ಉಡುಪಿ ಜಿಲ್ಲೆಯ ಕುಂದಾಪುರದ ಬೀದಿ ವ್ಯಾಪಾರಿಗಳಿಗೆ ಆಗುತ್ತಿರುವ ತೊಂದರೆಗಳ ಕುರಿತು ಕಾಂಗ್ರೆಸ್ ನಾಯಕ ಮೊಳಹಳ್ಳಿ ದಿನೇಶ್ ಹೆಗ್ಡೆ ಅವರು ಪೌರಾಡಳಿತ ಸಚಿವ ರಹಿಂ ಖಾನ್ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ ಸಮಸ್ಯೆಗಳ ಕುರಿತು ಚರ್ಚಿಸಿದರು.
ಬೀದಿ ವ್ಯಾಪಾರಿಗಳು ತಮ್ಮ ಜೀವನೋಪಾಯ ಕಳೆದುಕೊಳ್ಳದಂತೆ, ಅವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕೆಂದು ದಿನೇಶ್ ಹೆಗ್ಡೆ ಅವರು ಸಚಿವರಿಗೆ ಮನವಿ ಮಾಡಿದರು.
ಮನವಿಯನ್ನು ಗಂಭೀರವಾಗಿ ಪರಿಗಣಿಸಿದ ಸಚಿವ ರಹಿಂ ಖಾನ್, ಕುಂದಾಪುರ ಪುರಸಭೆ ಮುಖ್ಯಾಧಿಕಾರಿ ಆನಂದ ಜೆ ಅವರಿಗೆ ದೂರವಾಣಿ ಮೂಲಕ ನೇರವಾಗಿ ಸೂಚನೆ ನೀಡಿ, ಬೀದಿ ವ್ಯಾಪಾರಿಗಳ ಸಮಸ್ಯೆಯನ್ನು ಶೀಘ್ರ ಬಗೆಹರಿಸಲು ಮತ್ತು ಪರ್ಯಾಯ ವ್ಯವಸ್ಥೆ ಕಲ್ಪಿಸಲು ಖಡಕ್ ಎಚ್ಚರಿಕೆ ನೀಡಿದರು.
ಸಚಿವರ ತಕ್ಷಣದ ಪ್ರತಿಕ್ರಿಯೆಯಿಂದ ಬೀದಿ ವ್ಯಾಪಾರಿಗಳಿಗೆ ಹೊಸ ನಿರೀಕ್ಷೆ ಮೂಡಿದ್ದು ಸ್ಥಳೀಯರು ಸಂತೋಷ ವ್ಯಕ್ತಪಡಿಸಿದ್ದಾರೆ.





