ಬೀದರ್‌ | ಮಹಮೂದ್ ಗವಾನ್ ಮದರಸಾ ದತ್ತು ಪಡೆದ ʼಶಾಹೀನ್‌ʼ

Date:

ಬೀದರ್‌ ನಗರದ ಐತಿಹಾಸಿಕ ಮಹಮೂದ್ ಗವಾನ್ ಮದರಸಾವನ್ನು ಇಲ್ಲಿನ ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹವು ದತ್ತು ಪಡೆದಿದೆ.

ಶಾಹೀನ್‌ ಶಿಕ್ಷಣ ಸಮೂಹದ ಅಧ್ಯಕ್ಷ ಡಾ.ಅಬ್ದುಲ್ ಖದೀರ್ ಅವರು ಈ ಕುರಿತು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ನಿರ್ದೇಶಕ ಜುಲ್ಫೇಕರ್‌ ಅಲಿ ಅವರೊಂದಿಗೆ ನವದೆಹಲಿಯಲ್ಲಿ ಒಡಂಬಡಿಕೆ ಮಾಡಿಕೊಂಡಿದ್ದಾರೆ. ಸಮೂಹವು ಮುಂದಿನ ಐದು ವರ್ಷಗಳ ಅವಧಿಗೆ ಸ್ಮಾರಕದ ನಿರ್ವಹಣೆ ನೋಡಿಕೊಂಡು ಹೊಸ ಕಳೆ ನೀಡಲಿದೆ.

ʼಶುದ್ಧ ಕುಡಿಯುವ ನೀರು, ಶೌಚಾಲಯ, ತ್ಯಾಜ್ಯ ನಿರ್ವಹಣೆ, ಶಿಶು ಪಾಲನಾ ಕೋಣೆಗಳು, ರ‍್ಯಾಂಪ್ ನಿರ್ಮಾಣ, ವಿದ್ಯುತ್ ಚಾಲಿತ ರಿಕ್ಷಾ, ಆಹಾರ ಮಳಿಗೆ, ದೀಪಾಲಂಕಾರ, ವಾಚನಾಲಯ, ಪ್ರಥಮ ಚಿಕಿತ್ಸಾ ಕೇಂದ್ರ, ಸಿಸಿಟಿವಿ ಕ್ಯಾಮೆರಾ, ವೈ-ಫೈ ಮೊದಲಾದ
ಸೌಲಭ್ಯಗಳನ್ನು ಒದಗಿಸಲಿದೆ. ಪ್ರವಾಸಿಗರಿಗೆ ಗವಾನ್ ಮದರಸಾದ ಇತಿಹಾಸವನ್ನು ವಿವರಿಸಲು ಗೈಡ್‍ಗಳನ್ನು‌ ಸಹ ನೇಮಕ ಮಾಡಿಕೊಳ್ಳಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಹಮೂದ್ ಗವಾನ್ ಮದರಸಾ ಹಿಂದೆ ವಿಶ್ವವಿದ್ಯಾಲಯ ಆಗಿತ್ತು. ದೇಶ, ವಿದೇಶದ ವಿದ್ಯಾರ್ಥಿಗಳು ಇಲ್ಲಿಗೆ ಅಧ್ಯಯನಕ್ಕೆ ಬರುತ್ತಿದ್ದರು. ಜಿಲ್ಲೆಯ ಐತಿಹಾಸಿಕ ಸ್ಮಾರಕವನ್ನು ಅಭಿವೃದ್ಧಿಪಡಿಸಲು ಸ್ಮಾರಕ ದತ್ತು ಯೋಜನೆಯಡಿ ದತ್ತು ತೆಗೆದುಕೊಂಡಿದೆ. ಸಂಘ-ಸಂಸ್ಥೆ ಹಾಗೂ ಸಾರ್ವಜನಿಕರು ಕಲೆ, ಇತಿಹಾಸ, ಪರಂಪರೆಯ ಹೆಗ್ಗುರುತು ಆಗಿರುವ ಜಿಲ್ಲೆಯ ಸ್ಮಾರಕಗಳ ಸಂರಕ್ಷಣೆ ಹಾಗೂ ಅಭಿವೃದ್ಧಿಗೆ ಸರ್ಕಾರದೊಂದಿಗೆ ಕೈಜೋಡಿಸಬೇಕಿದೆʼ ಎಂದು ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಡಾ. ಅಬ್ದುಲ್ ಖದೀರ್ ತಿಳಿಸಿದರು.

