ರಾಯಚೂರು | ಒಳಮೀಸಲಾತಿ ಜಾರಿಗೆ ಮಲ್ಲಿಕಾರ್ಜುನ್ ಖರ್ಗೆ ಅಡ್ಡಿ ಆರೋಪ ಸುಳ್ಳು : ಶಿವರಾಜ್ ಜಾನೇಕಲ್

Date:

ಪರಿಶಿಷ್ಟ ಜಾತಿಗಳ ಒಳ ಮೀಸಲಾತಿಗೆ ಛಲವಾದಿ ಸಮಾಜ ಹಾಗೂ ಮುಖಂಡರ ಯಾರ ವಿರೋಧವೂ ಇಲ್ಲ. ಎಐಸಿಸಿ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆಯವರು ಸಹ ವಿರೋಧಿಸುತ್ತಿಲ್ಲ. ಕೆಲವರು ವೈಯಕ್ತಿಕವಾಗಿ ವಿರೋಧಿಸುವುದು ಸರಿಯಾದ ಬೆಳವಣಿಗೆಯಲ್ಲ ಎಂದು ಛಲವಾದಿ ಮಹಾಸಭಾದ ಅಧ್ಯಕ್ಷ ಶಿವರಾಜ ಜಾನೇಕಲ್ ಹೇಳಿದರು.

ರಾಯಚೂರು ಪ್ರೆಸ್ ಕ್ಲಬ್‌ನಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿ, ಇತ್ತೀಚಿಗೆ ಮಾದಿಗ ಸಮಾಜದ ಮುಖಂಡರುಗಳು ಒಳಮೀಸಲಾತಿಗೆ ಮಲ್ಲಿಕಾರ್ಜುನ‌ ಖರ್ಗೆಯವರು ಅಡ್ಡಿಯಾಗಿದ್ದಾರೆ ಎಂದು ಆರೋಪಿಸುತ್ತಿದ್ದಾರೆ. ಅವರೆಲ್ಲಿಯೂ ಒಳ ಮೀಸಲಾತಿ ವಿರೋಧಿಸಿ ಹೇಳಿಕೆ ನೀಡಿಲ್ಲ. ಅಲ್ಲದೇ, ಅಡ್ಡಿಯೂ ಆಗಿಲ್ಲ. ಪದೇ ಪದೇ ಟೀಕೆ ಮಾಡುತ್ತಿರುವುದು ಸರಿಯಲ್ಲ ಎಂದರು.

