಾಮಾಂತರ ಬಿಜಿಪಿಯ ಮಂಡಳಾಧ್ಯಕ್ಷರು ದೂರು ನೀಡಿದ್ದು, ಬ್ರಹ್ಮಾವರ ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 177/2025 US 196 (1),352, 353(2) BNSರಂತೆ ಆರೋಪಿ ಮಹೇಶ ಶೆಟ್ಟಿ ತಿಮರೋಡಿ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...