MAHMUD GAWAN MADRASA 1
ಬೀದರ್‌ನಲ್ಲಿರುವ ಮಹಮೂದ್ ಗವಾನ್ ಮದರಸಾ ವಿಶ್ವವಿದ್ಯಾಲಯ

ʼಜಿಲ್ಲೆಯಲ್ಲಿ ಇರುವಷ್ಟು ಐತಿಹಾಸಿಕ ಮಹತ್ವದ ಸ್ಮಾರಕಗಳು ಸುತ್ತಮುತ್ತಲಿನ ಪ್ರದೇಶದಲ್ಲಿ ಇಲ್ಲ. ಆದರೂ, ಅವುಗಳಿಗೆ ಪ್ರಾಮುಖ್ಯತೆ ನೀಡುವ ಕೆಲಸ ಅಷ್ಟಾಗಿ ಆಗಿಲ್ಲ. ಹರ್ಷಗುಪ್ತಾ ಜಿಲ್ಲಾಧಿಕಾರಿಯಾಗಿದ್ದ ಅವಧಿಯಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸುವ ಕಾರ್ಯಗಳು ಆಗಿದ್ದವು. ಇದೀಗ ಮತ್ತೆ ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸುವ ದಿಸೆಯಲ್ಲಿ ಚಟುವಟಿಕೆಗಳು ನಡೆಯುತ್ತಿವೆʼ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ವಿಪುಲ ಅವಕಾಶಗಳು ಇವೆ. ಪ್ರವಾಸೋದ್ಯಮ ಬೆಳೆದರೆ ಜಿಲ್ಲೆಯ ಅಭಿವೃದ್ಧಿಗೆ ಅನುಕೂಲವಾಗಲಿದೆʼ ಎಂದು ತಿಳಿಸಿದರು.

14ನೇ ಶತಮಾನದ ಪ್ರಮುಖ ಶಿಕ್ಷಣ ಕೇಂದ್ರ :

ಬಹಮನಿ ರಾಜವಂಶರ ಪ್ರಧಾನಿ ಆಗಿದ್ದ ಮಹಮೂದ್ ಗವಾನ್ ಅವರು 1472 ರಲ್ಲಿ ಕಟ್ಟಿಸಿದ ಮದರಸಾ ಆ ಕಾಲದಲ್ಲಿ ಪ್ರಸಿದ್ಧ ಶಿಕ್ಷಣ ಕೇಂದ್ರವಾಗಿತ್ತು. ಇಲ್ಲಿ ಒಂದು ಸಾವಿರ ವಿದ್ಯಾರ್ಥಿಗಳ ಅಧ್ಯಯನಕ್ಕೆ ಅವಕಾಶ ಇತ್ತು. ಅರೇಬಿಕ್ ಹಾಗೂ ಪರ್ಷಿಯನ್ ಭಾಷೆಗಳಲ್ಲಿ ದೇವತಾಶಾಸ್ತ್ರ, ತತ್ವಶಾಸ್ತ್ರ, ಖಗೋಳಶಾಸ್ತ್ರ, ಗಣಿತಶಾಸ್ತ್ರ ಶಿಕ್ಷಣ ನೀಡಲಾಗುತ್ತಿತ್ತು. ಮದರಸಾ 3,000 ಪುಸ್ತಕಗಳ ಗ್ರಂಥಾಲಯ ಹೊಂದಿತ್ತು. ಪ್ರಾರ್ಥನಾ ಸ್ಥಳ, ಉಪನ್ಯಾಸ ಸಭಾಂಗಣ, ಪ್ರಾಧ್ಯಾಪಕರು, ವಿದ್ಯಾರ್ಥಿಗಳ ವಸತಿ ಗೃಹಗಳು ಸೇರಿ ವಿವಿಧ ವ್ಯವಸ್ಥೆಗಳು ಹೊಂದಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...