ಸದಾಶಿವ ಆಯೋಗದ ವರದಿಯಲ್ಲಿ ಆದಿ ದ್ರಾವಿಡ ಮತ್ತು ಆದಿ ಕರ್ನಾಟಕ ಉಪ ಜಾತಿಗಳು, ಮಾದಿಗ ಮತ್ತು ಛಲವಾದಿ ಸಮಾಜಗಳಲ್ಲಿವೆ. ಉಪಜಾತಿ ಜನರನ್ನು ಯಾವ ಜಾತಿಗೆ ಸೇರಿಸಲಾಗುತ್ತದೆ ಎಂದು ಸ್ಪಷ್ಟನೆ ಕೋರಿ ಪತ್ರ ಬರೆಯಲಾಗಿದೆಯೇ ಹೊರತು ಒಳ ಮೀಸಲಾತಿಗೆ ವಿರೋಧಿಸಿಲ್ಲ. ಸುಪ್ರಿಂ ಕೋರ್ಟಿನ ತೀರ್ಪು ಜಾರಿಗೊಳಿಸುವುದು ರಾಜ್ಯ ಸರ್ಕಾರದ ನಿರ್ಧಾರವಾಗಿದೆ. ಮಲ್ಲಿಕಾರ್ಜುನ ಖರ್ಗೆಯವರವಾಗಲಿ, ಇತರೆ ಛಲವಾದಿ ಸಮಾಜದ ಮುಖಂಡರು ತಡೆಯುವ ಪ್ರಯತ್ನವೂ ಮಾಡಿಲ್ಲ. ಸುಳ್ಳು ಆರೋಪ ಮಾಡುವುದರಿಂದ ಸಮಾಜದಲ್ಲಿಯೇ ಬಿರುಕು ಮೂಡಿಸಲು ಕಾರಣವಾಗುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಹಾಸಭಾ ಮಾಜಿ ಅಧ್ಯಕ್ಷ ಜಗನ್ನಾಥ ಸುಂಕಾರಿ ಮಾತನಾಡಿ, ಕಳೆದ 3 ವರ್ಷಗಳಿಂದ ನ್ಯಾಯಮೂರ್ತಿ ಸದಾಶಿವ ಆಯೋಗ ವರದಿ ಜಾರಿಗೆ ಮಾದಿಗ ಸಮುದಾಯದೊಂದಿಗೆ ಛಲವಾದಿ ಸಮಾಜವೂ ಒತ್ತಾಯಿಸುತ್ತಲೇ ಬಂದಿದೆ. ಜನಸಂಖ್ಯೆಯಲ್ಲಿ ಆಗುವ ವ್ಯತ್ಯಾಸ ಮೀಸಲಾತಿ ಹಂಚಿಕೆ ಮೇಲೂ ಆಗುವ ಆತಂಕದಿಂದ ಸ್ಪಷ್ಟನೆ ಕೋರಲಾಗಿದೆಯೇ ಹೊರತು ಒಳ ಮೀಸಲಾತಿ ಜಾರಿಗೆ ವಿರೋಧಿಸಿಲ್ಲ ಎಂದು ಸ್ಪಷ್ಟಪಡಿಸಿದರು.

ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರು ಮೀಸಲಾತಿ ಜಾರಿಗೆ ಬಗ್ಗೆ ಹೇಳಿಕೆ, ಇನ್ನಿತರ ಅಡ್ಡಿಯಾಗಿಲ್ಲ. ಮಾದಿಗ ಸಮಾಜದ ಜೊತೆಯಲ್ಲಿ ಛಲವಾದಿ ಸಮಾಜವು ರಾಜ್ಯದಲ್ಲಿ ಹೋರಾಟದೊಂದಿಗೆ ಬೆಂಬಲಿಸುತ್ತಾ, ನಿರಂತರ ಕೈ ಜೋಡಿಸಿ ಬೆಂಬಲವಾಗಿದ್ದೇವೆ ಎಂದರು.

ಸುಪ್ರಿಂ ಕೋರ್ಟ್ ತೀರ್ಮಾನದಂತೆಯೇ ಖಚಿತ ಜನಸಂಖ್ಯೆ ಮಾಹಿತಿಯ ಆಧಾರದ ಮೇಲೆ ಸರ್ಕಾರ ನಿರ್ಧಾರ ಕೈಗೊಳ್ಳಬೇಕಿದೆ. ಆಯೋಗದಲ್ಲಿರುವ ಗೊಂದಲ ನಿವಾರಿಸಲು ಕೇಳಲಾಗಿದೆ ಹೊರತು ಜಾರಿಗೆ ವಿರೋಧವಿಲ್ಲ. ಜನರಲ್ಲಿ ತಪ್ಪು ಅಭಿಪ್ರಾಯ ಮೂಡಿಸುವ ಕೆಲಸವಾಗಬಾರದು ಎಂದು ಶಿವರಾಜ್ ಹೇಳಿದರು.

ಈ ಸಂದರ್ಭದಲ್ಲಿ ಮಹಾಸಭಾ ಪ್ರಧಾನ ಕಾರ್ಯದರ್ಶಿ ತಮ್ಮಣ್ಣ ವಕೀಲ, ಶಿವುಕಮಾರ ಜೆ.ಹನುಮಾಪುರು, ಮಧುಕಾಂತ, ಮಧುಕಾಂತ, ಸಚ್ಚಿದಾನಂದ, ನರಸಿಂಹ ಇನ್ನಿತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...